Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

U19 Women's T20 World Cup Final: ಭಾರತ vs ದಕ್ಷಿಣ ಆಫ್ರಿಕಾ ಹಣಾಹಣಿ; ಎಷ್ಟು ಗಂಟೆಗೆ, ಯಾವ ಚಾನೆಲ್‌ನಲ್ಲಿ ನೇರಪ್ರಸಾರ?

ಭಾರತದ ಅಂಡರ್-19 ಮಹಿಳಾ ಕ್ರಿಕೆಟ್ ತಂಡ ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಉಳಿಸಿಕೊಳ್ಳಲು ಕೇವಲ ಒಂದು ಹೆಜ್ಜೆ ಬಾಕಿ ಇದೆ. ನಿಕ್ಕಿ ಪ್ರಸಾದ್ ನಾಯಕತ್ವದಲ್ಲಿ ಭಾರತ ತಂಡವು ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆಯಲಿರುವ ಈ ಐಸಿಸಿ ಟೂರ್ನಿಯ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಈ ಪಂದ್ಯವು ಭಾನುವಾರ, ಫೆಬ್ರವರಿ 2 ರಂದು ಬ್ಯೂಮಾಸ್ ಓವಲ್‌ನಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಈ ವರ್ಷ ಐಸಿಸಿ ಟೂರ್ನಿಯಲ್ಲಿ ಅಜೇಯರಾಗಿ ಉಳಿದಿವೆ. ಹಾಲಿ ಚಾಂಪಿಯನ್ ಭಾರತ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್‌ ಪ್ರವೇಶಿಸಿದರೆ, ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್‌ಗೆ ಬಂದಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡೂ ತಂಡಗಳು ಉತ್ತಮ ಫಾರ್ಮ್‌ನಲ್ಲಿರುವ ಕಾರಣ ಫೈನಲ್ ಪಂದ್ಯದಲ್ಲಿ ರೋಚಕ ಸ್ಪರ್ಧೆಯನ್ನು ನಿರೀಕ್ಷಿಸಲಾಗುತ್ತಿದೆ.

India vs South Africa ICC Under-19 Women s T20 World Cup 2025 Final Live Streaming

ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 114 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಸುಲಭವಾಗಿ ಗೆಲುವು ಸಾಧಿಸಿತು. ಟೀಮ್ ಇಂಡಿಯಾ ಕೇವಲ 1 ವಿಕೆಟ್ ಕಳೆದುಕೊಂಡು 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ಆದರೆ ಕೈಲಾ ರೈನೆಕೆ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ ತನ್ನ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿತು.

ಇದೀಗ ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿವೆ. ಉಭಯ ತಂಡಗಳು ಇದುವರೆಗೆ ಟೂರ್ನಿಯಲ್ಲಿ ಅಜೇಯವಾಗಿವೆ. ಭಾರತ ಸತತ ಎರಡನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ಚೊಚ್ಚಲ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿರುವ ದಕ್ಷಿಣ ಆಫ್ರಿಕಾ ತಂಡ ಉತ್ಸಾಹದಲ್ಲಿದೆ.

ನೇರಪ್ರಸಾರ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮಹಿಳೆಯರ ಅಂಡರ್-19 ಟಿ20 ವಿಶ್ವಕಪ್ ಫೈನಲ್ ಪಂದ್ಯವು ಭಾನುವಾರ, ಫೆಬ್ರವರಿ 2 ರಂದು ಕೌಲಾಲಂಪುರದ ಬ್ಯೂಮಾಸ್ ಓವಲ್‌ನಲ್ಲಿ ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 12:00 ಗಂಟೆಗೆ ಆರಂಭವಾಗಲಿದೆ. ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ 2 ಟಿವಿ ಚಾನೆಲ್‌ನಲ್ಲಿ ಪಂದ್ಯ ನೇರ ಪ್ರಸಾರವಾಗಲಿದೆ. ಅಲ್ಲದೆ, ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿಯೂ ಲೈವ್ ಸ್ಟ್ರೀಮ್ ಮಾಡಲಾಗುತ್ತಿದೆ.

ಉಭಯ ತಂಡಗಳು

ಭಾರತ ಮಹಿಳಾ ಅಂಡರ್-19 ತಂಡ: ನಿಕ್ಕಿ ಪ್ರಸಾದ್ (ನಾಯಕಿ), ಸಾನಿಕಾ ಚಲ್ಕೆ, ಜಿ ತ್ರಿಶಾ, ಕಮಲಿನಿ ಜಿ, ಭಾವಿಕಾ ಅಹಿರೆ, ಈಶ್ವರಿ ಅವಸರೆ, ಮಿಥಿಲಾ ವಿನೋದ್, ಜೋಶಿತಾ ವಿಜೆ, ಸೋನಮ್ ಯಾದವ್, ಪರುಣಿಕಾ ಸಿಸೋಡಿಯಾ, ಕೇಸರಿ ದೃತಿ, ಆಯುಷಿ ಶುಕ್ಲಾ, ಆನಂದಿತಾ ಕಿಶೋರ್, ವೈಷ್ಣವಿ ಎಸ್.

ದಕ್ಷಿಣ ಆಫ್ರಿಕಾ ಮಹಿಳಾ ಅಂಡರ್-19 ತಂಡ: ಗೆಮ್ಮಾ ಬೋಥಾ, ಸಿಮೋನ್ ಲಾರೆನ್ಸ್, ಫೇ ಕೌಲಿಂಗ್, ಕೈಲಾ ರೈನೆಕೆ (ನಾಯಕಿ), ಕರಾಬೊ ಮ್ಯಾಸಿಯೊ (ವಿಕೆಟ್‌ಕೀಪರ್), ಮೈಕೆ ವ್ಯಾನ್ ವೂರ್ಸ್ಟ್, ಸೆಶ್ನಿ ನೈಡೂ, ಲುಯಾಂಡಾ ನ್ಜುಜಾ, ಆಶ್ಲೇ ವ್ಯಾನ್ ವೈಕ್, ಮೊನಾಲಿಸಾ ಲೆಗೊಡಿ, ನ್ತಾಬಿಸೆಂಗ್ ನಿಲಾನಿ, ನ್ತಾಬಿಸೆಂಗ್ ನಿಲಾನಿ ಡೀರ್ಡ್ರೆ ವ್ಯಾನ್ ರೆನ್ಸ್‌ಬರ್ಗ್, ಶನೆಲ್ ವೆಂಟರ್, ಜೆ.ಲೀ ಫಿಲಾಂಡರ್.

Story first published: Saturday, February 1, 2025, 22:54 [IST]
Other articles published on Feb 1, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+