ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ದ. ಆಫ್ರಿಕಾ 3ನೇ ಟೆಸ್ಟ್: ಕೇಪ್‌ಟೌನ್ ಪಿಚ್ ರಿಪೋರ್ಟ್, ಹವಾಮಾನ ವರದಿ ಹಾಗೂ ಅಂಕಿಅಂಶಗಳು

India vs South Africa 3rd Test 2022: Newlands Cape Town Stadium Pitch Report, Weather Forecast Update
South Africa ಹಾಗು India ನಡುವಿನ ಮೂರನೇ ಪಂದ್ಯಕ್ಕೆ Kohli ಸಿದ್ಧ! | Oneindia Kannada

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳು ಮುಕ್ತಾಯವಾಗಿದ್ದು ಎರಡು ತಂಡಗಳು ಕೂಡ ತಲಾ ಒಂದೊಂದು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಸರಣಿ ಸಮಬಲದಲ್ಲಿದೆ. ಸರಣಿಯ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಮಂಗಳವಾರ ಆರಂಭವಾಗಲಿದ್ದು ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ.

ಸದ್ಯ ಭಾರತ ಹಾಗೂ ದಕ್ಷಿಣ ಆಪ್ರಿಕಾ ಎರಡು ತಂಡಗಳು ಕೂಡ ಈ ಪಂದ್ಯದಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ. ಹೀಗಾಗಿ ಸರಣಿ ಗೆಲ್ಲಲು ಎರಡು ತಂಡಗಳಿಗೂ ಅಂತಿಮ ಪಮದ್ಯ ನಿರ್ಣಾಯಕವಾಗಿದ್ದು ಪಂದ್ಯ ತೀವ್ರ ಕುತೂಹಲ ಮೂಡಿಸಿದೆ. ಭಾರತ ದಕ್ಷಿಣ ಆಫ್ರಿಕಾ ನೆಲದಲ್ಲಿ ಈವರೆಗೆ ಟೆಸ್ಟ್ ಸರಣಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ ಭಾರತ ಆರಂಭಿಕ ಪಂದ್ಯದಲ್ಲಿಯೇ ಗೆಲುವು ಸಾಧಿಸಿದ್ದ ಕಾರಣದಿಂದಾಗಿ ಈ ಬಾರಿ ಸರಣಿ ಗೆಲ್ಲುವ ಆತ್ಮ ವಿಶ್ವಾಸ ಹೆಚ್ಚಾಗಿದೆ. ಎರಡನೇ ಪಂದ್ಯದಲ್ಲಿ ಸೋಲು ಕಂಡಿದ್ದರೂ ಕೇಪ್‌ಟೌನ್‌ನಲ್ಲಿ ನಡೆಯಲಿರುವ ಸರಣಿಯ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲ್ಲುವ ಅವಕಾಶವನ್ನು ಹೊಂದಿದೆ. ಅಲ್ಲದೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮರಳುವ ಕಾರಣ ತಂಡದ ಆತ್ಮ ವಿಶ್ವಾಸ ಹೆಚ್ಚಲಿದೆ.

ಸಚಿನ್ ಮಗಳು ಸಾರಾ ಮತ್ತು ಶುಭ್ಮನ್ ಗಿಲ್‌ ಡೇಟಿಂಗ್? ಫೋಟೊಗಳಿಂದ ನೆಟಿಜನ್‌ಗಳ ಕೈಗೆ ಸಿಕ್ಕಿಬಿದ್ದರು!ಸಚಿನ್ ಮಗಳು ಸಾರಾ ಮತ್ತು ಶುಭ್ಮನ್ ಗಿಲ್‌ ಡೇಟಿಂಗ್? ಫೋಟೊಗಳಿಂದ ನೆಟಿಜನ್‌ಗಳ ಕೈಗೆ ಸಿಕ್ಕಿಬಿದ್ದರು!

ಅಂತಿಮ ಟೆಸ್ಟ್ ಪಂದ್ಯ ನಡೆಯಲಿರುವ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದ ಪಿಚ್ ರಿಪೋರ್ಟ್ ಹೇಗಿದೆ? ಹವಾಮಾನ ಹೇಗಿರಲಿದೆ? ಇನ್ನು ಈ ಕ್ರೀಡಾಂಗಣದಲ್ಲಿನ ಅಂಕಿಅಂಶಗಳ ಕುತೂಹಲಕಾರಿ ಮಾಹಿತಿ ಇಲ್ಲಿದೆ. ಮುಂದೆ ಓದಿ..

