
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಮೂರನೇ ದಿನದಾಟ ಆರಂಭವಾಗಿದೆ. ಅಜಿಂಕ್ಯಾ ರಹಾನೆ ಹಾಗೂ ಚೇತೇಶ್ವರ್ ಪೂಜಾರ ಮೂರನೇ ದಿನದಾಟವನ್ನು ಆರಂಭಿಸಿದ್ದು ಇಬ್ಬರು ಆಟಗಾರರ ಮೇಲೆಯೂ ಸಾಕಷ್ಟು ಒತ್ತಡವಿದೆ. ಸತತವಾಗಿ ವೈಫಲ್ಯವನ್ನು ಅನುಭವಿಸುತ್ತಿರುವ ಈ ಇಬ್ಬರು ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಇದು ಅಂತಿಮ ಅವಕಾಶವಾಗಲೂ ಬಹುದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ.
2ನೇ ದಿನದಾಟದ ಅಂತ್ಯಕ್ಕೆ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 85 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಮೂರನೇ ದಿನಕ್ಕೆ ಆಟವನ್ನು ಕಾಯ್ದಿರಿಸಿತ್ತು. ಟೀಮ್ ಇಂಡಿಯಾ ಪರವಾಗಿ ಕ್ರೀಸ್‌ನಲ್ಲಿ ಅನುಭವಿ ಆಟಗಾರರಾದ ಚೇತೇಶ್ವರ್ ಪೂಜಾರ 35 ರನ್ ಮತ್ತು ಅಜಿಂಕ್ಯಾ ರಹಾನೆ 11 ರನ್‌ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದರು. ಈ ಇಬ್ಬರು ಆಟಗಾರರ ಜೊತೆಯಾಟದ ಮೇಲೆ ಈಗ ಅಭಿಮಾನಿಗಳ ಚಿತ್ತ ನೆಟ್ಟಿದೆ.
Live ಸ್ಕೋರ್ ಮಾಹಿತಿ ಹೀಗಿದೆ
ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಆರಂಭಿಕರಿಬ್ಬರನ್ನು ಅಗ್ಗಕ್ಕೆ ಕಳೆದುಕೊಂಡಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 50 ರನ್ ಬಾರಿಸಿದ್ದ ಹಂಗಾಮಿ ನಾಯಕ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 8 ರನ್‌ಗೆ ವಿಕೆಟ್ ಒಪ್ಪಿಸಿದ್ದಾರೆ. ಮಯಾಂಕ್ ಅಗರ್ವಾಲ್ ಕೂಡ 23 ರನ್‌ಗಳಿಗೆ ಔಟ್ ಆಗಿ ಫೆವಿಲಿಯನ್ ಸೇರಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ಪರವಾಗಿ ಡುವಾನ್ನೆ ಇಲಿವರ್ ಹಾಗೂ ಮಾಕ್ರೋ ಜಾನ್ಸನ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡಿದ್ದಾರೆ.
ಟೀಮ್ ಇಂಡಿಯಾ ಆಡುವ ಬಳಗ ಹೀಗಿದೆ: ಕೆಎಲ್ ರಾಹುಲ್(ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್(ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸೀ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್ನೆ(ವಿಕೆಟ್ ಕೀಪರ್), ಟೆಂಬಾ ಬವುಮಾ, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಡುವಾನ್ನೆ ಒಲಿವಿಯರ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