ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ: ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ಅಭಿಮಾನಿಗಳಿಗೆ ಬೇಸರದ ಸುದ್ದಿ

India vs South Africa: As per reports No crowd will be allowed for Boxing Day test match
South Africa ಸರಣಿ ಶುರುವಾಗುವ ಮುನ್ನವೇ ಕೇಳಿ ಬಂದ ಕಹಿ ಸುದ್ದಿ | Oneindia Kannada

ಇತ್ತೀಚೆಗಷ್ಟೇ ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್ ಹಾಗೂ ಟಿ ಟ್ವೆಂಟಿ ಎರಡೂ ಸರಣಿಗಳಲ್ಲಿಯೂ ಭರ್ಜರಿ ಜಯವನ್ನು ಸಾಧಿಸಿದ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿದ್ದು ಹರಿಣಗಳ ವಿರುದ್ಧ 3 ಪಂದ್ಯಗಳ ಟೆಸ್ಟ್ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಟವನ್ನು ನಡೆಸಲಿದೆ.

ಇನ್ನು ಇತ್ತಂಡಗಳ ನಡುವೆ ಮೊದಲಿಗೆ ಟೆಸ್ಟ್ ಸರಣಿ ನಡೆಯಲಿದೆ, ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಈ ಟೆಸ್ಟ್ ಸರಣಿಗೆ 18 ಆಟಗಾರರ ತಂಡವನ್ನು ಪ್ರಕಟಿಸಿದ್ದು ಕಳೆದ ಡಿಸೆಂಬರ್ 16ರಂದೇ ಟೀಮ್ ಇಂಡಿಯಾ ಆಟಗಾರರ ತಂಡ ದಕ್ಷಿಣ ಆಫ್ರಿಕಾವನ್ನು ತಲುಪಿದ್ದು ಈಗಾಗಲೇ 1 ದಿನದ ಕ್ವಾರಂಟೈನ್ ಮುಗಿಸಿ ಅಭ್ಯಾಸಗಳಲ್ಲಿ ತೊಡಗಿಕೊಂಡಿದೆ. ಹೌದು, ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಕೊರೋನಾವೈರಸ್ ಜೊತೆಗೆ ಒಮಿಕ್ರಾನ್ ವೈರಸ್ ಹಾವಳಿ ಕೂಡ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಆಟಗಾರರನ್ನು ಕ್ವಾರಂಟೈನ್ ಮಾಡಿ, ಕೊವಿಡ್ ಪರೀಕ್ಷೆ ನಡೆಸಿ ವರದಿ ನೆಗೆಟಿವ್ ಬಂದ ನಂತರವಷ್ಟೇ ಆಟಗಾರರನ್ನು ಕ್ರಿಕೆಟ್ ಸೌತ್ ಆಫ್ರಿಕಾ ಕ್ವಾರಂಟೈನ್ ನಿಯಮದಿಂದ ಬಿಡುಗಡೆಗೊಳಿಸಿತು. ಹಾಗೂ ದಕ್ಷಿಣ ಆಫ್ರಿಕಾದಲ್ಲಿ ದಿನದಿಂದ ದಿನಕ್ಕೆ ಒಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಸರಣಿ ಆರಂಭವಾಗುವುದರಲ್ಲಿ ಪ್ರಭಾವವನ್ನು ಬೀರಿತ್ತು ಮತ್ತು ಟಿ ಟ್ವೆಂಟಿ ಸರಣಿ ರದ್ದಾಗುವಂತೆ ಕೂಡ ಮಾಡಿತ್ತು. ಹೀಗೆ ಪಂದ್ಯಗಳನ್ನು ಕಡಿತ ಮಾಡುವಂತೆ ಮಾಡಿದ ಸೋಂಕಿನ ಭೀತಿ ಇದೀಗ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯದ ಮೇಲೂ ಕೂಡ ಬಿದ್ದಿದೆ.

ವಿಜಯ್ ಹಜಾರೆ ಟ್ರೋಫಿ: ರಾಜಸ್ಥಾನ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಗೆಲುವು: ಕ್ವಾರ್ಟರ್‌ಫೈನಲ್‌ಗೆ ಪ್ರವೇಶವಿಜಯ್ ಹಜಾರೆ ಟ್ರೋಫಿ: ರಾಜಸ್ಥಾನ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಗೆಲುವು: ಕ್ವಾರ್ಟರ್‌ಫೈನಲ್‌ಗೆ ಪ್ರವೇಶ

ಹೌದು, ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಡಿಸೆಂಬರ್ 17ರಿಂದ ಆರಂಭವಾಗಬೇಕಿತ್ತು. ಅದರೆ ಒಮಿಕ್ರಾನ್ ವೈರಸ್ ಕಾರಣದಿಂದಾಗಿ 9 ದಿನಗಳು ತಡವಾಗಿ ಇತ್ತಂಡಗಳ ನಡುವಿನ ಟೆಸ್ಟ್ ಸರಣಿ ಆರಂಭವಾಗುತ್ತಿದ್ದು ಡಿಸೆಂಬರ್ 26ರಂದು ಪ್ರಥಮ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಈ ಪ್ರಥಮ ಟೆಸ್ಟ್ ಪಂದ್ಯ ಸೆಂಚುರಿಯನ್ ನಗರದ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಅಲ್ಲಿನ ಕ್ರಿಕೆಟ್ ಪ್ರೇಮಿಗಳು ಈ ಪಂದ್ಯವನ್ನು ಕ್ರೀಡಾಂಗಣದಲ್ಲಿ ವೀಕ್ಷಿಸಲು ಕಾಯುತ್ತಿದ್ದರು.

ಹೌದು ಈ ಕ್ರೀಡಾಂಗಣದಲ್ಲಿ ಅನೇಕ ಸಮಯದ ನಂತರ ಮಹಾ ತಂಡಗಳೆರಡರ ನಡುವೆ ನಡೆಯಲಿರುವ ಕುತೂಹಲಕಾರಿ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕಾದಿದ್ದ ಕ್ರಿಕೆಟ್ ಪ್ರೇಕ್ಷಕರಿಗೆ ಇದೀಗ ನಿರಾಸೆಯುಂಟಾಗಿದ್ದು ಈ ಪಂದ್ಯ ವೀಕ್ಷಿಸಲು ಯಾವುದೇ ಪ್ರೇಕ್ಷಕರಿಗೂ ಕೂಡ ಅನುಮತಿ ಇರುವುದಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ನಗರದಲ್ಲಿ ಒಮಿಕ್ರಾನ್ ವೈರಸ್‌ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಕ್ರಿಕೆಟ್ ಸೌತ್ ಆಫ್ರಿಕಾ ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗುತ್ತಿದೆ.

ಹೀಗೆ ಪ್ರಥಮ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅನುಮತಿ ನೀಡಲಾಗುವುದಿಲ್ಲ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಪ್ರೇಕ್ಷಕರಿಗೆ ಅನುಮತಿ ನೀಡುವುದು ಅನುಮಾನವನ್ನು ಹುಟ್ಟಿಸಿದೆ. ಹೌದು, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಜೊಹಾನ್ಸ್ ಬರ್ಗ್ ನಗರದಲ್ಲಿರುವ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದ ಟಿಕೆಟ್ ಮಾರಾಟದ ಕುರಿತು ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಳ್ಳಲಾಗಿಲ್ಲ ಎನ್ನಲಾಗುತ್ತಿದೆ. ಇಂಪೀರಿಯಲ್ ವಾಂಡರರ್ಸ್ ಸ್ಟೇಡಿಯಂನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕೂಡ ಈ ವಿಷಯವನ್ನು ಟ್ವೀಟ್ ಮಾಡಿ ತಿಳಿಸಲಾಗಿದೆ.

Story first published: Tuesday, December 21, 2021, 10:28 [IST]
Other articles published on Dec 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X