ಕೇಪ್‌ಟೌನ್ ಹವಾಮಾನ ವರದಿ

ಕೇಪ್‌ಟೌನ್ ಹವಾಮಾನ ವರದಿ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿಯೂ ಮಳೆ ಅಡ್ಡಿಯುಂಟು ಮಾಡುವ ಸಾಧ್ಯತೆಯಿದೆ. ಅದರಲ್ಲೂ ಮೊದಲ ದಿನ ಮಳೆ ಕೆಲ ಕಾಲ ಪಂದ್ಯಕ್ಕೆ ಅಡ್ಡಿಪಡಿಸುವ ಸಾಧ್ಯತೆಯಿದೆ. ವಾತಾವರಣದಲ್ಲಿನ ತೇವಾಂಶ ಕೂಡ ಹೆಚ್ಚಾಗಿರಲಿದ್ದು ಇದು ಮಳೆಯ ಸಾಧ್ಯತೆಯನ್ನು ಹೆಚ್ಚಿಸಬಹುದು ಎಂದು ಹೇಳಲಾಗುತ್ತಿದೆ. ಆದರೆ ಪಂದ್ಯದ ಫಲಿತಾಂಶಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ.

ನ್ಯೂಲ್ಯಾಂಡ್ಸ್ ಪಿಚ್‌ ರಿಪೋರ್ಟ್

ನ್ಯೂಲ್ಯಾಂಡ್ಸ್ ಪಿಚ್‌ ರಿಪೋರ್ಟ್

ನ್ಯೂಲ್ಯಾಂಡ್ಸ್ ಪಿಚ್ ಜೋಹಾನ್ಸ್‌ಬರ್ಗ್‌ಗಿಂತ ಭಿನ್ನವಾಗಿದೆ. ಜೊಹನ್ಸ್‌ಬರ್ಗ್ ಕ್ರೀಡಾಂಗಣ ಲರ್‌ಗಳಿಗೆ ಬೌನ್ಸ್ ರೂಪದಲ್ಲಿ ಸಾಕಷ್ಟು ನೆರವು ನೀಡಿತು. ಆದರೆ ಇಲ್ಲಿ ಬೌನ್ಸ್ ಇಲ್ಲದಿರುವುದರಿಂದಾಗಿ ಹಾಗೂ ಉತ್ತಮ ಔಟ್‌ಫೀಲ್ಡ್ ಅನ್ನು ಹೊಂದಿರುವ ಕಾರಣದಿಂದಾಗಿ ಬ್ಯಾಟ್ಸ್‌ಮನ್‌ಗಳ ಪಾಲಿಗೆ ಸಿಳಬವಾಗಿರಲಿದೆ. ಆದರೆ ಈ ಪಿಚ್‌ನಲ್ಲಿ ಸ್ಪಿನ್ನರ್‌ಗಳು ಹೆಚ್ಚಿನ ನೆಲವು ನೀಡುವ ಸಾಧ್ಯತೆ ಕೂಡ ಇದೆ.

ನೇರಪ್ರಸಾರದ ಮಾಹಿತಿ

ನೇರಪ್ರಸಾರದ ಮಾಹಿತಿ

ಭಾರತದಲ್ಲಿ ಈ ಪಂದ್ಯದ ನೇರ ಪ್ರಸಾರದ ಹಕ್ಕು ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್ ಹೊಂದಿದ್ದು ಸ್ಟಾರ್‌ಸ್ಪೋರ್ಟ್ಸ್ ವಾಹಿನಿಯಲ್ಲಿ ಪಂದ್ಯ ನೇರಪ್ರಸಾರವಾಗಲಿದೆ. ಅಲ್ಲದೆ ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರರು ಈ ವೇದಿಕೆಯಲ್ಲಿ ಕೂಡ ಪಂದ್ಯವನ್ನು ವೀಕ್ಷಿಸುವ ಅವಕಾಶವನ್ನು ನೀಡಲಾಗಿದೆ.

ಕೇಪ್‌ಟೌನ್‌ನ ಅಂಕಿಅಂಶಗಳು

ಕೇಪ್‌ಟೌನ್‌ನ ಅಂಕಿಅಂಶಗಳು

ಅತಿ ಹೆಚ್ಚು ನರ್‌ಗಳಿಸಿದ ಆಟಗಾರರು: ಸಚಿನ್ ತೆಂಡೂಲ್ಕರ್ ಈ ತಾಣದಲ್ಲಿ ಭಾರತದ ಪರವಾಗಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಮುಂಬೈಕರ್ ಇಲ್ಲಿ 4 ಟೆಸ್ಟ್‌ಗಳನ್ನು ಆಡಿದ್ದು 81.50 ಸರಾಸರಿಯಲ್ಲಿ 2 ಶತಕ ಮತ್ತು 2 ಅರ್ಧಶತಕಗಳ ನೆರವಿನಿಂದ 489 ರನ್ ಗಳಿಸಿದ್ದಾರೆ. ಪ್ರಸ್ತುತ ಭಾರತೀಯ ತಮಡದ ಯಾವ ಆಟಗಾರ ಕೂಡ ಈ ಮೈದಾನದಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ದಕ್ಷಿಣ ಆಫ್ರಿಕಾದ ನಾಯಕ ಡೀನ್ ಎಲ್ಗರ್ 10 ಪಂದ್ಯಗಳನ್ನು ಆಡಿದ್ದಯ 50.57ರ ಸರಾಸರಿಯಲ್ಲಿ ಬ್ಯಾಟಿಂಗ್ ನಡೆಸಿದ್ದಾರೆ. 2 ಶತಕ ಮತ್ತು 3 ಅರ್ಧಶತಕಗಳೊಂದಿಗೆ 708 ರನ್ ಗಳಿಸಿ ಈ ಮೈದಾನದಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ.

ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳು: ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗಿ ಡೇಲ್ ಸ್ಟೇಯ್ನ್ 15 ಪಂದ್ಯಗಳಿಂದ 74 ವಿಕೆಟ್‌ಗಳನ್ನು ಸಂಪಾದಿಸಿದ್ದು ಈ ಮೈದಾನದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಪ್ರಸ್ತುತ ತಂಡದಲ್ಲಿರುವ ಆಟಗಾರರ ಪೈಕಿ, ಕಗಿಸೊ ರಬಾಡ 6 ಟೆಸ್ಟ್‌ಗಳಿಂದ 35 ವಿಕೆಟ್‌ಗಳನ್ನು ಕಬಳಿಸುವ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ಈಗಿನ ಯಾವುದೇ ಭಾರತೀಯ ಬೌಲರ್‌ಗಳು ಅಗ್ರ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಭಾರತದ ಪರ ಮಾಜಿ ವೇಗಿ ಜಾವಗಲ್ ಶ್ರೀನಾಥ್ 2 ಟೆಸ್ಟ್ ಪಂದ್ಯಗಳಿಂದ 12 ವಿಕೆಟ್ ಪಡೆದು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಅನಿಲ್ ಕುಂಬ್ಳೆ 3 ಟೆಸ್ಟ್‌ಗಳಿಂದ 11 ವಿಕೆಟ್‌ಗಳನ್ನು ಕಬಳಿಸಿದ್ದಾರೆ ಮತ್ತು ಜಹೀರ್ ಖಾನ್ 2 ಪಂದ್ಯಗಳಿಂದ 9 ವಿಕೆಟ್ ಪಡೆದಿದ್ದಾರೆ.

ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ಹೆಡ್ ಟು ಹೆಡ್

ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ಹೆಡ್ ಟು ಹೆಡ್

ಕೇಪ್‌ಟೌನ್‌ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ಭಾರತ ಅತ್ಯಂತ ಕಳಪೆ ದಾಖಲೆಯನ್ನು ಹೊಂದಿದೆ. ಭಾರತ ಈವರೆಗೆ ಈ ಪಂದ್ಯದಲ್ಲಿ ಐದು ಪಂದ್ಯಗಳನ್ನು ಆಡಿದ್ದು ಒಂದರಲ್ಲಿಯೂ ಗೆಲುವು ಸಾಧಿಸಿಲ್ಲ. ಮೂರು ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಗೆದ್ದಿದ್ದರೆ ಎರಡು ಪಂದ್ಯಗಳು ಡ್ರಾ ಫಲಿತಾಂಶವನ್ನು ಪಡೆದುಕೊಂಡಿತ್ತು.

ಭಾರತ ಹಾಗೂ ದಕ್ಷಿಣ ಆಫ್ರಿಕಾದ ಸಂಭಾವ್ಯ ತಂಡಗಳು

ಭಾರತ ಹಾಗೂ ದಕ್ಷಿಣ ಆಫ್ರಿಕಾದ ಸಂಭಾವ್ಯ ತಂಡಗಳು

ಭಾರತದ ಸಂಭಾವ್ಯ ತಂಡ: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಬ್ ಪಂತ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್ / ಇಶಾಂತ್ ಶರ್ಮಾ.

ದಕ್ಷಿಣ ಆಫ್ರಿಕಾ ಸಂಭಾವ್ಯ ತಂಡ: ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ (ವಿಕಟ್ ಕೀಪರ್), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ, ಲುಂಗಿ ಎನ್ಗಿಡಿ, ಡುವಾನ್ನೆ ಒಲಿವಿಯರ್.

Story first published: Monday, January 10, 2022, 23:03 [IST]
Other articles published on Jan 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X