For Quick Alerts
ALLOW NOTIFICATIONS  
For Daily Alerts
 

ಭಾರತ vs ದಕ್ಷಿಣ ಆಫ್ರಿಕಾ, 3ನೇ ಟೆಸ್ಟ್, Live: ಶತಕ ಬಾರಿಸಿದ ರೋಹಿತ್

India vs South Africa, 3rd Test, Day 1 - Live Score

ರಾಂಚಿ, ಅಕ್ಟೋಬರ್ 19: ರಾಂಚಿಯಲ್ಲಿರುವ ಜೆಎಸ್‌ಸಿಎ ಇಂಟರ್ ನ್ಯಾಷನಲ್ ಸ್ಟೇಡಿಯಂ ಕಾಂಪ್ಲೆಕ್ಸ್‌ನಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ಮತ್ತು ಟೀಮ್ ಇಂಡಿಯಾ 3ನೇ ಮತ್ತು ಕೊನೆಯ ಟೆಸ್ಟ್ ಪಂದ್ಯಕ್ಕಾಗಿ ಮೈದಾನಕ್ಕಿಳಿದಿವೆ. ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ.

ಇನ್ನಿಂಗ್ಸ್‌ ಆರಂಭಿಸಿರುವ ಭಾರತದಿಂದ ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ 10, ಚೇತೇಶ್ವರ ಪೂಜಾರ 0, ವಿರಾಟ್ ಕೊಹ್ಲಿ 12 ರನ್ ಬಾರಿಸಿ ಔಟ್ ಆಗಿದ್ದಾರೆ. ಆದರೆ ರೋಹಿತ್ ಶರ್ಮಾ ಶತಕ (117*), ಅಜಿಂಕ್ಯ ರಹಾನೆ (83*) ಅರ್ಧ ಶತಕದ ನೆರವು ತಂಡಕ್ಕೆ ಲಭಿಸಿದೆ. ಮೊದಲ ದಿನದಾಟದ ಅಂತ್ಯಕ್ಕೆ ಭಾರತ 58 ಓವರ್‌ಗೆ 3 ವಿಕೆಟ್ ಕಳೆದು 224 ರನ್ ಮಾಡಿದೆ.

3 ಪಂದ್ಯಗಳ ಈ ಟೆಸ್ಟ್ ಸರಣಿಯ ಮೊದಲೆರಡೂ ಪಂದ್ಯಗಳು ಭಾರತ ಪಾಲಾಗಿದೆ. ಸರಣಿ ಕೂಡ 2-0ಯಿಂದ ಭಾರತ ಜಯಿಸಿದೆ. 3ನೇ ಪಂದ್ಯದಲ್ಲೂ ದೇಸಿ ತಂಡ ಮೇಲುಗೈ ಸಾಧಿಸುವ ನಿರೀಕ್ಷೆಯಿದೆ. ಶಹಬಾಝ್‌ ನದೀಮ್ ಭಾರತದ ಪ್ಲೇಯಿಂಗ್ XIನಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತ vs ದ.ಆಫ್ರಿಕಾ, 3ನೇ ಟೆಸ್ಟ್, 1ನೇ ದಿನ Live ಸ್ಕೋರ್‌ಕಾರ್ಡ್

1
46115

ಭಾರತ ತಂಡ: ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ವೃದ್ಧಿಮಾನ್ ಸಹಾ (ವಿಕೆ), ರವಿಚಂದ್ರನ್ ಅಶ್ವಿನ್, ಶಹಬಾಜ್ ನದೀಮ್, ಉಮೇಶ್ ಯಾದವ್, ಮೊಹಮ್ಮದ್ ಶಮಿ.

ದಕ್ಷಿಣ ಆಫ್ರಿಕಾ ತಂಡ: ಡೀನ್ ಎಲ್ಗರ್, ಕ್ವಿಂಟನ್ ಡಿ ಕಾಕ್, ಜುಬೇರ್ ಹಮ್ಜಾ, ಫಾಫ್ ಡು ಪ್ಲೆಸಿಸ್ (ಸಿ), ತೆಂಬ ಬವುಮಾ, ಹೆನ್ರಿಕ್ ಕ್ಲಾಸೆನ್ (ವಿಕೆ), ಜಾರ್ಜ್ ಲಿಂಡೆ, ಡೇನ್ ಪೀಡ್ಟ್, ಕಾಗಿಸೊ ರಬಾಡಾ, ಅನ್ರಿಕ್ ನಾರ್ಟ್ಜೆ, ಲುಂಗಿ ಎನ್‌ಗಿಡಿ.

Story first published: Saturday, October 19, 2019, 16:01 [IST]
Other articles published on Oct 19, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+