Ind vs SA 4ನೇ ಟಿ20; ಟಾಸ್ ಸೋತ ಭಾರತ, ಆಡುವ ಬಳಗ ಹಾಗೂ Live ಸ್ಕೋರ್

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ನಾಲ್ಕನೇ ಪಂದ್ಯ ಇಂದು (ಶುಕ್ರವಾರ, ಜೂನ್ 17) ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲ ಮನೆಮಾಡಿದೆ.
ನಿರ್ಣಾಯಕ ನಾಲ್ಕನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಬವುಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ರಿಷಭ್ ಪಂತ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಭಾರತ ಪ್ರವಾಸವನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾ 5 ಪಂದ್ಯಗಳ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದು 2-1 ಅಂತರದ ಮುನ್ನಡೆ ಕಾಯ್ದುಕೊಂಡಿದ್ದು, ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿ ಕೈವಶ ಮಾಡಿಕೊಳ್ಳುವ ಯತ್ನದಲ್ಲಿದೆ. ಇನ್ನು ಕಳೆದ ವಿಶಾಖಪಟ್ಟಣ ಪಂದ್ಯದಂತೆ ಗೆದ್ದು ಸರಣಿ ಸಮಬಲಗೊಳಿಸಲು ರಿಷಭ್ ಪಂತ್ ಪಡೆ ಯೋಚಿಸುತ್ತಿದೆ.
ದಕ್ಷಿಣ ಆಫ್ರಿಕಾ ಸರಣಿಯನ್ನು ಕೈವಶಪಡಿಸಿಕೊಳ್ಳಬೇಕೆಂದರೆ ಉಳಿದೆರಡು ಪಂದ್ಯಗಳಲ್ಲಿ ಯಾವುದಾದರೂ ಒಂದು ಪಂದ್ಯವನ್ನು ಗೆದ್ದರೂ ಸಾಕಾಗಿದೆ. ಆದರೆ ಟೀಮ್ ಇಂಡಿಯಾ ಸರಣಿ ಗೆದ್ದು ತವರಿನಲ್ಲಿ ಮುಖಭಂಗದಿಂದ ಪಾರಾಗಬೇಕೆಂದರೆ ಉಳಿದ ಎರಡೂ ಪಂದ್ಯಗಳಲ್ಲಿಯೂ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಎರಡು ತಂಡಗಳ ಆಡುವ 11ರ ಬಳಗ
ಭಾರತ: ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಕೇಶವ್ ಮಹಾರಾಜ್, ಮಾರ್ಕೊ ಜಾನ್ಸೆನ್, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ, ಅನ್ರಿಚ್ ನಾರ್ಕಿಯಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications