For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ: ರಾಹುಲ್, ರಹಾನೆ, ಪೂಜಾರಾಗೆ ಬೌಲಿಂಗ್ ಮಾಡಿದ ದೀಪಕ್ ಚಹಾರ್

India vs South Africa: Deepak Chahar posted a video of training session ahead of centurion test

ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ ಹರಿಣಗಳ ವಿರುದ್ಧ 3 ಪಂದ್ಯಗಳ ಟೆಸ್ಟ್ ಮತ್ತು 3 ಪಂದ್ಯಗಳ ಏಕದಿನ ಸರಣಿಗಳಲ್ಲಿ ಸೆಣಸಾಟ ನಡೆಸಲಿದೆ. ಇನ್ನು ಟೀಮ್ ಇಂಡಿಯಾ ತವರು ನೆಲದಲ್ಲಿ ಇತ್ತೀಚೆಗಷ್ಟೇ ನಡೆದ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಗಳನ್ನಾಡಿ ಎರಡೂ ಸರಣಿಗಳಲ್ಲಿಯೂ ಜಯ ಸಾಧಿಸಿತ್ತು. ಹೀಗೆ ನ್ಯೂಜಿಲೆಂಡ್ ವಿರುದ್ಧ ಗೆದ್ದು ಜಯದ ಅಲೆಯಲ್ಲಿ ತೇಲುತ್ತಿರುವ ಟೀಮ್ ಇಂಡಿಯಾ ಇದೀಗ ಹರಿಣಗಳ ನೆಲದಲ್ಲಿಯೂ ಕೂಡ ಜಯದ ಬಾವುಟವನ್ನು ಹಾರಿಸುವ ಯೋಜನೆಯಲ್ಲಿದೆ.

ಇನ್ನು ಎಲ್ಲಾ ಯೋಜನೆಯ ಪ್ರಕಾರವೇ ನಡೆದಿದ್ದರೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಡಿಸೆಂಬರ್ 17ರಿಂದ ಆರಂಭವಾಗಬೇಕಿತ್ತು. ಅದರೆ ಒಮಿಕ್ರಾನ್ ವೈರಸ್ ಕಾರಣದಿಂದಾಗಿ 9 ದಿನಗಳು ತಡವಾಗಿ ಇತ್ತಂಡಗಳ ನಡುವಿನ ಟೆಸ್ಟ್ ಸರಣಿ ಆರಂಭವಾಗುತ್ತಿದ್ದು ಡಿಸೆಂಬರ್ 26ರಂದು ಪ್ರಥಮ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ.

ಈಗಾಗಲೇ ದಕ್ಷಿಣ ಆಫ್ರಿಕಾವನ್ನು ತಲುಪಿರುವ ವಿರಾಟ್ ಕೊಹ್ಲಿ ಪಡೆ ಹರಿಣಗಳ ವಿರುದ್ಧ ಮೊದಲಿಗೆ ಟೆಸ್ಟ್ ಸರಣಿಯಲ್ಲಿ ಸೆಣಸಾಟವನ್ನು ನಡೆಸಲಿದ್ದು ಡಿಸೆಂಬರ್ 26ರಂದು ಇತ್ತಂಡಗಳ ನಡುವಿನ ಚೊಚ್ಚಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಇನ್ನು ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಈ ಟೆಸ್ಟ್ ಸರಣಿಗೆ 18 ಆಟಗಾರರ ತಂಡವನ್ನು ಪ್ರಕಟಿಸಿದ್ದು ಕಳೆದ ಡಿಸೆಂಬರ್ 16ರಂದೇ ಟೀಮ್ ಇಂಡಿಯಾ ಆಟಗಾರರ ತಂಡ ದಕ್ಷಿಣ ಆಫ್ರಿಕಾವನ್ನು ತಲುಪಿದ್ದು ಈಗಾಗಲೇ 1 ದಿನದ ಕ್ವಾರಂಟೈನ್ ಮುಗಿಸಿ ಅಭ್ಯಾಸಗಳಲ್ಲಿ ತೊಡಗಿಕೊಂಡಿದೆ.

ಹೌದು ಕಳೆದ ಭಾನುವಾರದಿಂದ ಅಭ್ಯಾಸದಲ್ಲಿ ತೊಡಗಿಕೊಂಡಿರುವ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಕಠಿಣ ಅಭ್ಯಾಸವನ್ನು ನಡೆಸುತ್ತಿದೆ. ಇದುವರೆಗೂ ಒಟ್ಟು 7 ಬಾರಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ ಯಾವುದೇ ಬಾರಿ ಕೂಡ ಟೆಸ್ಟ್ ಸರಣಿಯಲ್ಲಿ ಜಯವನ್ನು ಸಾಧಿಸಿಲ್ಲ. ಹೀಗಾಗಿ ಈ ಬಾರಿ ಟೆಸ್ಟ್ ಸರಣಿಯನ್ನು ಗೆಲ್ಲುವುದರ ಮೂಲಕ ತನ್ನ ಕೆಟ್ಟ ದಾಖಲೆಯನ್ನು ಅಳಿಸಿ ಹಾಕುವತ್ತ ಟೀಮ್ ಇಂಡಿಯಾ ಚಿತ್ತ ನೆಟ್ಟಿದೆ. ಈ ಸಲುವಾಗಿಯೇ ಟೀಮ್ ಇಂಡಿಯಾ ಆಟಗಾರರನ್ನು ರಾಹುಲ್ ದ್ರಾವಿಡ್ ಹೆಚ್ಚು ಹೊತ್ತು ಮೈದಾನದಲ್ಲಿ ಶ್ರಮಿಸುವಂತೆ ಮಾಡಿ ಸಾಲು ಸಾಲು ತರಬೇತಿಗಳನ್ನು ನೀಡತೊಡಗಿದ್ದಾರೆ.

ಇಂದು ಬಿಸಿಸಿಐ ಮತ್ತು ಭಾರತ ತಂಡದ ಆಟಗಾರರು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಅಭ್ಯಾಸ ನಡೆಸುತ್ತಿರುವ ಭಿನ್ನವಿಭಿನ್ನ ಫೋಟೋಗಳನ್ನು ಹಂಚಿಕೊಂಡಿದ್ದು ಕೋಚ್ ರಾಹುಲ್ ದ್ರಾವಿಡ್ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಕುರಿತು ಹೆಚ್ಚಿನ ನಿಗಾ ವಹಿಸಿ ತರಬೇತಿ ನೀಡುತ್ತಿರುವ ಚಿತ್ರ ವೈರಲ್ ಆಗಿದೆ. ಇನ್ನು ಈ ಬಾರಿಯ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಅಲಭ್ಯರಾಗಿರುವ ಕಾರಣ ಕೆಎಲ್ ರಾಹುಲ್ ಜೊತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲಿರುವ ಮಯಾಂಕ್ ಅಗರ್ವಾಲ್ ಬ್ಯಾಟ್ ಹಿಡಿದು ಹೆಚ್ಚು ಹೊತ್ತಿನ ಕಾಲ ಅಭ್ಯಾಸವನ್ನು ನಡೆಸುತ್ತಿದ್ದು ತಮ್ಮ ಅಭ್ಯಾಸದ ಚಿತ್ರಗಳನ್ನು ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ.

ಹಾಗೂ ಭಾರತದ ಬೌಲರ್ ದೀಪಕ್ ಚಹರ್ ಕೂಡ ತಮ್ಮ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಬೌಲಿಂಗ್ ಮಾಡುತ್ತಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ದೀಪಕ್ ಚಹರ್ ಕೆ ಎಲ್ ರಾಹುಲ್, ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರಗೆ ಬೌಲಿಂಗ್ ಮಾಡಿ ಅಭ್ಯಾಸ ನಡೆಸಿದ್ದಾರೆ. ಸದ್ಯ ಈ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಗೆದ್ದು ಇತಿಹಾಸ ನಿರ್ಮಿಸಲೇಬೇಕೆಂದು ಭಾರತ ತಂಡ ಪಣತೊಟ್ಟಂತಿದೆ ಎಂದು ಕ್ರೀಡಾಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿಗಳ ವೇಳಾಪಟ್ಟಿ

ಮೊದಲಿಗೆ ಇತ್ತಂಡಗಳ ನಡುವೆ ಟೆಸ್ಟ್ ಸರಣಿ ನಡೆಯಲಿದ್ದು ಇದರ ವೇಳಾ ಪಟ್ಟಿ ಈ ಕೆಳಕಂಡಂತಿದೆ

ಮೊದಲ ಟೆಸ್ಟ್‌: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್‌, ಸೆಂಚುರಿಯನ್

ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್

ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್‌ ಟೌನ್

ಹೀಗೆ 3 ಪಂದ್ಯಗಳ ಟೆಸ್ಟ್ ಸರಣಿ ಮುಗಿದ ನಂತರ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು ಅದರ ವೇಳಾಪಟ್ಟಿ ಹೀಗಿದೆ

ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM

ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM

ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್‌ ಟೌನ್, ಸಮಯ - 2.00 PM

Story first published: Tuesday, December 21, 2021, 18:22 [IST]
Other articles published on Dec 21, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+