ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs SA 5ನೇ ಟಿ20; ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್, ಆಡುವ ಬಳಗ ಹಾಗೂ Live ಸ್ಕೋರ್

India vs South Africa 5th T20 Toss Report, Live Score and Playing XI at Chinnaswamy Stadium In Bengaluru

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ನಿರ್ಣಾಯಕ ಐದನೇ ಪಂದ್ಯ ಇಂದು (ಭಾನುವಾರ, ಜೂನ್ 19) ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಸರಣಿ ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲ ಮನೆಮಾಡಿದೆ.

ಸರಣಿಯ ನಿರ್ಣಾಯಕ ಐದನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಕೇಶವ್ ಮಹಾರಾಜ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ರಿಷಭ್ ಪಂತ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಭಾರತ ಪ್ರವಾಸವನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾ 5 ಪಂದ್ಯಗಳ ಟಿ20 ಸರಣಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ತಲಾ ಎರಡು ಪಂದ್ಯಗಳನ್ನು ಗೆದ್ದಿರುವ ಉಭಯ ತಂಡಗಳು 2-2 ಅಂತರದ ಸಮಬಲ ಕಾಯ್ದುಕೊಂಡಿದ್ದಾರೆ.

ಕೊನೆಯ ಪಂದ್ಯದಲ್ಲಿ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಯತ್ನದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವಿದೆ. ಇನ್ನು ಕಳೆದ ರಾಜಕೋಟ್ ಪಂದ್ಯದಂತೆ ಗೆದ್ದು ಸರಣಿ ತನ್ನದಾಹಗಿಸಿಕೊಳ್ಳಲು ರಿಷಭ್ ಪಂತ್ ಪಡೆ ಯೋಚಿಸುತ್ತಿದೆ.

ಇನ್ನು ಪ್ರವಾಸಿ ದಕ್ಷಿಣ ಆಫ್ರಿಕಾ ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದ ನಂತರ ಮೂರು ಮತ್ತು ನಾಲ್ಕನೇ ಪಂದ್ಯಗಳನ್ನು ಸೋತಿತು. ಹೀಗಾಗಿ ಅಂತಿಮ ಪಂದ್ಯ ಎಲ್ಲರ ಗಮನ ಸೆಳೆದಿದ್ದು, ಯಾರ ಬಲ ಮೇಲಾಗಿದೆ ಎಂಬುದನ್ನು ಕಾದು ನೋಡಬೇಕಿದೆ.

ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದ ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾ ಕೊನೆಯ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಪ್ರವಾಸಿ ತಂಡದ ಸ್ಪಿನ್ನರ್ ಕೇಶವ್ ಮಹಾರಾಜ್ ನಾಯಕರಾಗಿದ್ದಾರೆ.

ಎರಡು ತಂಡಗಳ ಆಡುವ 11ರ ಬಳಗ
ಭಾರತ: ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್

ದಕ್ಷಿಣ ಆಫ್ರಿಕಾ: ಕೇಶವ್ ಮಹಾರಾಜ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಡ್ವೇನ್ ಪ್ರಿಟೋರಿಯಸ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಕಿಯಾ

Story first published: Sunday, June 19, 2022, 19:39 [IST]
Other articles published on Jun 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X