ಭಾರತ vs ದ. ಆಫ್ರಿಕಾ: ನಾಲ್ಕನೇ ದಿನದಾಟ ತಡವಾಗಿ ಆರಂಭ: Live ಸ್ಕೋರ್‌ಪಟ್ಟಿ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ರೋಚಕ ಘಟ್ಟವನ್ನು ತಲುಪಿದ್ದು ನಾಲ್ಕನೇ ದಿನದ ಆಟ ಸಾಕಷ್ಟು ಕುತೂಹಲ ಮೂಡಿಸಿದೆ. ಆದರೆ ಪಂದ್ಯದ ಆರಂಭಕ್ಕೆ ಮಳೆ ಅಡ್ಡಿಯಾಗಿದ್ದು ನಾಲ್ಕನೇ ದಿನದಾಟ ತಡವಾಗಿ ಆರಂಭವಾಗಲಿದೆ. ಪಂದ್ಯ ಆರಂಭವಾಗುವ ಸಂದರ್ಭದಲ್ಲಿಯೂ ಮಳೆ ಹನಿ ಸುರಿಯುತ್ತಿರುವ ಕಾರಣದಿಂದಾಗಿ ಅಡ್ಡಿಯುಂಟಾಗಿದೆ.
ಮೂರನೇ ದಿನದಾಟದ ಅಂತ್ಯದಲ್ಲಿ ದಕ್ಷಿಣ ಆಫ್ರಿಕಾ ಪಂದ್ಯದಲ್ಲಿ ಮೇಲುಗೈ ಸಾಧಿಸಿದ್ದು ನಾಲ್ಕನೇ ದಿನ ಪಂದ್ಯವನ್ನು ಗೆಲ್ಲುವತ್ತ ಚಿತ್ತ ನೆಟ್ಟಿರುವುದು ಸ್ಪಷ್ಟವಾಗಿದೆ. 240 ರನ್‌ಗಳ ಗುರಿಯನ್ನು ಬೆನ್ನಟ್ಟಿರುವ ದಕ್ಷಿಣ ಆಫ್ರಿಕಾ ತಂಡ ಉತ್ತಮ ಆರಂಭವನ್ನು ಪಡೆದುಕೊಂಡಿದ್ದು ಗೆಲುವಿನತ್ತ ಹೆಜ್ಜೆ ಹಾಕಿದೆ. ನಾಲ್ಕನೇ ದಿನ ಭಾರತ ತಂಡದ ಬೌಲರ್‌ಗಳು ಯಾವ ರೀತಿ ತಿರುಗಿ ಬೀಳಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ
ದಕ್ಷಿಣ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ತಂಡಕ್ಕೆ ಆಸರೆಯಾಗಿ ಕ್ರೀಸ್‌ನಲ್ಲಿ ನೆಲೆಯೂರಿದ್ದಾರೆ. ಮತ್ತೊಂದು ತುದಿಯಲ್ಲಿ ರಾಸ್ಸಿ ವಾನ್‌ಡರ್ ಡಸ್ಸೆನ್ ಸಾಥ್ ನೀಡುತ್ತಿದ್ದು ದಕ್ಷಿಣ ಆಫ್ರಿಕಾ ಮೂರನೇ ದಿನ ಹೆಚ್ಚಿನ ಆಘಾತ ಅನುಭವಿಸದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಭಾರತವನ್ನು 7 ವಿಕೆಟ್‌ಗಳ ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿ 1-1 ಅಂತರದಿಂದ ಸಮಬಲಗೊಂಡಿದೆ. ದಕ್ಷಿಣ ಆಪ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಎರಡನೇ ಇನ್ನಿಂಗ್ಸ್‌ನಲ್ಲಿ ಪ್ರದರ್ಶಿಸಿದ ಅದ್ಭುತ ಬ್ಯಾಟಿಂಗ್‌ನಿಂದಾಗಿ ದಕ್ಷಿಣ ಆಫ್ರಿಕಾ ತಂಡ ಮಳೆಯ ಅಡ್ಡಿಯ ಹೊರತಾಗಿಯೂ ನಾಲ್ಕನೇ ದಿನದಲ್ಲಿಯೇ ಗೆಲುವಿನ ಸಂಭ್ರಮವನ್ನಾಚರಿಸುವಲ್ಲಿ ಯಶಸ್ವಿಯಾಗಿದೆ.
