Ind vs SA 4ನೇ ಟಿ20: ದಕ್ಷಿಣ ಆಫ್ರಿಕಾವನ್ನು ಬಗ್ಗುಬಡಿದ ಭಾರತ; ಬೆಂಗಳೂರಿನಲ್ಲಿ ನಿರ್ಣಾಯಕ ಪಂದ್ಯ!

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ನಾಲ್ಕನೇ ಪಂದ್ಯ ಇಂದು (ಶುಕ್ರವಾರ, ಜೂನ್ 17) ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆದ 4ನೇ ಟಿ20 ಪಂದ್ಯದಲ್ಲಿ ಭಾರತ ತಂಡ 82 ರನ್‌ಗಳ ಅಂತರದಿಂದ ಗೆದ್ದು ಬೀಗಿದ್ದು, ಐದು ಪಂದ್ಯಗಳ ಸರಣಿಯಲ್ಲಿ 2-2 ಸಮಬಲ ಸಾಧಿಸಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಬವುಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ರಿಷಭ್ ಪಂತ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿ, ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತ್ತು. ದಕ್ಷಿಣ ಆಫ್ರಿಕಾಕ್ಕೆ 170 ರನಗಳ ಸವಾಲಿನ ಗುರಿ ನೀಡಿತ್ತು.

ತೆಂಬಾ ಬವುಮಾ ಗಾಯದಿಂದ ನಿವೃತ್ತಿ
ಸವಾಲಿನ ಮೊತ್ತವನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ 87 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡಿತು ಮತ್ತು ನಾಯಕ ತೆಂಬಾ ಬವುಮಾ ಗಾಯದಿಂದ ನಿವೃತ್ತರಾದರು. ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಹೋದ ದಕ್ಷಿಣ ಆಫ್ರಿಕಾ ಪರ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (20), ಕ್ವಿಂಟನ್ ಡಿ ಕಾಕ್ (14) ಮತ್ತು ಮಾರ್ಕೊ ಜಾನ್ಸೆನ್ (12) ಬಿಟ್ಟರೆ ಉಳಿದವರಾರು ಪ್ರತಿರೋಧ ತೋರಲಿಲ್ಲ.
ಭಾರತ ಪ್ರವಾಸವನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾ 5 ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಎರಡು ಪಂದ್ಯಗಳನ್ನು ದಕ್ಷಿಣ ಆಫ್ರಿಕಾ ಗೆದ್ದಿದ್ದರೆ, ನಂತರದ ಎರಡು ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದೆ. ಹೀಗಾಗಿ ಸರಣಿಯಲ್ಲಿ 2-2 ಸಮಬಲ ಸಾಧಿಸಿದ್ದು, ನಿರ್ಣಾಯಕ ಪಂದ್ಯ ಬೆಂಗಳೂರಿನಲ್ಲಿ ಜೂನ್ 19ರಂದು ನಡೆಯಲಿದ್ದು, ಅಲ್ಲಿ ಗೆದ್ದ ತಂಡ ಸರಣಿಯಲ್ಲಿ ಮೇಲುಗೈ ಸಾಧಿಸಲಿದೆ.

ಭಾರತದ ಬೌಲಿಂಗ್ ಪ್ರದರ್ಶನ
ಇನ್ನು ಬೌಲಿಂಗ್‌ನಲ್ಲಿ ಭಾರತದ ಪರ ಎಲ್ಲ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದರು. ವೇಗಿ ಅವೇಶ್ ಖಾನ್ 4 ಓವರ್‌ಗಳಲ್ಲಿ 18 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದು ಮಿಂಚಿದರು. ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ 4 ಓವರ್‌ಗಳಲ್ಲಿ 21 ರನ್ ನೀಡಿ ಪ್ರಮುಖ 2 ವಿಕೆಟ್ ಪಡೆದರು. ಉಳಿದಂತೆ ಹರ್ಷಲ್ ಪಟೇಲ್ ಮತ್ತು ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ಬೀಳಿಸಿದರು.

ಭಾರತದ ಬ್ಯಾಟಿಂಗ್ ಪ್ರದರ್ಶನ
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ಆಧಾರ ಸ್ತಂಭವಾಗಿ ಬ್ಯಾಟ್ ಬೀಸಿದ ಹಾರ್ದಿಕ್ ಪಾಂಡ್ಯ(31 ಎಸೆತಗಳಲ್ಲಿ 46 ರನ್) ಮತ್ತು ದಿನೇಶ್ ಕಾರ್ತಿಕ್ (27 ಎಸೆತಗಳಲ್ಲಿ 55 ರನ್) ಗಳಿಸಿ ಸವಾಲಿನ ಮೊತ್ತ ಪೇರಿಸಲು ನೆರವಾದರು.
ಇದಕ್ಕೂ ಮೊದಲು ಇನ್ನಿಂಗ್ಸ್ ಆರಂಭಿಸಿದ ಇಶಾನ್ ಕಿಶನ್ ಮತ್ತು ರುತುರಾಜ್ ಗಾಯಕ್ವಾಡ್ ಉತ್ತಮ ಜೊತೆಯಾಟ ನೀಡುವಲ್ಲಿ ವಿಫಲರಾದರು. 5 ರನ್ ಗಳಿಸಿದ್ದ ಗಾಯಕ್ವಾಡ್, ಲುಂಗಿ ಎನ್‌ಗಿಡಿ ಬೌಲಿಂಗ್‌ನಲ್ಲಿ ಔಟ್ ಆದರು. ಆನಂತರ ಬಂದ ಶ್ರೇಯಸ್ ಅಯ್ಯರ್ (4) ಕೂಡ ಅಬ್ಬರಿಸುವ ಮೊದಲೇ ಪೆವಿಲಿಯನ್ ಕಡೆ ಮುಖ ಮಾಡಿದರು.
ಇನ್ನು ಸರಣಿಯುದ್ದಕ್ಕೂ ಉತ್ತಮ ಫಾರ್ಮ್‌ನಲ್ಲಿರುವ ಇಶಾನ್ ಕಿಶನ್ (27) ಅಬ್ಬರಿಸುವ ಸೂಚನೆ ನೀಡುತ್ತಿರುವಾಗಲೇ ಅನ್ರಿಚ್ ನಾರ್ತ್ಜೆ ಬೌಲಿಂಗ್‌ನಲ್ಲಿ ಕೀಪರ್‌ಗೆ ವಿಕೆಟ್ ಒಪ್ಪಿಸಿದರು. ನಾಯಕ ರಿಷಭ್ ಪಂತ್ (17) ನಿರ್ಣಾಯಕ ಪಂದ್ಯದಲ್ಲೂ ವಿಫಲರಾದರು.

ದಕ್ಷಿಣ ಆಫ್ರಿಕಾ ಬೌಲಿಂಗ್ ಪ್ರದರ್ಶನ
ದಕ್ಷಿಣ ಆಫ್ರಿಕಾ ಪರ ಬೌಲಿಂಗ್‌ನಲ್ಲಿ ಲುಂಗಿ ಎನ್‌ಗಿಡಿ 3 ಓವರ್‌ಗಳಲ್ಲಿ 20 ರನ್ ನೀಡಿ 2 ವಿಕೆಟ್ ಪಡೆದರೆ, ಕೇಶವ್ ಮಹಾರಾಜ್, ಮಾರ್ಕೊ ಜಾನ್ಸೆನ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ತ್ಜೆ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications