ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ: ನಾನೇನೋ 3ನೇ ಟೆಸ್ಟ್ ಆಡಲು ಸಿದ್ಧ ಆದರೆ ಆತನದ್ದೇ ಸಮಸ್ಯೆ ಎಂದ ಕೊಹ್ಲಿ!

India vs South Africa: Im fit to play 3rd test but Mohammed Siraj isnt fit says Virat Kohli

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಈಗಾಗಲೇ ಹರಿಣಗಳ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿ ಪೈಕಿ 2 ಪಂದ್ಯಗಳಲ್ಲಿ ಕಣಕ್ಕಿಳಿದು ಮೊದಲನೇ ಪಂದ್ಯದಲ್ಲಿ ಗೆದ್ದು ಎರಡನೇ ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾ ಸರಣಿಯನ್ನು ಕೈವಶ ಮಾಡಿಕೊಳ್ಳುವತ್ತ ಚಿತ್ತ ನೆಟ್ಟಿದೆ.

ಭಾರತ vs ದ. ಆಫ್ರಿಕಾ: ಮೂರನೇ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಶುಭ ಸುದ್ದಿ!ಭಾರತ vs ದ. ಆಫ್ರಿಕಾ: ಮೂರನೇ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಶುಭ ಸುದ್ದಿ!

ಹೌದು, ದಕ್ಷಿಣ ಆಫ್ರಿಕಾ ನೆಲದಲ್ಲಿ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಈಗಾಗಲೇ ಮುಕ್ತಾಯವಾಗಿದೆ. ಸರಣಿಯಲ್ಲಿ ಇತ್ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸಿದ್ದು 1-1 ಗೆಲುವಿನ ಸಮಬಲವನ್ನು ಸಾಧಿಸಿವೆ. ಹೀಗಾಗಿ ಇತ್ತಂಡಗಳ ನಡುವೆ ಜನವರಿ 11ರಿಂದ ಆರಂಭವಾಗಲಿರುವ ತೃತೀಯ ಟೆಸ್ಟ್ ಪಂದ್ಯದ ಮೇಲೆ ಇದೀಗ ಎಲ್ಲರ ಚಿತ್ತ ನೆಟ್ಟಿದೆ.

ಇನ್ನು ಸೆಂಚೂರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯವನ್ನು ಸಾಧಿಸಿತ್ತು ಹಾಗೂ ಈ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ವಿರಾಟ್ ಕೊಹ್ಲಿ ನಾಯಕನಾಗಿ ಮುನ್ನಡೆಸಿದ್ದರು. ನಂತರ ಜೊಹಾನ್ಸ್ ಬರ್ಗ್ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನ್ನು ಕಂಡಿತ್ತು ಹಾಗೂ ಗಾಯದ ಸಮಸ್ಯೆಗೆ ಒಳಗಾಗಿದ್ದ ಕಾರಣ ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಈ ಪಂದ್ಯದಿಂದ ಹೊರಗುಳಿದಿದ್ದರು, ಬದಲಾಗಿ ಕೆಎಲ ರಾಹುಲ್ ಟೀಮ್ ಇಂಡಿಯಾವನ್ನು ಈ ಪಂದ್ಯದಲ್ಲಿ ನಾಯಕನಾಗಿ ಮುನ್ನಡೆಸಿದ್ದರು.

ಭಾರತ vs ದ. ಆಫ್ರಿಕಾ 3ನೇ ಟೆಸ್ಟ್: ಕೇಪ್‌ಟೌನ್ ಪಿಚ್ ರಿಪೋರ್ಟ್, ಹವಾಮಾನ ವರದಿ ಹಾಗೂ ಅಂಕಿಅಂಶಗಳುಭಾರತ vs ದ. ಆಫ್ರಿಕಾ 3ನೇ ಟೆಸ್ಟ್: ಕೇಪ್‌ಟೌನ್ ಪಿಚ್ ರಿಪೋರ್ಟ್, ಹವಾಮಾನ ವರದಿ ಹಾಗೂ ಅಂಕಿಅಂಶಗಳು

ಇನ್ನು ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸೋತ ಬೆನ್ನಲ್ಲೇ ವಿರಾಟ್ ಕೊಹ್ಲಿ ಅಲಭ್ಯತೆಯಿಂದಾಗಿ ಟೀಮ್ ಇಂಡಿಯಾ ಪರಿಣಾಮಕಾರಿ ಪ್ರದರ್ಶನವನ್ನು ನೀಡುವಲ್ಲಿ ವಿಫಲವಾಯಿತು ಎಂಬ ಅಭಿಪ್ರಾಯಗಳು ದೊಡ್ಡಮಟ್ಟದಲ್ಲಿಯೇ ಕೇಳಿಬಂದವು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲೇಬೇಕು ಎಂಬ ಕೋರಿಕೆ ಹಾಗೂ ಅಭಿಪ್ರಾಯ ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳಲ್ಲಿ ಹೆಚ್ಚಾಗಿದ್ದು ಈ ಕುರಿತಾಗಿ ಇದೀಗ ಅಧಿಕೃತವಾಗಿ ಮಾತನಾಡಿರುವ ವಿರಾಟ್ ಕೊಹ್ಲಿ ಈ ಕೆಳಕಂಡಂತೆ ಹೇಳಿಕೆಗಳನ್ನು ನೀಡಿದ್ದಾರೆ..

ತೃತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಿದ್ಧ ಎಂದ ಕೊಹ್ಲಿ

ತೃತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಿದ್ಧ ಎಂದ ಕೊಹ್ಲಿ

ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುತ್ತಾರಾ ಅಥವಾ ಇಲ್ಲವಾ ಎಂಬ ಗೊಂದಲಗಳು ಉಂಟಾಗಿದ್ದವು. ಇತ್ತಿಚೆಗಷ್ಟೇ ವಿರಾಟ್ ಕೊಹ್ಲಿ ಬ್ಯಾಟ್ ಹಿಡಿದು ನೆಟ್ ಪ್ರಾಕ್ಟೀಸ್ ಮಾಡುವ ಚಿತ್ರಗಳು ವೈರಲ್ ಆದ ಬೆನ್ನಲ್ಲೇ ವಿರಾಟ್ ಕೊಹ್ಲಿ ತೃತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಈ ಕುರಿತು ಇದೀಗ ಸ್ವತಃ ವಿರಾಟ್ ಕೊಹ್ಲಿ ಅವರೇ ಮಾತನಾಡಿದ್ದು ತಾನು ಫಿಟ್ ಆಗಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

ನಾನು ಸಿದ್ಧ ಆದರೆ ಆತನದ್ದೇ ಸಮಸ್ಯೆ

ನಾನು ಸಿದ್ಧ ಆದರೆ ಆತನದ್ದೇ ಸಮಸ್ಯೆ

ದಕ್ಷಿಣ ಆಫ್ರಿಕಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿರುವ ವಿರಾಟ್ ಕೊಹ್ಲಿ ತಾನು ತೃತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲು ಸಿದ್ಧನಾಗಿದ್ದೇನೆ ಎಂದು ಹೇಳಿಕೆ ನೀಡಿದ್ದು ಮೊಹಮ್ಮದ್ ಸಿರಾಜ್ ಇನ್ನೂ ಚೇತರಿಸಿಕೊಳ್ಳದ ಕಾರಣದಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಿರಾಜ್ ಬದಲು ಇತರೆ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಿದ್ದೇವೆ ಎಂದ ಕೊಹ್ಲಿ

ಸಿರಾಜ್ ಬದಲು ಇತರೆ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಿದ್ದೇವೆ ಎಂದ ಕೊಹ್ಲಿ

ಮೊಹಮ್ಮದ್ ಸಿರಾಜ್ ಗಾಯದ ಸಮಸ್ಯೆಯಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ತೃತೀಯ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಮೊಹಮ್ಮದ್ ಸಿರಾಜ್ ಸ್ಥಾನಕ್ಕೆ ಬೇರೊಬ್ಬ ಆಟಗಾರನನ್ನು ಆಯ್ದುಕೊಳ್ಳುವುದಾಗಿ ವಿರಾಟ್ ಕೊಹ್ಲಿ ಹೇಳಿದ್ದಾರೆ. ಈ ಕುರಿತಾಗಿ ಚರ್ಚೆಗಳನ್ನು ನಡೆಸಿದ ನಂತರ ಅಂತಿಮ ತೀರ್ಮಾನವನ್ನು ಕೈಗೊಳ್ಳುವೆವು ಎಂದು ಹೇಳಿರುವ ವಿರಾಟ್ ಕೊಹ್ಲಿ ಸದ್ಯ ತಂಡದಲ್ಲಿ ಸಿರಾಜ್ ಸ್ಥಾನಕ್ಕೆ ಹಲವಾರು ಆಯ್ಕೆಗಳಿವೆ ಎಂದಿದ್ದಾರೆ.

Story first published: Monday, January 10, 2022, 23:03 [IST]
Other articles published on Jan 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X