ಏಕದಿನ ಕ್ರಿಕೆಟ್ ನಲ್ಲಿ 34ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ

Posted By:
India Vs South Africa 3rd ODI : Kohli scores yet another ton | Oneindia Kannada
Virat Kohli

ಕೇಪ್ ಟೌನ್, ಫೆಬ್ರವರಿ 07: ಭಾರತ ವಿರುದ್ಧದ ಮೂರನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ನಾಯಕ ಐಡೆನ್ ಮಾರ್ಕಮ್ ಅವರು ಟಾಸ್ ಗೆದ್ದು, ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ

ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್ ನಲ್ಲೇ ಆಘಾತ ಎದುರಾಯಿತು. ರೋಹಿತ್ ಶರ್ಮ ಅವರು ಶೂನ್ಯ ಸುತ್ತಿ ರಬಾಡಾಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದರು. ತಮ್ಮ ವೃತ್ತಿ ಬದುಕಿನ 34ನೇ ಶತಕ ಬಾರಿಸಿದರು. ಭಾರತ 39.1 ಓವರ್ ಗಳಲ್ಲಿ 214/4 ಸ್ಕೋರ್ ಮಾಡಿದೆ.

ಸ್ಕೋರ್ ಕಾರ್ಡ್ ನೋಡಿ

ಭಾರತ ಕಳೆದೆರಡು ಪಂದ್ಯಗಳಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದ್ದರೆ, ದಕ್ಷಿಣ ಆಫ್ರಿಕಾ ತಂಡಕ್ಕೆ ಯುವ ಆಟಗಾರ ಲುಂಗಿಸಾನಿ ಗಿಡಿ ಹಾಗೂ ವಿಕೆಟ್ ಕೀಪರ್ ಹೆನ್ರಿಚ್ ಕ್ಲಾಸೆನ್ ಸೇರ್ಪಡೆಯಾಗಿದ್ದಾರೆ.

ಎಬಿ ಡಿವಿಲಿಯರ್ಸ್, ಫಾಫ್ ಡು ಪ್ಲೆಸಿಸ್, ಕ್ವಾಂಟನ್ ಡಿಕಾಕ್ ಮೂವರು ಗಾಯಗೊಂಡು ತಂಡದಿಂದ ಹೊರಗುಳಿದಿರುವುದು ದಕ್ಷಿಣ ಆಫ್ರಿಕಾದ ಬಲವನ್ನು ಕುಗ್ಗಿಸಿದೆ. 6 ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ 2-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Wednesday, February 7, 2018, 16:53 [IST]
Other articles published on Feb 7, 2018

myKhel ನಿಂದ ತಾಜಾ ಸುದ್ದಿಗಳನ್ನು ಪಡೆಯಿರಿ