Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ದ. ಆಫ್ರಿಕಾ: 3ನೇ ಏಕದಿನ ಪಂದ್ಯ, ಪಿಚ್ ರಿಪೋರ್ಟ್ ಹವಾಮಾನ ವರದಿ, ಸಂಭಾವ್ಯ ಆಡುವ ಬಳಗ

India vs South Africa: 3rd ODI: arun jaitley stadium Pitch Report, Weather Forecast, probable XI

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯ ಮಂಗಳವಾರ ನಡೆಯಲಿದೆ. ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಈ ಸರಣಿಯಲ್ಲಿ ಸಮಬಲ ಸಾಧಿಸಿದ್ದು ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯ ಮಂಗಳವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-1 ಅಂತರದಿಂದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಏಕದಿನ ಮಾದರಿಯಲ್ಲಿಯೂ ಅಂಥಾದ್ದೇ ಸಾಧನೆ ಮಾಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಆದರೆ ಈ ಸರಣಿಯಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕಣಕ್ಕಿಳಿದಿಲ್ಲ. ಬದಲಿಗೆ ಶಿಖರ್ ಧವನ್ ನೇತೃತ್ವದಲ್ಲಿ ದ್ವಿತೀಯ ದರ್ಜೆಯ ಟೀಮ್ ಇಂಡಿಯಾ ಬಳಗ ಕಣಕ್ಕಿಳಿದಿದೆ. ಹಾಗಿದ್ದರೂ ದಕ್ಷಿಣ ಆಫ್ರಿಕಾ ವಿರುದ್ಧ ದಿಟ್ಟ ಪ್ರದರ್ಶನ ನೀಡಿದ್ದು ಮೊದಲ ಪಂದ್ಯದಲ್ಲಿ ಸಣ್ಣ ಅಂತರದಿಂದ ಎಡವಿದ್ದರೂ ಎರಡನೇ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದುಕೊಂಡಿದೆ. ಇದೀಗ ಅಂತಿಮ ಪಂದ್ಯದಲ್ಲಿ ಯಾವ ತಂಡಕ್ಕೆ ಗೆಲುವು ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದ್ದು ಗೆದ್ದ ತಂಡ ಏಕದಿನ ಸರಣಿಯನ್ನು ತನ್ನ ವಶಕ್ಕೆ ಪಡೆಯಲಿದೆ.

ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾರತದ ದಾಖಲೆ

ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾರತದ ದಾಖಲೆ

ದೆಹಲಿಯ ಈ ಕ್ರೀಡಾಂಗಣದಲ್ಲಿ ಭಾರತ ತಂಡ ಈವರೆಗೆ 20 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದೆ. ಈ ಪೈಕಿ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ 7ರಲ್ಲಿ ಸೋಲು ಅನುಭವಿಸಿದೆ. ಒಂದು ಪಂದ್ತಯ ಮಾತ್ರ ಫಲಿತಾಂಶವಿಲ್ಲದೆ ರದ್ದಾಗಿದೆ. ಮತ್ತೊಂದೆಡೆ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ಈ ಮೈದಾನದಲ್ಲಿ ಒಂದು ಪಂದ್ಯವನ್ನು ಮಾತ್ರವೇ ಆಡಿದ್ದು ಆ ಪಂದ್ಯದಲ್ಲಿ ಸೋಲಿನ ರುಚಿ ಕಂಡಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ಅರುಣ್ ಜೇಟ್ಲೀ ಕ್ರೀಡಾಂಗಣದಲ್ಲಿ ಇನ್ನಷ್ಟೇ ಗೆಲುವಿನ ಖಾತೆ ತೆರೆಯಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್‌ಗೆ ಅನುಕೂಲಕರವಾಗಿರುತ್ತದೆ, ಅಲ್ಲದೆ ಇಬ್ಬನಿ ಕೂಡ ಬೀಳುವ ಕಾರಣ ರನ್ ಬೆನ್ನಟ್ಟುವುದು ಇಲ್ಲಿ ಸುಲಭವಾಗಲಿದೆ. ಇನ್ನು ಬೌಂಡರಿಗಳು ಇಲ್ಲಿ ತುಂಬಾ ದೊಡ್ಡದಾಗಿಲ್ಲ ಹಾಗೂ ಔಟ್‌ಫೀಲ್ಡ್ ಕೂಡ ವೇಗವಾಗಿರಲಿದೆ. ಈ ಹಿಂದೆ ಸ್ಪಿನ್ನರ್‌ಗಳು ಇಲ್ಲಿ ಹೆಚ್ಚಿನ ಲಾಭವನ್ನು ಪಡೆದುಕೊಳ್ಳುತ್ತಿದ್ದರಾದರೂ ಕೆಲ ಒಂದೆರಡು ವರ್ಷಗಳಲ್ಲಿ ಪಿಚ್ ವರ್ತನೆಯಲ್ಲಿ ಬದಲಾವಣೆಗಳು ಆಗಿದೆ.
ಹವಾಮಾನ ವರದಿ: ಮೋಡ ಕವಿದ ವಾತಾವರಣವಿರಲಿದ್ದರು ಕೂಡ ಪಂದ್ಯದ ದಿನ ಮಳೆಯಾಗುವ ಯಾವುದೇ ಆತಂಕವಿಲ್ಲ. ಹೀಗಾಗಿ ಸಂಪೂರ್ಣ ಪಂದ್ಯ ನಡೆಯುವ ವಿಶ್ವಾಸವಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಭಾರತ ಸಂಭಾವ್ಯ ಆಡುವ ಬಳಗ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್
ದ. ಆಫ್ರಿಕಾ ಸಂಭಾವ್ಯ ಆಡುವ ಬಳಗ: ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್ (ನಾಯಕ), ಜಾರ್ನ್ ಫೋರ್ಚುಯಿನ್, ಕಗಿಸೊ ರಬಾಡಾ, ಅನ್ರಿಚ್ ನಾರ್ಕಿಯಾ

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ಭಾರತ: ಶಿಖರ್ ಧವನ್ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್, ರುತುರಾಜ್ ಗಾಯಕ್ವಾಡ್, ರವಿ ಬಿಷ್ಣೋಯ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಮುಖೇಶ್ ಕುಮಾರ್

ದಕ್ಷಿಣ ಆಫ್ರಿಕಾ: ಜನ್ನೆಮನ್ ಮಲನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್ (ನಾಯಕ), ಜಾರ್ನ್ ಫೋರ್ಚುಯಿನ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ತೆಂಬಾ ಬವುಮಾ, ಲುಂಗಿ ಎನ್ಗಿಡಿ, ತಬ್ರೈಜ್ ಶಮ್ಸಿ, ಮಾರ್ಕೊ ಜಾನ್ಸೆನ್, ಆಂಡಿಲೆ ಫೆಹ್ಲುಕ್ವಾಯೊ

Story first published: Monday, October 10, 2022, 14:42 [IST]
Other articles published on Oct 10, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+