4ನೇ ಟಿ20 ಪಂದ್ಯ: ಭಾರತಕ್ಕೆ ಆತಂಕ ಮೂಡಿಸಿದೆ ದಕ್ಷಿಣ ಆಫ್ರಿಕಾ ಕ್ಯಾಂಪ್‌ನಿಂದ ಬಂದ ಈ ಸುದ್ದಿ!

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಎರಡು ಪಂದ್ಯಗಳು ಮಾತ್ರವೇ ಬಾಕಿಯಿದ್ದು ಭಾರತ ತಂಡಕ್ಕೆ ಮುಂದಿನ ಎರಡು ಪಂದ್ಯಗಳು ಕೂಡ ನಿರ್ಣಾಯಕ. ವೈಜಾಗ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯವನ್ನು ಗೆದ್ದು ಆತ್ಮವಿಶ್ವಾಸ ಗಳಿಸಿಕೊಂಡಿರುವ ಭಾರತ ತಂಡ ರಾಜ್ ಕೊಟ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆದ್ದು ಸರಣಿಯನ್ನು ಸಮಬಲಗೊಳಿಸುವ ಪ್ರಯತ್ನ ನಡೆಸಲಿದೆ.
ಆದರೆ ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ತಂಡದ ಕ್ಯಾಂಪ್‌ನಿಂದ ಸುದ್ದಿಯೊಂದು ಬಂದಿದ್ದು ಇದು ಟೆಂಬಾ ಬವುಮಾ ಪಡೆಗೆ ಹೊಸ ಹುರುಪು ಮೂಡಿಸಿದೆ. ಆದರೆ ಈ ಸುದ್ದಿ ಭಾರತೀಯ ಕ್ರಿಕೆಟ್ ತಂಡದ ಪಾಳಯಕ್ಕೆ ಸಣ್ಣ ಆರಂಭಕ್ಕೂ ಕಾರಣವಾಗಿದೆ. ಸರಣಿಯಲ್ಲಿ ಸಮಬಲ ಸಾಧಿಸುವ ಗುರಿಯಿಟ್ಟುಕೊಂಡಿರುವ ಪಂತ್ ಪಡೆಗೆ ಈ ಸಂಗತಿ ಹಿನ್ನಡೆಯುಂಟು ಮಾಡಿದರೆ ಅಚ್ಚರಿಯಿಲ್ಲ.

ದ. ಆಫ್ರಿಕಾ ಗೆಲುವಿನ ಓಟಕ್ಕೆ ಬ್ರೇಕ್
ಭಾರತ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಬೀಗುತ್ತಿದ್ದ ದಕ್ಷಿಣ ಆಫ್ರಿಕಾ ತಂಡ ಮೂರನೇ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದೆ. ಹೀಗಾಗಿ ಹರಿಣಗಳ ಗೆಲುವಿನ ಓಟಕ್ಕೆ ತಡೆ ಬಿದ್ದಂತಾಗಿದೆ. ಭಾರತ ಕ್ರಿಕೆಟ್ ತಂಡ ಇತರ ಎಲ್ಲಾ ದೇಶಗಳ ವಿರುದ್ಧವೂ ಗೆಲುವು ಸಾಧಿಸುತ್ತಾ ಮುನ್ನುಗ್ಗುತ್ತಿದ್ದರೆ ದಕ್ಷಿಣ ಆಫ್ರಿಕಾ ತಂಡ ಭಾರತದ ವಿರುದ್ಧ ಅಮೋಘ ಯಶಸ್ಸು ಸಾಧಿಸಿತ್ತು. ಎಲ್ಲಾ ಮಾದರಿಯನ್ನು ದೃಷ್ಟಿಯಲ್ಲಿಟ್ಟುಕೊಂಡರೆ ಸತತ ಏಳು ಪಂದ್ಯಗಳಲ್ಲಿ ಭಾರತ ತಂಡವನ್ನು ದಕ್ಷಿಣ ಆಫ್ರಿಕಾ ಮಣಿಸಿತ್ತು. ಆದರೆ ಕಡೆಗೂ ಭಾರತ ತಂಡ ತಂಡ ಈ ಸೋಲಿನ ಸುಳಿಯಿಂದ ಹೊರಬಂದಿದೆ.

