ಭಾರತ vs ದ. ಆಫ್ರಿಕಾ: ಪಂತ್ ಪಡೆಯ ಮುಂದೆ ದೊಡ್ಡ ಸವಾಲು: ಮತ್ತೊಂದು ಕಠಿಣ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜು

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು(ಭಾನುವಾರ) ನಡೆಯಲಿದೆ. ರಿಷಬ್ ಪಂತ್ ನೇತೃತ್ವದ ಟೀಮ್ ಇಂಡಿಯಾ ಸರಣಿಯ ಮೊದಲ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಹೊರತಾಗಿಯೂ ಸೋಲು ಅನುಭವಿಸಿದ್ದು ಟೀಮ್ ಇಂಡಿಯಾ ಬೌಲಿಂಗ್ ವಿಭಾಗದ ಮೇಲಿನ ಹೊಣೆಗಾರಿಗೆ ಹೆಚ್ಚಿದೆ. ಮೊದಲ ಪಂದ್ಯದಲ್ಲಿ ಅನುಭವಿಸಿದ ಹಿನ್ನಡೆಯಿಂದ ಬೌಲಿಂಗ್ ವಿಭಾಗ ಈ ಪಂದ್ಯದಲ್ಲಿ ಹೊರಬರಬೇಕಿದೆ.
ಕಟಕ್‌ನಲ್ಲಿ ಈ ಪಂದ್ಯ ನಡೆಯಲಿದ್ದು ಎರಡೂ ತಂಡಗಳು ಕೂಡ ಸಿದ್ಧತೆಯನ್ನು ನಡೆಸಿದೆ. ಟೀಮ್ ಇಂಡಿಯಾ ಆಟಗಾರರು ಕೂಡ ಶನಿವಾರ ಈ ಪಂದ್ಯಕ್ಕೆ ಭರ್ಜರಿ ತಾಲೀಮು ನಡೆಸಿದ್ದು ಗೆಲುವಿನ ಲಯಕ್ಕೆ ಮರಳುವ ಪ್ರಯತ್ನಗಳನ್ನು ನಡೆಸಿದೆ.ಹೀಗಾಗಿ ಎರಡನೇ ಪಂದ್ಯದ ಮೇಲಿನ ಕುತೂಹಲ ಹೆಚ್ಚಾಗಿದೆ.
ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡಿತ್ತು. ಮೊದಲಿಗೆ ಬ್ಯಾಟಿಂಗ್ ಮಾಡಿದ್ದ ಭಾರತ ದಕ್ಷಿಣ ಆಫ್ರಿಕಾದ ಪೂರ್ಣ ಸಾಮರ್ಥ್ಯದ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ಯಶಸ್ವಿಯಾಗಿತ್ತು. ಈ ಪಂದ್ಯದಲ್ಲಿ ಭರ್ಜರಿ 211 ರನ್‌ಗಳನ್ನು ಗಳಿಸುವಲ್ಲಿ ಭಾರತ ತಂಡ ಯಶಸ್ವಿಯಾಗಿತ್ತು. ಈ ಪಂದ್ಯದಲ್ಲಿ ಆರಂಭಿಕ ಆಟಗಾರ ಇಶಾನ್ ಕಿಶನ್ ಪ್ರಮುಖ ಬ್ಯಾಟರ್ ಆಗಿ ಮಿಂಚಿದ್ದು 48 ಎಸೆತಗಳಲ್ಲಿ 76 ರನ್ ಸಿಡಿಸಿ ಮಿಂಚಿದ್ದಾರೆ.
ಆದರೆ ನಂತರ ಬೌಲಿಂಗ್ ವಿಭಾಗ ಮಾತ್ರ ದೊಡ್ಡ ಆಘಾತವನ್ನು ಅನುಭವಿಸಿತು. ಆರಂಭದಲ್ಲಿ ಉತ್ತಮ ಪ್ರದರ್ಶನ ನಿಡಿದ್ದರೂ ನಂತರ ಡೇವಿಡ್ ಮಿಲ್ಲರ್ ಹಾಗೂ ವಾನ್ ಡರ್ ಡುಸೆನ್ ಜೋಡಿಯನ್ನು ಬೇರ್ಪಡಿಸಲು ಭಾರತೀಯ ಬೌಲರ್‌ಗಳಿಗೆ ಸಾಧ್ಯವಾಗಲೇ ಇಲ್ಲ. ಈ ಜೋಡಿ ಬೌಂಡರಿ ಸಿಕ್ಸರ್‌ಗಳ ಸುರಿಮಳೆಗೈದು ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾದರು.
ಇದೀಗ ಮತ್ತೊಂದು ಕದನಕ್ಕೆ ಎರಡು ತಂಡಗಳು ಕೂಡ ಸಜ್ಜಾಗಿದೆ. ಕಟಕ್‌ನ ಬಾರಾಬತಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು ಸಂಪೂರ್ಣ ಪ್ರಮಾಣದ ಪ್ರೇಕ್ಷಕರ ಮಧ್ಯೆ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದು ಸರಣಿಯನ್ನು ಸಮಬಲಗೊಳಿಸುವ ವಿಶ್ವಾಸದಲ್ಲಿ ಭಾರತ ತಂಡವಿದ್ದರೆ ದಕ್ಷಿಣ ಆಫ್ರಿಕಾ ತಂಡ ಈ ಪಂದ್ಯವನ್ನು ಗೆದ್ದು ಮುನ್ನಡೆ ಹೆಚ್ಚಿಸಿಕೊಳ್ಳುವ ಪ್ರಯತ್ನ ನಡೆಸಲಿದೆ.
ಭಾರತ ತಂಡ: ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್, ದೀಪಕ್ ಹೂಡಾ, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್ಗಿಡಿ, ಹೆನ್ರಿಚ್ ಕ್ಲಾಸೆನ್, ಮಾರ್ಕೊ ಜಾನ್ಸೆನ್, ಐಡೆನ್ ಮಾರ್ಕ್ರಾಮ್, ರೀಜಾ ಹೆಂಡ್ರಿಕ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications