
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ಮೊದಲ ದಿನ ಬ್ಯಾಟಿಂಗ್‌ನಲ್ಲಿ ವೈಫಲ್ಯವನ್ನು ಕಂಡು ಹಿನ್ನಡೆ ಅನುಭವಿಸಿದ ಟೀಮ್ ಇಂಡಿಯಾ ಎರಡನೇ ದಿನ ಪಂದ್ಯದಲ್ಲಿ ತಿರುಗು ಬೀಳುವ ಪ್ರಯತ್ನವನ್ನು ನಡೆಸುತ್ತಿದೆ. ದಕ್ಷಿಣ ಆಪ್ರಿಕಾ ಬ್ಯಾಟರ್‌ಗಳನ್ನು ಶೀಘ್ರವಾಗಿ ಫೆವಿಲಿಯನ್‌ಗೆ ಅಟ್ಟುವಂತೆ ಮಾಡಿ ಭಾರತ ತಂಡ ಈ ಪಂದ್ಯಕ್ಕೆ ಮರಳುವ ಪ್ರಯತ್ನದಲ್ಲಿದ್ದಾರೆ ಭಾರತೀಯ ತಂಡದ ಬೌಲರ್‌ಗಳು.
ಮೊದಲ ದಿನ ಪ್ರಥಮ ಇನ್ನಿಂಗ್ಸ್ ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ಕೇವಲ 202 ರನ್‌ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರವಾಗಿ ನಾಯಕ ಕೆಎಲ್ ರಾಹುಲ್ ಹಾಗೂ ಆರ್ ಅಶ್ವಿನ್ ಮಾತ್ರವೇ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಕೆಎಲ್ ರಾಹುಲ್ 50 ರನ್‌ಗಳನ್ನು ಗಳಿಸಿ ಔಟಾದರೆ ಕೆಳ ಕ್ರಮಾಂಕದಲ್ಲಿ ಆರ್ ಅಶ್ವಿನ್ 46 ರನ್‌ಗಳನ್ನು ಗಳಿಸಿ ತಂಡಕ್ಕೆ ನಿರ್ಣಾಯಕ ಕೊಡುಗೆ ನೀಡಿದ್ದಾರೆ.
Live ಸ್ಕೋರ್‌ಕಾರ್ಡ್ ಇಲ್ಲಿದೆ:
ಇನ್ನು ಬ್ಯಾಟಿಂಗ್ ಆರಂಭಿಸಿದ ದಕ್ಷಿ ಆಫ್ರಿಕಾ ಮೊದಲ ದಿನ ಒಂದು ವಿಕೆಟ್ ಕಳೆದುಕೊಂಡು ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದೆ. ಹೀಗಾಗಿ ಎರಡನೇ ದಿನ ಟೀಮ್ ಇಂಡಿಯಾದ ಬೌಲರ್‌ಗಳ ಮೇಲೆ ನಿರೀಕ್ಷೆ ಹೆಚ್ಚಿದ್ದು ಸಾಧ್ಯವಾದಷ್ಟು ಶೀಘ್ರವಾಗಿ ಆಲೌಟ್ ಮಾಡುವ ಗುರಿಯನ್ನು ಹೊಂದಿದೆ.
ಟೀಮ್ ಇಂಡಿಯಾ ಆಡುವ ಬಳಗ ಹೀಗಿದೆ: ಕೆಎಲ್ ರಾಹುಲ್(ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್(ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸೀ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್ನೆ(ವಿಕೆಟ್ ಕೀಪರ್), ಟೆಂಬಾ ಬವುಮಾ, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್‌ಗಿಡಿ