ನಾಲ್ಕನೇ ಪಂದ್ಯಕ್ಕೆ ಫಿಟ್ ಆಗಿದ್ದಾರೆ ಪ್ರಮುಖ ಆಟಗಾರ
ಭಾರತದ ವಿರುದ್ಧದ ಅಂತಿಮ ಎರಡು ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದರೆ ದಕ್ಷಿಣ ಆಫ್ರಿಕಾ ತಂಡ ಸರಣಿಯನ್ನು ತನ್ನ ವಶಕ್ಕೆ ಪಡೆಯಲಿದೆ. ಈ ಮಹತ್ವದ ಪಂದ್ಯಕ್ಕೆ ದಕ್ಷಿಣ ಆಫ್ರಿಕಾದ ಪ್ರಮುಖ ಆಟಗಾರ ಕ್ವಿಂಟನ್ ಡಿಕಾಕ್ ಮರಳಲು ಸಜ್ಜಾಗಿದ್ದಾರೆ. ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕ್ವಿಂಟನ್ ಡಿಕಾಕ್ ನಂತರದ ಎರಡು ಪಂದ್ಯಗಳಲ್ಲಿ ಗಾಯದ ಕಾರಣದಿಂದಾಗಿ ಹೊರಗುಳಿದಿದ್ದರು. ಇದೀಗ ನಾಲ್ಕನೇ ಪಂದ್ಯದಲ್ಲಿ ಆಡಲು ಡಿಕಾಕ್ ಸಮರ್ಥರಾಗಿದ್ದಾರೆ ಎಂಬ ಸುದ್ದಿ ಹೊರಬಂದಿದೆ. ಅದ್ಭುತ ಫಾರ್ಮ್‌ನಲ್ಲಿರುವ ಡಿಕಾಕ್ ತಂಡಕ್ಕೆ ಮರಳುತ್ತಿರುವುದು ಹೆಚ್ಚಿನ ಬಲ ನೀಡಲಿದೆ.

ಸರಣಿಯಿಂದ ಹೊರಬೀಳುವ ಸುಳಿವು ನೀಡಿದ್ದ ಸ್ಮಿತ್
ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಕ್ವಿಂಟನ್ ಡಿಕಾಕ್ ಗಾಯದಿಂದಾಗಿ ಈ ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿಯುವ ಸಾಧ್ಯತೆಯಿದೆ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾದ ಮುಖ್ಯಸ್ಥ ಗ್ರೇಮ್ ಸ್ಮಿತ್ ಸುಳಿವು ನೀಡಿದ್ದರು. ಇಂಗ್ಲೆಂಡ್‌ಗೆ ಪ್ರವಾಸ ತೆರಳುವ ಕಾರಣ ಹೆಚ್ಚಿನ ರಿಸ್ಕ್ ತೆಗೆದುಕೊಳ್ಳಲು ಬಯಸುವುದಿಲ್ಲ ಎಂದಿದ್ದರು ಸ್ಮಿತ್. ಆದರೆ ಇದೀಗ ಕ್ವಿಂಟನ್ ಡಿಕಾಕ್ ಸಕಾರಾತ್ಮಕವಾಗಿ ಚೇತರಿಕೆ ಕಾಣುತ್ತಿದ್ದು ಮೂರನೇ ಪಂದ್ಯದ ಆಯ್ಕೆಗೆ ಲಭ್ಯವಾಗಲಿದ್ದಾರೆ ಎಂಬ ಮಾಹಿತಿ ಬಂದಿದೆ.

ಸ್ಕ್ವಾಡ್‌ಗಳು ಹೀಗಿದೆ
ಭಾರತ: ಋತುರಾಜ್ ಗಾಯಕ್‌ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್, ರವಿ ಬಿಷ್ಣೋಯ್, ದೀಪಕ್ ಹೂಡಾ, ವೆಂಕಟೇಶ್ ಸಿಂಗ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ರೀಜಾ ಹೆಂಡ್ರಿಕ್ಸ್, ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಅನ್ರಿಚ್ ನಾರ್ಟ್ಜೆ, ಟ್ರಿಸ್ಟಾನ್ ಸ್ಟಬ್ಸ್, ಲುಂಗಿ ನ್ಗಿಡಿ, ಲುಂಗಿ ಕ್ವಿಂಟನ್ ಡಿ ಕಾಕ್, ಐಡೆನ್ ಮಾರ್ಕ್ರಾಮ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications