ಭಾರತ vs ದ. ಆಫ್ರಿಕಾ: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ: ಆಡುವ ಬಳಗ, Live ಸ್ಕೋರ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಸರಣಿಯಲ್ಲಿ ಎರಡು ತಂಡಗಳು ಒಂದೊಂದು ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿದ್ದು ಈ ಪಂದ್ಯದಲ್ಲಿ ಗೆದ್ದ ತಂಡ ಸರಣಿಯನ್ನು ವಶಕ್ಕೆ ಪಡೆದುಕೊಳ್ಳಲಿದೆ. ಹೀಗಾಗಿ ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ದೆಹಲಿಯ ಅರುಣ್ ಜೇಟ್ಲೀ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು ಮಳೆ ಅಡ್ಡಿಯುಂಟು ಮಾಡಿದ ಕಾರಣ ಸ್ವಲ್ಪ ತಡವಾಗಿ ಪಂದ್ಯ ಆರಂಭಿಸಲಾಗಿದೆ.
ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಮಡ ರೋಚಕವಾಗಿ ಗೆಲುವು ಸಾಧಿಸಿದ್ದು ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿ ಗೆಲುವು ಸಾಧಿಸಿದೆ. ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಟಿ20 ವಿಶ್ವಕಪ್ ಕಾರಣದಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದು ದ್ವಿತೀಯ ದರ್ಜೆಯ ಬಳಗದೊಂದಿಗೆ ಟೀಮ್ ಇಂಡಿಯಾ ಈ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ
ಮೂರು ಬದಲಾವಣೆಯೊಂದಿಗೆ ದ. ಆಫ್ರಿಕಾ: ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಮೂರು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ಡೇವಿಡ್ ಮಿಲ್ಲರ್ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದು ಕಳೆದ ಪಂದ್ಯದಲ್ಲಿ ಮುನ್ನಡೆಸಿದ್ದ ಕೇಶವ್ ಮಹಾರಾಜ್ ಅನಾರೋಗ್ಯದ ಕಾರಣ ಹೊರಗುಳಿದಿದ್ದಾರೆ. ಇನ್ನು ತಬ್ರೈಜ್ ಶಂಸಿ ಹಾಗೂ ಟೆಂಬಾ ಬವುಮಾ ಚೇತರಿಕೆ ಕಾಣುತ್ತಿದ್ದಾರೆ ಎಂದು ಡೇವಿಡ್ ಮಿಲ್ಲರ್ ಮಾಹಿತಿ ನೀಡಿದ್ದಾರೆ. ಇನ್ನು ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ.
ದಕ್ಷಿಣ ಆಫ್ರಿಕಾ ಆಡುವ ಬಳಗ: ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಜಾನ್ನೆಮನ್ ಮಲನ್, ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್(ನಾಯಕ), ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೋರ್ನ್ ಫಾರ್ಟುಯಿನ್, ಲುಂಗಿ ಎನ್ಗಿಡಿ, ಅನ್ರಿಚ್ ನಾರ್ಕಿಯಾ
ಭಾರತ ಆಡುವ ಬಳಗ: ಶಿಖರ್ ಧವನ್(ನಾಯಕ), ಶುಬ್ಮನ್ ಗಿಲ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅವೇಶ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications