Ind vs SA 4ನೇ ಟಿ20: ಕೊನೆಯಲ್ಲಿ ಅಬ್ಬರಿಸಿದ ಡಿಕೆ, ಹಾರ್ದಿಕ್; ಸವಾಲಿನ ಗುರಿ ನೀಡಿದ ಭಾರತ

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ನಾಲ್ಕನೇ ಪಂದ್ಯ ಇಂದು (ಶುಕ್ರವಾರ, ಜೂನ್ 17) ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲ ಮನೆಮಾಡಿದೆ.
ನಿರ್ಣಾಯಕ ನಾಲ್ಕನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಬವುಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ರಿಷಭ್ ಪಂತ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿ, ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿದ್ದು, ದಕ್ಷಿಣ ಆಫ್ರಿಕಾಕ್ಕೆ 170 ರನಗಳ ಸವಾಲಿನ ಗುರಿ ನೀಡಿದೆ.
ಮಧ್ಯಮ ಕ್ರಮಾಂಕದಲ್ಲಿ ಭಾರತ ತಂಡಕ್ಕೆ ಆಧಾರ ಸ್ತಂಭವಾಗಿ ಬ್ಯಾಟ್ ಬೀಸಿದ ಹಾರ್ದಿಕ್ ಪಾಂಡ್ಯ(31 ಎಸೆತಗಳಲ್ಲಿ 46 ರನ್) ಮತ್ತು ದಿನೇಶ್ ಕಾರ್ತಿಕ್ (27 ಎಸೆತಗಳಲ್ಲಿ 55 ರನ್) ಗಳಿಸಿ ಕುಸಿದಿದ್ದ ತಂಡಕ್ಕೆ ಆಸರೆಯಾದರು.

ಇದಕ್ಕೂ ಮೊದಲು ಇನ್ನಿಂಗ್ಸ್ ಆರಂಭಿಸಿದ ಇಶಾನ್ ಕಿಶನ್ ಮತ್ತು ರುತುರಾಜ್ ಗಾಯಕ್ವಾಡ್ ಉತ್ತಮ ಜೊತೆಯಾಟ ನೀಡುವಲ್ಲಿ ವಿಫಲರಾದರು. 5 ರನ್ ಗಳಿಸಿದ್ದ ಗಾಯಕ್ವಾಡ್, ಲುಂಗಿ ಎನ್‌ಗಿಡಿ ಬೌಲಿಂಗ್‌ನಲ್ಲಿ ಔಟ್ ಆದರು. ಆನಂತರ ಬಂದ ಶ್ರೇಯಸ್ ಅಯ್ಯರ್ (4) ಕೂಡ ಅಬ್ಬರಿಸುವ ಮೊದಲೇ ಪೆವಿಲಿಯನ್ ಕಡೆ ಮುಖ ಮಾಡಿದರು.
ಇನ್ನು ಸರಣಿಯುದ್ದಕ್ಕೂ ಉತ್ತಮ ಫಾರ್ಮ್‌ನಲ್ಲಿರುವ ಇಶಾನ್ ಕಿಶನ್ (27) ಅಬ್ಬರಿಸುವ ಸೂಚನೆ ನೀಡುತ್ತಿರುವಾಗಲೇ ಅನ್ರಿಚ್ ನಾರ್ತ್ಜೆ ಬೌಲಿಂಗ್‌ನಲ್ಲಿ ಕೀಪರ್‌ಗೆ ವಿಕೆಟ್ ಒಪ್ಪಿಸಿದರು. ನಾಯಕ ರಿಷಭ್ ಪಂತ್ (17) ನಿರ್ಣಾಯಕ ಪಂದ್ಯದಲ್ಲೂ ವಿಫಲರಾದರು.
ದಕ್ಷಿಣ ಆಫ್ರಿಕಾ ಪರ ಬೌಲಿಂಗ್‌ನಲ್ಲಿ ಲುಂಗು ಎನ್‌ಗಿಡಿ 3 ಓವರ್‌ಗಳಲ್ಲಿ 20 ರನ್ ನೀಡಿ 2 ವಿಕೆಟ್ ಪಡೆದರೆ, ಕೇಶವ್ ಮಹಾರಾಜ್, ಮಾರ್ಕೊ ಜಾನ್ಸೆನ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ತ್ಜೆ ತಲಾ ಒಂದೊಂದು ವಿಕೆಟ್ ಪಡೆದರು.
ಭಾರತ ಪ್ರವಾಸವನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾ 5 ಪಂದ್ಯಗಳ ಟಿ20 ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದು 2-1 ಅಂತರದ ಮುನ್ನಡೆ ಕಾಯ್ದುಕೊಂಡಿದ್ದು, ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿ ಕೈವಶ ಮಾಡಿಕೊಳ್ಳುವ ಯತ್ನದಲ್ಲಿದೆ. ಇನ್ನು ಕಳೆದ ವಿಶಾಖಪಟ್ಟಣ ಪಂದ್ಯದಂತೆ ಗೆದ್ದು ಸರಣಿ ಸಮಬಲಗೊಳಿಸಲು ರಿಷಭ್ ಪಂತ್ ಪಡೆ ಯೋಚಿಸುತ್ತಿದೆ.

ದಕ್ಷಿಣ ಆಫ್ರಿಕಾ ಸರಣಿಯನ್ನು ಕೈವಶಪಡಿಸಿಕೊಳ್ಳಬೇಕೆಂದರೆ ಉಳಿದೆರಡು ಪಂದ್ಯಗಳಲ್ಲಿ ಯಾವುದಾದರೂ ಒಂದು ಪಂದ್ಯವನ್ನು ಗೆದ್ದರೂ ಸಾಕಾಗಿದೆ. ಆದರೆ ಟೀಮ್ ಇಂಡಿಯಾ ಸರಣಿ ಗೆದ್ದು ತವರಿನಲ್ಲಿ ಮುಖಭಂಗದಿಂದ ಪಾರಾಗಬೇಕೆಂದರೆ ಉಳಿದ ಎರಡೂ ಪಂದ್ಯಗಳಲ್ಲಿಯೂ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಎರಡು ತಂಡಗಳ ಆಡುವ 11ರ ಬಳಗ
ಭಾರತ: ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಕೇಶವ್ ಮಹಾರಾಜ್, ಮಾರ್ಕೊ ಜಾನ್ಸೆನ್, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ, ಅನ್ರಿಚ್ ನಾರ್ತ್ಜೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications