ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೂರನೇ ಟಿ20 ಪಂದ್ಯ ಬುಧವಾರ (ನ.13) ರಂದು ಸೆಂಚುರಿಯನ್‌ನಲ್ಲಿ ನಡೆಯಲಿದೆ. ಈಗಾಗಲೇ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿರುವುದರಿಂದ ರೋಚಕತೆ ಹೆಚ್ಚಿಸಿದೆ. ಈ ಪಂದ್ಯವನ್ನು ಗೆದ್ದು ಟೀಮ್ ಇಂಡಿಯಾ ಸರಣಿಯಲ್ಲಿ ಮುನ್ನಡೆ ಸಾಧಿಸುವ ಪ್ಲ್ಯಾನ್ ಮಾಡಿಕೊಂಡಿದೆ. ಟೀಮ್ ಇಂಡಿಯಾ ಮೂರನೇ ಪಂದ್ಯದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಹೆಚ್ಚಿದೆ. ಪದಾರ್ಪಣೆ ಕನಸಿನಲ್ಲಿ ಆರ್‌ಸಿಬಿ ತಂಡದ ಆಟಗಾರರು ಇದ್ದಾರೆ.
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ನಾಲ್ಕು ಟಿ20 ಪಂದ್ಯಗಳನ್ನು ಆಡಬೇಕಿದೆ. ಈ ವೇಳೆ ಈಗಾಗಲೇ ಎರಡು ಪಂದ್ಯಗಳನ್ನು ಆಡಲಾಗಿದೆ. ಇದರಲ್ಲಿ ಒಂದು ಪಂದ್ಯವನ್ನು ಗೆದ್ದು ಬೀಗಿದೆ. ಎರಡನೇ ಪಂದ್ಯವನ್ನು ಆತಿಥೇಯ ತಂಡ ಗೆದ್ದಿದೆ. ಹೀಗಾಗಿ ಮೂರನೇ ಪಂದ್ಯ ರೋಚಕತೆ ಹಚ್ಚಿಸಿದೆ. ಈ ಪಂದ್ಯದಲ್ಲಿ ಜಯ ಸಾಧಿಸುವ ಯೋಜನೆ ಉಭಯ ತಂಡಗಳದ್ದಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆರಂಭಿಕ ಅಭಿಷೇಕ್ ಶರ್ಮಾ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆ ಇದೆ.

ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಅಭಿಷೇಕ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿದ್ದಾರೆ. ಇವರು ಆಡಿದ ಎರಡೂ ಪಂದ್ಯಗಳಲ್ಲಿ ದೊಡ್ಡ ಇಂಪ್ಯಾಕ್ಟ್ ಮಾಡುವಲ್ಲಿ ವಿಫಲರಾಗಿದ್ದಾರೆ. ಇನ್ನು ಇವರು ಟಿ20 ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಬಳಿಕ ಯಾವುದೇ ದೊಡ್ಡ ಇನಿಂಗ್ಸ್ ಕಟ್ಟಿರಲಿಲ್ಲ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅಭಿಷೇಕ್ ಬ್ಯಾಟ್ ಮೌನಕ್ಕೆ ಶರಣಾದಂತೆ ಕಾಣುತ್ತಿದೆ. ಆದರೆ ಟೀಮ್ ಮ್ಯಾನೇಜ್ಮೆಂಟ್ ಇವರಿಗೆ ಮತ್ತೊಂದು ಅವಕಾಶ ನೀಡಿದರೂ ಯಾವುದೇ ಅಚ್ಚರಿಯಿಲ್ಲ. ಇವರೊಂದಿಗೆ ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮೂರನೇ ಸ್ಥಾನದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಆಡಲಿದ್ದಾರೆ.
ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದಲ್ಲಿ ಬದಲಾವಣೆ ಗಾಳಿ ಬೀಸುವ ಸಾಧ್ಯತೆ ಇದೆ. ಆಲ್‌ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳುವ ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ ಅವರಿಗೆ ಸಾಥ್ ನೀಡಲು ರಮಣದೀಪ್ ಸಿಂಗ್ ಮೈದಾನಕ್ಕೆ ಎಂಟ್ರಿ ನೀಡಬಹುದು. ಇತ್ತೀಚೆಗೆ, ರಮಣದೀಪ್ ಉದಯೋನ್ಮುಖ ಏಷ್ಯಾ ಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಮತ್ತು ಆಕರ್ಷಕ ಕ್ಯಾಚ್‌ಗಳನ್ನು ಪಡೆದರು. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ಚೊಚ್ಚಲ ಅವಕಾಶ ಸಿಗಬಹುದು.
ಎರಡನೇ ಪಂದ್ಯದಲ್ಲಿ ಆಡುವ 11 ಬಳಗದಲ್ಲಿ ಅವಕಾಶ ಪಡೆದಿದ್ದ ಆವೇಶ್ ಖಾನ್ ಎರಡನೇ ಟಿ20 ಪಂದ್ಯದಲ್ಲಿ ದುಬಾರಿ ಎನಿಸಿಕೊಂಡರು. ಇವರು 23 ರನ್ ನೀಡಿ ಕೈ ಸುಟ್ಟುಕೊಂಡಿದ್ದರು. ಹೀಗಿರುವಾಗ ಅವರ ಜಾಗದಲ್ಲಿ ವಿಜಯ್ ಕುಮಾರ್ ವೈಶಾಕ್ ಗೆ ಅವಕಾಶ ಸಿಗಬಹುದು. ಈ ಪಂದ್ಯದಲ್ಲಿ ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ ಮತ್ತು ರವಿ ಬಿಷ್ಣೋಯ್ ಮೂವರು ಸ್ಪಿನ್ ಬೌಲರ್‌ಗಳನ್ನು ಭಾರತ ಕಣಕ್ಕೆ ಇಳಿಸಬಹುದು.
ಭಾರತದ ಸಂಭಾವ್ಯ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಮಣದೀಪ್ ಸಿಂಗ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಿಜಯ್ ಕುಮಾರ್ ವೈಶಾಕ್, ಅರ್ಷದೀಪ್ ಸಿಂಗ್