ಆರಂಭಿಕನಾಗಿ ಕಣಕ್ಕಿಳಿದು ಅಂತಿಮ ಹಂತದವರೆಗೂ ಕ್ರೀಸ್‌ಬಲ್ಲಿ ಭದ್ರವಾಗಿ ನೆಲೆಯೂರಿದ ದಕ್ಷಿಣ ಆಫ್ರಿಕಾ ತಂಡದ ನಾಯಕ ಡೀನ್ ಎಲ್ಗರ್ ಈ ಪಂದ್ಯದಲ್ಲಿ ಭಾರತದ ಗೆಲುವಿನ ಕನಸಿಗೆ ಅಡ್ಡಿಯಾದರು. ಜೊತೆಗಾರರಿಂದ ದೊರೆತ ಅದ್ಭುತ ಬೆಂಬಲವನ್ನು ಬಳಸಿಕೊಂಡ ಡೀನ್ ಎಲ್ಗರ್ 240 ರನ್‌ಗಳ ಗುರಿ ಬೆನ್ನಟ್ಟಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ಭಾರತ ತಂಡದ ಭದ್ರ ಕೋಟೆ ಎನಿಸಿದ್ದ ವಾಂಡರರ್ಸ್ ಕ್ರೀಡಾಂಗಣದಲ್ಲಿ ಭಾರತಕ್ಕೆ ಮೊದಲ ಸೋಲಿನ ರುಚಿ ತೋರಿಸಿದರು.
ಎರಡನೇ ಇನ್ನಿಂಗ್ಸ್‌ನಲ್ಲಿ ಉತ್ತಮ ಆರಂಭ ಪಡೆದ ದ. ಆಫ್ರಿಕಾ: 2ನೇ ಇನ್ನಿಂಗ್ಸ್‌ನಲ್ಲಿ ಭಾರತ ನೀಡಿದ 240 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಸಾಧಾರಣ ಆರಂಭ ದೊರೆಯಿತು. ಮೊದಲ ವಿಕೆಟ್‌ಗೆ 47 ರನ್‌ಗಳಿಸಿದ್ದಾಗ ದಕ್ಷಿಣ ಆಫ್ರಿಕಾ ತಂಡ 31 ರನ್‌ಗಳಿಸಿದ್ದ ಮಾರ್ಕ್ರಮ್ ವಿಕೆಟ್ ಕಳೆದುಕೊಂಡಿತ್ತು. ನಂತರ 93 ರನ್‌ಗಳಿಗೆ ದಕ್ಷಿಣ ಆಪ್ರಿಕಾ ತಂಡ 2ನೇ ವಿಕೆಟ್ ಕಳೆದುಕೊಂಡಿತು. ನಂತರ ಮೂರನೇ ವಿಕೆಟ್‌ಗೆ ವಾನ್ ಡರ್ ಡುಸ್ಸೆನ್ ಜೊತೆಗೆ 82 ರನ್‌ಗಳ ಜೊತೆಯಾಟವನ್ನು ನೀಡಿದರು ಎಲ್ಗರ್.
ಟೀಮ್ ಇಂಡಿಯಾ ಆಡುವ ಬಳಗ ಹೀಗಿದೆ: ಕೆಎಲ್ ರಾಹುಲ್(ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್(ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸೀ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್ನೆ(ವಿಕೆಟ್ ಕೀಪರ್), ಟೆಂಬಾ ಬವುಮಾ, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಡುವಾನ್ನೆ ಒಲಿವಿಯರ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications