ಭಾರತ vs ದಕ್ಷಿಣ ಆಫ್ರಿಕಾ, 3ನೇ ಟಿ20 ಪಂದ್ಯ: ಟಾಸ್ ರಿಪೋರ್ಟ್, ಆಡುವ ಬಳಗ ಹಾಗೂ Live ಸ್ಕೋರ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯಕ್ಕೆ ಇಂದೋರ್ ಕ್ರೀಡಾಂಗಣ ಸಜ್ಜಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ದಕ್ಷಿಣ ಆಫ್ರಿಕಾ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಇನ್ನು ನಿರೀಕ್ಷೆಯಂತೆಯೇ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್‌ಗೆ ವಿಶ್ರಾಂತಿ ನೀಡಲಾಗಿದೆ. ಅರ್ಶ್‌ದೀಪ್ ಸಿಂಗ್ ಕೂಡ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್, ಉಮೇಶ್ ಯಾದವ್ ಹಾಗೂ ಮೊಹಮ್ಮದ್ ಸಿರಾಜ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಮ್ ಇಂಡಿಯಾ ಸರಣಿಯನ್ನು ಈಗಾಗಲೇ ವಶಕ್ಕೆ ಪಡೆದುಕೊಂಡಿರುವ ಕಾರಣ ಈ ಬದಲಾವಣೆಗಳನ್ನು ಮಾಡಿಕೊಂಡಿದ್ದು ದಕ್ಷಿಣ ಆಫ್ರಿಕಾದ ಸವಾಲನ್ನು ಈ ಆಡುವ ಬಳಗ ಹೇಗೆ ಸ್ವೀಕರಿಸಿಲಿದೆ ಎಂಬುದು ಕುತೂಹಲ ಮೂಡಿಸಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ

ವೈಟ್‌ವಾಶ್ ಮುಖಭಂಗದಿಂದ ತಪ್ಪಿಸಿಕೊಳ್ಳುತ್ತಾ ದ. ಆಫ್ರಿಕಾ
ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಆಡಲಿರುವ ಅಂತಿಮ ಅಂತಾರಾಷ್ಟ್ರೀಯ ಟಿ20 ಪಂದ್ಯ ಇದಾಗಿದ್ದು ಈ ಪಂದ್ಯದಲ್ಲಿ ಗೆದ್ದು ಸರಣಿಯನ್ನು ವೈಟ್‌ವಾಶ್ ಮಾಡುವ ಮೂಲಕ ವಶಕ್ಕೆ ಪಡೆಯುವ ವಿಶ್ವಾಸದಲ್ಲಿದೆ ರೋಹಿತ್ ಶರ್ಮಾ ಪಡೆ. ಮತ್ತೊಂದೆಡೆ ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ದಕ್ಷಿಣ ಆಫ್ರಿಕಾ ತಂಡ ವಿಶ್ವಕಪ್‌ಗೂ ಮುನ್ನ ಆತ್ಮವಿಶ್ವಾಸವನ್ನು ಗಳಿಸಿಕೊಳ್ಳಲಬೇಕಾದರೆ ಅಂತಿಮ ಪಂದ್ಯದಲ್ಲಾದರೂ ಗೆದ್ದು ಮುನ್ನಡೆಯುವ ನಿರೀಕ್ಷೆಯಲ್ಲಿದೆ.

ದಕ್ಷಿಣ ಆಫ್ರಿಕಾ ಆಡುವ ಬಳಗ
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ(ನಾಯಕ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ರಿಲೇ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ

ಭಾರತ ಆಡುವ ಬಳಗ
ಟೀಮ್ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ರಿಷಬ್ ಪಂತ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications