For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ, 2ನೇ ಟೆಸ್ಟ್, Live: ವಿರಾಟ್ ಕೊಹ್ಲಿ ಅರ್ಧ ಶತಕದಾಟ

India vs South Africa, 2nd Test - Live Cricket Score

ಪುಣೆ, ಅಕ್ಟೋಬರ್ 10: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯವನ್ನು ಭರ್ಜರಿ 203 ರನ್‌ಗಳಿಂದ ಗೆದ್ದುಕೊಂಡಿರುವ ಭಾರತ, ಇಂದು (ಗುರುವಾರ 10) ದ್ವಿತೀಯ ಟೆಸ್ಟ್ ಪಂದ್ಯವನ್ನಾಡುತ್ತಿದೆ. ಸರಣಿ ಗೆದ್ದುಕೊಳ್ಳುವತ್ತ ಕೊಹ್ಲಿ ಪಡೆ ಕಣ್ಣಿಟ್ಟಿದ್ದರೆ, ಸರಣಿ ಉಳಿಸಿಕೊಳ್ಳುವ ಯೋಜನೆ ದಕ್ಷಿಣ ಆಫ್ರಿಕಾದ್ದು. ಟಾಸ್ ಗೆದ್ದಿರುವ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.

ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ 14, ಚೇತೇಶ್ವರ ಪೂಜಾರ 58 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದ್ದಾರೆ. ಮತ್ತೊಬ್ಬರ ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ ಶತಕ (108) ಬಾರಿಸಿ ನಿರ್ಗಮಿಸಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ ಬಾರಿಸಿ ಆಡುತ್ತಿದ್ದಾರೆ. ಭಾರತ ಮೊದಲ ದಿನದಾಟದ ಅಂತ್ಯಕ್ಕೆ 85.1 ಓವರ್‌ಗೆ 3 ವಿಕೆಟ್ ಕಳೆದು 273 ರನ್ ಗಳಿಸಿದೆ.

ಆರಂಭಿಕ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ರೋಹಿತ್ ಶರ್ಮಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಜೊತೆಗೆ ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ ಅವರ ಬ್ಯಾಟಿಂಗ್ ಬೆಂಬಲವೂ ಲಭಿಸಿತ್ತು. ಈ ಬಾರಿಯೂ ತಂಡ ಮೊದಲ ಪಂದ್ಯದಲ್ಲಿ ನೀಡಿದ್ದ ಅದೇ ಉತ್ತಮ ಪ್ರದರ್ಶನ ನೀಡುವುದನ್ನು ನಿರೀಕ್ಷಿಸಲಾಗಿದೆ.

ಭಾರತ vs ದಕ್ಷಿಣ ಆಫ್ರಿಕಾ, 2ನೇ ಟೆಸ್ಟ್, Live ಸ್ಕೋರ್‌ ಕಾರ್ಡ್

1
46114

ಭಾರತ ತಂಡ: ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ವೃದ್ಧಿಮಾನ್ ಸಹಾ (ವಿಕೆ), ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ.

ದಕ್ಷಿಣ ಆಫ್ರಿಕಾ ತಂಡ: ಡೀನ್ ಎಲ್ಗರ್, ಐಡೆನ್ ಮಾರ್ಕ್ರಮ್, ಥ್ಯೂನಿಸ್ ಡಿ ಬ್ರೂಯಿನ್, ಟೆಂಬಾ ಬವುಮಾ, ಫಾಫ್ ಡು ಪ್ಲೆಸಿಸ್ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ಸೆನುರನ್ ಮುತ್ತುಸಾಮಿ, ವೆರ್ನಾನ್ ಫಿಲಾಂಡರ್, ಕೇಶವ್ ಮಹಾರಾಜ್, ಕಾಗಿಸೊ ರಬಾಡಾ, ಅನ್ರಿಕ್ ನಾರ್ಟ್ಜೆ.

Story first published: Thursday, October 10, 2019, 17:15 [IST]
Other articles published on Oct 10, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+