
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದು 202 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡದ ಬೌಲರ್‌ಗಳು ಮೊದಲ ಇನ್ನಿಂಗ್ಸ್‌ನಲ್ಲಿ ಸಂಪೂರ್ಣ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೀಮ್ ಇಂಡಿಯಾ ಪರವಾಗಿ ನಾಯಕ ಕೆಎಲ್ ರಾಹುಲ್ ಹಾಗೂ ಆರ್ ಅಶ್ವಿನ್ ಮಾತ್ರವೇ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅಗ್ರ ಕ್ರಮಾಂಕ ಹಾಗೂ ಮಧ್ಯಮ ಕ್ರಮಾಂಕದ ಎಲ್ಲಾ ಆಟಗಾರರು ಕೂಡ ಕಳಪೆ ಪ್ರದರ್ಶನ ನೀಡಿದ್ದು ತಂಡದ ಹಿನ್ನೆಡೆಗೆ ಕಾರಣವಾಗಿದೆ. ಅಂತಿಮ ಹಂತದಲ್ಲಿ ಅನುಭವಿ ಆರ್ ಅಶ್ವಿನ್ ನೀಡಿದ ಬ್ಯಾಟಿಂಗ್ ಪ್ರದರ್ಶನ ತಂಡದ ಮೊತ್ತ 200ರ ಗಡಿ ದಾಟಲು ಕಾರಣವಾಯಿತು.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ಉತ್ತಮ ಆರಂಭವನ್ನು ಪಡೆಯುವ ಮುನ್ಸೂಚನೆ ನೀಡುತ್ತಿದ್ದಂತೆಯೇ ಮಯಾಂಕ್ ಅಗರ್ವಾಲ್ ವಿಕೆಟ್ ಕಳೆದುಕೊಂಡು ನಿರಾಸೆ ಅನುಭವಿಸಿದರು. ಅದಾದ ಬಳಿಕ ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗ ಫೆವಿಲಿಯನ್ ಪೆರೇಡ್ ನಡೆಸಲು ಆರಂಭಿಸಿತ್ತು. ಚೇತೇಶ್ವರ್ ಪೂಜಾರ ಹಾಘೂ ಅಜಿಂಕ್ಯಾ ರಹಾನೆ ಸತತ ಎರಡು ಎಸೆತಗಳಲ್ಲಿ ಒಲಿವಿಯರ್‌ಗೆ ವಿಕೆಟ್ ಒಪ್ಪಿಸಿ ಮತ್ತೊಂದು ಬಾರಿ ನಿರಾಸೆ ಮೂಡಿಸಿದರು.
ನಂತರ ಹನುಮ ವಿಹಾರಿ ಹಾಗೂ ಕೆಎಲ್ ರಾಹುಲ್ ಜೋಡಿ ಕೆಲ ಕಾಲ ಕ್ರೀಸ್‌ನಲ್ಲಿ ನಿಂತು ಉತ್ತಮ ಜೊತೆಯಾಟ ನೀಡುವ ಪ್ರಯತ್ನದಲ್ಲಿದ್ದಾಗ ಈ ಜೋಡಿಯನ್ನು ರಬಾಡ ಬೇರ್ಪಡಿಸುವಲ್ಲಿ ಯಶಸ್ವಿಯಾದರು. ಹನುಮ ವಿಹಾರಿ 20 ರನ್‌ಗಳಿಗೆ ವಿಕೆಟ್ ಒಪ್ಪಿಸಿ ಹೊರನಡೆದರು. ನಂತರ ಅರ್ಧ ಶತಕಗಳಿಸಿದ ಕೆಎಲ್ ರಾಹುಲ್ ಕೂಡ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿಕೊಂಡರು. ನಂತರ ಆರ್ ಅಶ್ವಿನ್ ಹಾಗೂ ರಿಷಬ್ ಪಂತ್ 40 ರನ್‌ಗಳ ಜೊತೆಯಾಟವನ್ನು ನೀಡಿದರು. ನಂತರ ಪಂತ್ ಕೂಡ ಕೇವಲ 17 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಆರ್ ಅಶ್ವಿನ್ 46 ರನ್‌ಗಳ ಮಹತ್ವದ ಕೊಡುಗೆಯನ್ನು ನೀಡಿ ಈ ಪಂದ್ಯದಲ್ಲಿ ಮಿಂಚಿದರು. ಬಳಿಕ ಅಂತಿಮ ಹಂತದಲ್ಲಿ ಜಸ್ಪ್ರೀತ್ ಬೂಮ್ರಾ ಒಂದು ಸಿಕ್ಸರ್ ಎರಡು ಬೌಂಡರಿ ಸಿಡಿಸಿ ಗಮನಸೆಳೆದಿದರು. ಟೀಮ್ ಇಂಡಿಯಾ 202 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಪರವಾಗಿ ಮ್ಯಾಕ್ರೋ ಜೆನ್ಸನ್ 4 ವಿಕೆಟ್ ಪಡೆದು ಭಾರತ ತಂಡಕ್ಕೆ ಆಘಾತ ನೀಡಿದರು. ಮಯಾಂಕ್ ಅಗರ್ವಾಲ್, ಕೆಎಲ್ ರಾಹುಲ್, ರಿಷಭ್ ಪಂತ್ ಹಾಗೂ ಆರ್ ಅಶ್ವಿನ್ ಈ ನಾಲ್ವರು ಪ್ರಮುಖ ಆಟಗಾರರ ವಿಕೆಟ್ ಪಡೆದರು ಮ್ಯಾಕ್ರೋ ಜಿನ್ಸನ್. ಇನ್ನು ಕಗಿಸೋ ರಬಾಡ ಹಾಗೂ ಒಲಿವಿಯರ್ ಇನ್ನಿಂಗ್ಸ್‌ನಲ್ಲಿ ತಲಾ ಮೂರು ವಿಕೆಟ್ ಸಂಪಾದಿಸಿದ್ದಾರೆ.
ಟೀಮ್ ಇಂಡಿಯಾ ಆಡುವ ಬಳಗ ಹೀಗಿದೆ: ಕೆಎಲ್ ರಾಹುಲ್(ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್(ನಾಯಕ), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್(ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸೀ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ(ಡಬ್ಲ್ಯೂ), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್‌ಗಿಡಿ