ಭಾರತ vs ದ. ಆಫ್ರಿಕಾ 3ನೇ ಟಿ20, ಟಾಸ್ ಸೋತ ಭಾರತ, ಆಡುವ ಬಳಗ ಹಾಗೂ Live ಸ್ಕೋರ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯ ಆರಂಭವಾಗಿದೆ. ವೈಜಾಗ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಭಾರತ ತಂಡ ಮತ್ತೊಮ್ಮೆ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಎದುರಾಳಿಗೆ ಗುರಿ ನಿಗದಿಪಡಿಸುವ ಸವಾಲು ಸ್ವೀಕರಿಸಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಮೊದಲ ಎರಡು ಪಂದ್ಯಗಳನ್ನು ಕೂಡ ಭಾರತ ಸೋತಿದೆ. ಹೀಗಾಗಿ ಈ ಪಂದ್ಯದಲ್ಲಿ ಭಾರತ ತಂಡ ಗೆಲ್ಲಲೇಬೇಕಾದ ಒತ್ತಡವಿದೆ. ದಕ್ಷಿಣ ಆಫ್ರಿಕಾ ಈ ಪಂದ್ಯವನ್ನು ಗೆದ್ದರೆ ಐದು ಪಂದ್ಯಗಳ ಈ ಸರಣಿಯನ್ನು ತನ್ನ ವಶಕ್ಕೆ ಪಡೆದಂತಾಗುತ್ತದೆ.
Live ಸ್ಕೋರ್ ಹೀಗಿದೆ
ಈ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಎರಡು ತಂಡಗಳು ಕೂಡ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದೆ. ಕಳೆದ ಪಂದ್ಯದಲ್ಲಿ ಆಡಿದ ಎಲ್ಲಾ ಆಟಗಾರರು ಕೂಡ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದು ವೈಜಾಗ್ ಅಂಗಳದಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.
ಸತತ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಭಾರತ ತಂಡದಲ್ಲಿ ಮೂರನೇ ಪಂದ್ಯದಲ್ಲಿ ಒಂದಷ್ಟು ಬದಲಾವಣೆ ಮಾಡಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಮ್ಯಾನೇಜ್‌ಮೆಂಟ್ ಮೂರನೇ ಪಂದ್ಯದಲ್ಲಿಯೂ ಯಾವುದೇ ಬದಲಾವನೆ ಮಾಡಡಿದಲು ನಿರ್ಧರಿಸಿದೆ. ಹೀಗಾಗಿ ರತುರಾಜ್ ಗಾಯಕ್ವಾಡ್‌ಗೆ ಮತ್ತೊಂದು ಅವಕಾಶ ದೊರೆತಿದೆ. ಬೌಲರ್‌ಗಳಾದ ಅರ್ಷ್‌ದೀಪ್, ಉಮ್ರಾನ್ ಮಲಿಕ್ ಅವರಂಥಾ ಬೌಲರ್‌ಗಳು ಅವಕಾಶಕ್ಕಾಗಿ ಮತ್ತಷ್ಟು ಕಾಯಬೇಕಾಗಿದೆ.
ಆಡುವ ಬಳಗ ಹೀಗಿದೆ:
ಭಾರತ ತಂಡ: ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್
ಬೆಂಚ್: ರವಿ ಬಿಷ್ಣೋಯ್, ದೀಪಕ್ ಹೂಡಾ, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ರೀಜಾ ಹೆಂಡ್ರಿಕ್ಸ್, ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಅನ್ರಿಚ್ ನಾರ್ಕಿಯಾ
ಬೆಂಚ್: ಟ್ರಿಸ್ಟಾನ್ ಸ್ಟಬ್ಸ್, ಲುಂಗಿ ಎನ್ಗಿಡಿ, ಮಾರ್ಕೊ ಜಾನ್ಸೆನ್, ಕ್ವಿಂಟನ್ ಡಿ ಕಾಕ್, ಐಡೆನ್ ಮಾರ್ಕ್ರಾಮ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications