For Quick Alerts
ALLOW NOTIFICATIONS  
For Daily Alerts
 

ಭಾರತ vs ದ. ಆಫ್ರಿಕಾ: 2ನೇ ದಿನ ಶಾರ್ದೂಲ್ ಆರ್ಭಟ; ಅಲ್ಪ ಮುನ್ನಡೆ ಸಾಧಿಸಿದ ಹರಿಣಗಳು: ಹೈಲೈಟ್ಸ್

India vs South Africa: 2nd test Day 2, Highlights, Johannesburg

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಎರಡನೇ ದಿನದಾಟ ಅಂತ್ಯವಾಗಿದೆ. ದಿನದಂತ್ಯಕ್ಕೆ ಭಾರತ ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ನಡೆಸುತ್ತಿದ್ದು 85 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಮೂರನೇ ದಿನಕ್ಕೆ ಆಟವನ್ನು ಮುಂದುವರಿಸಲಿದೆ. ಟೀಮ್ ಇಂಡಿಯಾ ಪರವಾಗಿ ಕ್ರೀಸ್‌ನಲ್ಲಿ ಅನುಭವಿ ಆಟಗಾರರಾದ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯಾ ರಹಾನೆ ಮೂರನೇ ದಿನದಾಟ ಆರಂಭಿಸಲಿದ್ದಾರೆ. ಚೇತೇಶ್ವರ್ ಪೂಜಾರ ಅಜೇಯ 35 ರನ್‌ಗಳಿಸಿದ್ದಾರೆ ಅಜಿಂಕ್ಯಾ ರಹಾನೆ 11 ರನ್‌ಗಳಿಸಿ ಅಜೇಯವಾಗುಳಿದಿದ್ದಾರೆ.

ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಆರಂಭಿಕರಿಬ್ಬರನ್ನು ಅಗ್ಗಕ್ಕೆ ಕಳೆದುಕೊಂಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 50 ರನ್ ಬಾರಿಸಿದ್ದ ಹಂಗಾಮಿ ನಾಯಕ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 8 ರನ್‌ಗೆ ವಿಕೆಟ್ ಒಪ್ಪಿಸಿದ್ದಾರೆ. ಮಯಾಂಕ್ ಅಗರ್ವಾಲ್ ಕೂಡ 23 ರನ್‌ಗಳಿಗೆ ಔಟ್ ಆಗಿ ಫೆವಿಲಿಯನ್ ಸೇರಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ಪರವಾಗಿ ಡುವಾನ್ನೆ ಇಲಿವರ್ ಹಾಗೂ ಮಾಕ್ರೋ ಜಾನ್ಸನ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾಗೆ ಠಾಕೂರ್ ಆಘಾತ: ಮೊದಲ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 35 ರನ್ ಕಲೆಹಾಕಿದ್ದ ದಕ್ಷಿಣ ಆಫ್ರಿಕಾ ಎರಡನೇ ದಿನ ನಾಯಕ ಡೀನ್‌ ಎಲ್ಗರ್ ಮತ್ತು ಕೀಗನ್ ಪೀಟರ್ಸನ್ ದೊಡ್ಡ ಜೊತೆಯಾಟವನ್ನಾಡುವ ಮುನ್ಸೂಚನೆ ನೀಡಿದ್ದರು. ಎರಡನೇ ದಿನದಾಟದಲ್ಲಿ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದರು ಉಭಯ ಆಟಗಾರರು ಮೊದಲ ಸೆಷನ್‌ನ ಅಂತಿಮ ಹಂತದವರೆಗೂ ಭಾರತೀಯ ಬೌಲರ್‌ಗಳನ್ನು ಕಾಡಿದರು. ಈ ಹಂತದಲ್ಲಿ ದಾಳಿಗಿಳಿದ ಶಾರ್ದೂಲ್ ಠಾಕೂರ್ ಅದ್ಭುತ ದಾಳಿ ನಡೆಸಿ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾದರು.

ನಂತರ ಶಾರ್ದೂಲ್ ಠಾಕೂರ್ ದಕ್ಷಿಣ ಆಫ್ರಿಕಾ ದಾಂಡಿಗರ ಮೇಲೆ ಅಕ್ಷರಶಃ ಸವಾರಿ ನಡೆಸಿದರು. ಒಂದರ ನಂತರ ಮತ್ತೊಂದರಂತೆ ಭಾರತಕ್ಕೆ ಯಶಸ್ಸು ನೀಡುತ್ತಾ ಸಾಗಿದರು. ಈ ಪಂದ್ಯದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಮೊದಲ ಐದು ವಿಕೆಟ್‌ಗಳ ಗೊಂಚಲು ಪಡೆದು ಮಿಂಚಿದ್ದಾರೆ ಶಾರ್ದೂಲ್ ಠಾಕೂರ್. ನಂತರ ಮತ್ತೆರಡು ವಿಕೆಟ್‌ಗಳನ್ನು ಬುಟ್ಟಿಗೆ ಹಾಕಿಕೊಂಡ ಶಾರ್ದೂಲ್ ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತದ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಹೆಗ್ಗಳಿಕೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಶಾರ್ದೂಲ್ ಠಾಕೂರ್ ಬೌಲಿಂಗ್ ದಾಳಿಗೆ ನಲುಗಿದ ದಕ್ಷಿಣ ಆಫ್ರಿಕಾ ತಂಡ 229 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಮಡಿತು. ಈ ಮೂಲಕ ಭಾರತ ತಂಡವನ್ನು 202 ರನ್‌ಗಳಿಗೆ ಕಟ್ಟಿಹಾಕಿದ್ದರೂ ಆತಿಥೇಯ ತಂಡ ಕೇವಲ 27 ರನ್‌ಗಳ ಮುನ್ನಡೆಗೆ ತೃಪ್ತಿಪಟ್ಟುಕೊಂಡಿತು. ಹೀಗಾಗಿ ಟೀಮ್ ಇಂಡಿಯಾ ಈ ಪಂದ್ಯ ಮೊದಲ ಇನ್ನಿಂಗ್ಸ್‌ನಲ್ಲಿ ಕನಿಷ್ಠ ಮೊತ್ತ ಗಳಿಸಿದ ಹೊರತಾಗಿಯೂ ಪಂದ್ಯದ ಮೇಲಿನ ಹಿಡಿತವನ್ನು ಸಡಿಲಿಸಿಲ್ಲ. ಮೂರನೇ ದಿನದಾಟ ಸಾಕಷ್ಟು ಕುತೂಹಲಕಾರಿಯಾಗಿದ್ದು ಭಾರತ ಎಷ್ಟು ರನ್‌ಗಳ ಗುರಿಯನ್ನು ದಕ್ಷಿಣ ಆಫ್ರಕಾಗೆ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ಟೀಮ್ ಇಂಡಿಯಾ ಆಡುವ ಬಳಗ ಹೀಗಿದೆ: ಕೆಎಲ್ ರಾಹುಲ್(ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

ರೋಹಿತ್ ಶರ್ಮಾಗೆ ಇದು ಕೊನೆ ಅವಕಾಶ! | Oneindia Kannada

ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್(ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸೀ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್ನೆ(ವಿಕೆಟ್ ಕೀಪರ್), ಟೆಂಬಾ ಬವುಮಾ, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಡುವಾನ್ನೆ ಒಲಿವಿಯರ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ

Story first published: Tuesday, January 4, 2022, 21:51 [IST]
Other articles published on Jan 4, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+