IND vs SA: ಭಾರತ vs ದಕ್ಷಿಣ ಆಫ್ರಿಕಾ ಸರಣಿ ಎಲ್ಲಿ?, ಯಾವಾಗ?, ಎಷ್ಟು ಗಂಟೆಗೆ; ಇಲ್ಲಿದೆ ಸಂಪೂರ್ಣ ಮಾಹಿತಿ!
ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 3-0 ಅಂತರದ ಸೋಲು ಕಂಡಿದೆ. ಇದೀಗ
ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಯಾವಾಗ ಮತ್ತು ಎಲ್ಲಿ ಆಡಲಿದೆ ಎಂಬ ಕುತೂಹಲ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಹೆಚ್ಚಿದೆ.
ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 4 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಚಾಂಪಿಯನ್ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ರಣರೋಚಕ ಪಂದ್ಯವನ್ನು ಮತ್ತೊಮ್ಮೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯು ನವೆಂಬರ್ 8 ರಿಂದ 15 ರ ವರೆಗೆ ನಡೆಯಲಿದೆ.
ಟಿ20 ಸರಣಿಯ ಪಂದ್ಯಗಳು ದಕ್ಷಿಣ ಆಫ್ರಿಕಾದ ಕಿಂಗ್ಸ್‌ಮೀಡ್, ಸೇಂಟ್ ಜಾರ್ಜ್ ಓವಲ್, ಸೂಪರ್‌ಸ್ಪೋರ್ಟ್ ಪಾರ್ಕ್ ಮತ್ತು ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯಲಿವೆ. ಪ್ರತಿ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8:00 ಗಂಟೆಗೆ ಆರಂಭವಾಗಲಿವೆ.
ಟಿ20 ಸರಣಿಯ ವೇಳಾಪಟ್ಟಿ
- ಮೊದಲನೇ ಟಿ20 ಪಂದ್ಯ- ನವೆಂಬರ್ 8- ಕಿಂಗ್ಸ್‌ಮೀಡ್ (ಡರ್ಬರ್)
- ಎರಡನೇ ಟಿ20 ಪಂದ್ಯ- ನವೆಂಬರ್ 10- ಸೇಂಟ್ ಜಾರ್ಜ್ ಓವಲ್ (ಗಕ್ಬರ್ಹಾ)
- ಮೂರನೇ ಟಿ20 ಪಂದ್ಯ- ನವೆಂಬರ್ 13- ಸೂಪರ್‌ಸ್ಪೋರ್ಟ್ ಪಾರ್ಕ್ (ಸೆಂಚುರಿಯನ್)
- ನಾಲ್ಕನೇ ಟಿ20 ಪಂದ್ಯ- ನವೆಂಬರ್ 15- ವಾಂಡರರ್ಸ್ ಸ್ಟೇಡಿಯಂ (ಜೋಹಾನ್ಸ್‌ಬರ್ಗ್)
ಭಾರತ ಮತ್ತು ದಕ್ಷಿಣ ಆಫ್ರಿಕಾದ ಟಿ20 ತಂಡ
ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವಿಜಯ್‌ಕುಮಾರ್ ವೈಶಾಖ್, ಯಶ್ ದಯಾಳ್.
ದಕ್ಷಿಣ ಆಫ್ರಿಕಾ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನೀಲ್ ಬಾರ್ಟ್‌ಮನ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೆರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜೆನ್ಸನ್, ಹೆನ್ರಿಚ್ ಕ್ಲಾಸೆನ್, ಪ್ಯಾಟ್ರಿಕ್ ಕ್ರುಗರ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಮಿಹಾಲಿ ಮೊಂಗ್ವಾಟರ್. ರಿಯಾನ್ ರಿಕೆಲ್ಟನ್, ಆಂಡಿಲ್ ಸಿಮೆಲೆನ್, ಲುಥೋ ಸಿಪಾಮ್ಲಾ, ಟ್ರಿಸ್ಟಾನ್ ಸ್ಟಬ್ಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications