For Quick Alerts
ALLOW NOTIFICATIONS  
For Daily Alerts
 

ಐಪಿಎಲ್‌ನಲ್ಲಿ ಎದುರಾಳಿಗಳಿಗೆ ಸಿಂಹಸ್ವಪ್ನ: ಟೀಮ್ ಇಂಡಿಯಾ ಪರವಾಗಿಯೂ ಮಿಂಚಲಿದ್ದಾರಾ ಈ 4 ಆಟಗಾರರು!

India vs South Africa t20 series: Indian cricket fans eye on these 4 IPL Heroes

ಐಪಿಎಲ್ 15ನೇ ಆವೃತ್ತಿ ಅಂತ್ಯವಾಗಿದ್ದು ಗುಜರಾತ್ ಟೈಟನ್ಸ್ ತಂಡ ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. ಇದೀಗ ಭಾರತೀಯ ಕ್ರಿಕೆಟ್ ಪ್ರೇಮಿಗಳ ಚಿತ್ತ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೇಲೆ ಬಿದ್ದಿದೆ. ಜೂನ್ 9ರಂದ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಚಾಲನೆ ದೊರೆಯಲಿದ್ದು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ ಇಲ್ಲದ ಭಾರತ ತಂಡದ ನಾಯಕತ್ವ ಕೆಎಲ್ ರಾಹುಲ್ ಹೆಗಲೇರಿದೆ.

ಇನ್ನು ಈ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಈ ಬಾರಿಯ ಐಪಿಎಲ್ ಟೂರ್ನಿಯ ಪ್ರದರ್ಶನವನ್ನು ಮಾನದಂಡವನ್ನಾಗಿಟ್ಟುಕೊಂಡು ಆಯ್ಕೆಮಾಡಿರುವುದು ಬಹುತೇಕ ಸ್ಪಷ್ಟವಾಗಿದೆ. ಟೂರ್ನಿಯಲ್ಲಿ ಮಿಂಚಿದ ಕೆಲ ಯುವ ಆಟಗಾರರಿಗೆ ಈ ತಂಡದಲ್ಲಿ ಸ್ಥಾನ ದೊರೆತಿದ್ದು ಕೆಲ ಅನುಭವಿಗಳು ಮರಳಿ ಸ್ಥಾನವನ್ನು ಗಳಿಸಿಕೊಂಡಿದ್ದಾರೆ.

ಹೀಗಾಗಿ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಕೆಲ ಆಟಗಾರರ ಮೇಲೆ ಕ್ರಿಕೆಟ್ ಅಭಿಮಾನಿಗಳು ಭಾರೀ ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನಿಡಿ ಮಿಂಚಿದ ಯಾವೆಲ್ಲಾ ಆಟಗಾರರ ಮೇಲೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ದೊಡ್ಡ ನಿರೀಕ್ಷೆಯನ್ನಿಟ್ಟುಕೊಳ್ಳಬಹುದು? ಇಲ್ಲಿದೆ ಮಾಹಿತಿ

ದಿನೇಶ್ ಕಾರ್ತಿಕ್

ದಿನೇಶ್ ಕಾರ್ತಿಕ್

ಟೀಮ್ ಇಂಡಿಯಾ ವೈಟ್‌ಬಾಲ್ ತಂಡದಲ್ಲಿ ಬಹುತೇಕ ಮೂರು ವರ್ಷಗಳ ಬಳಿಕ ದಿನೇಶ್ ಕಾರ್ತಿಕ್ ಮರಳಿ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. 2019ರ ಏಕದಿನ ವಿಶ್ವಕಪ್‌ನ ಬಳಿಕ ಡಿಕೆ ಭಾರತೀಯ ಕ್ರಿಕೆಟ್ ತಂಡದಿಂದ ಹೊರಗುಳಿದಿದ್ದರು. ಹೀಗಾಗಿ ದಿನೇಶ್ ಕಾರ್ತಿಕ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನ ಬಹುತೇಕ ಅಂತ್ಯವಾಯಿತು ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪರವಾಗಿ ಅಮೋಘ ಪ್ರದರ್ಶನ ನೀಡಿದ ದಿನೇಶ್ ಕಾರ್ತಿಕ್ ಎಲ್ಲರ ಗಮನ ಸೆಳೆದರು. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಆಡುವುದು ನನ್ನ ಗುರಿ ಎಂದು ಟೂರ್ನಿಯ ಸಂದರ್ಭದಲ್ಲಿ ತಿಳಿಸಿದ್ದ ಡಿಕೆ ಈಗ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ. ಈ ಸರಣಿಯಲ್ಲಿ ಆಡುವ ಬಳಗದಲ್ಲಿ ಅವಕಾಶ ಗಳಿಸಿಕೊಂಡರೆ ದಿನೇಶ್ ಕಾರ್ತಿಕ್ ಪ್ರದರ್ಶನ ಹೇಗಿರಲಿದೆ ಎಂಬುದು ಎಲ್ಲರ ಕುತೂಹಲವಾಗಿದೆ. ಆರ್‌ಸಿಬಿ ಪರವಾಗಿ ಡೆತ್ ಓವರ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿರುವ ದಿನೇಶ್ ಕಾರ್ತಿಕ್ ಭಾರತೀಯ ತಂಡದಲ್ಲಿಯೂ ಅಂಥಾದ್ದೇ ಪ್ರದರ್ಶನ ನೀಡಲಿದ್ದಾರಾ ಎಂಬುದು ಕುತೂಹಲ ಮೂಡಿಸಿದೆ.

ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ

ಭಾರತೀಯ ತಂಡದ ಪ್ರಮುಖ ಭಾಗವಾಗಿದ್ದ ಹಾರ್ದಿಕ್ ಪಾಂಡ್ಯ ಕಳೆದ ಟಿ20 ವಿಶ್ವಕಪ್‌ನ ಬಳಿಕ ಫಿಟ್‌ನೆಸ್ ಸಮಸ್ಯೆಯ ಕಾರಣದಿಂದಾಗಿ ತಂಡದಿಂದ ಹೊರಬಿದ್ದಿದ್ದರು. ಈ ಬಾರಿಯ ಐಪಿಎಲ್‌ಗೆ ಸಂಪೂರ್ಣ ಫಿಟ್ ಆಗಿ ಮರಳಿದ ಪಾಂಡ್ಯ ಗುಜರಾತ್ ಟೈಟನ್ಸ್ ತಂಡದ ನಾಯಕತ್ವ ವಹಿಸಿಕೊಂಡು ಮಿಂಚಿದ್ದಾರೆ. ನಾಲ್ಕನೇ ಕ್ರಮಾಂಕದಲಲ್ಇ ಬ್ಯಾಟಿಂಗ್‌ಗೆ ಇಳಿದು ಅದ್ಭುತ ಪ್ರದರ್ಶನ ನೀಡಿರುವ ಹಾರ್ದಿಕ್ ಪಾಂಡ್ಯ ಬೌಲಿಂಗ್‌ನಲ್ಲಿ ಫೈನಲ್ ಪಂದ್ಯದಲ್ಲಿ 17 ರನ್‌ಗಳನ್ನು ನೀಡಿ ಮೂರು ವಿಕೆಟ್ ಪಡೆಯುವ ಮೂಲಕ ಮಿಂಚಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧಧ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದು ಈಗ ಎಲ್ಲರಲ್ಲಿಯೂ ಕುತೂಹಲ ಮೂಡಿಸಿದೆ.

ಕುಲ್‌ದೀಪ್ ಯಾದವ್

ಕುಲ್‌ದೀಪ್ ಯಾದವ್

ಸ್ಪಿನ್ನರ್ ಕುಲ್‌ದೀಪ್ ಯಾದವ್ ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಲೀಗ್ ಹಂತದಿಂದಲೂ ಟೂರ್ನಿಯಿಂದ ನಿರ್ಗಮಿಸಿದ್ದರೂ ಕುಲ್‌ದೀಪ್ ಯಾದವ್ ನೀಡಿದ ಪ್ರದರ್ಶನ ಎಲ್ಲರ ಗಮನಸೆಳೆದಿದೆ. ಆಡಿದ 14 ಪಂದ್ಯಗಳಲ್ಲಿ 21 ವಿಕೆಟ್ ಪಡೆದುಕೊಂಡಿದ್ದು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 5ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈಗ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿರುವ ಕುಲ್‌ದೀಪ್ ಯಾದವ್ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

IPL 2022ನಲ್ಲಿ ಅತಿ ಹೆಚ್ಚು ಬಾರಿ Duck out ಆದವರು | #Cricket | OneIndia Kannada
ಅರ್ಷದೀಪ್ ಸಿಂಗ್

ಅರ್ಷದೀಪ್ ಸಿಂಗ್

ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರವಾಗಿ ಆಡುತ್ತಿರುವ ಅರ್ಷದೀಪ್ ಸಿಂಗ್ ಕಳೆದ ಎರಡು ಐಪಿಎಲ್ ಆವೃತ್ತಿಗಳಲ್ಲಿ ಮಿಂಚುತ್ತಿದ್ದಾರೆ. ಈ ಬಾರಿಯ ಆವೃತ್ತಿಯಲ್ಲಿ ಅರ್ಷ್‌ದೀಪ್ ಸಿಂಗ್ ವಿಕೆಟ್ ಕೀಳುವಲ್ಲಿ ಹೆಚ್ಚು ಯಶಸ್ವಿಯಾಗದಿದ್ದರೂ ರನ್ ನಿಯಂತ್ರಣದಲ್ಲಿ ಗಮನಸೆಳೆದಿದ್ದಾರೆ. ಅದರಲ್ಲೂ ಡೆತ್ ಓವರ್‌ಗಳಲ್ಲಿ ಅರ್ಷ್‌ದೀಪ್ ಅದ್ಭುತ ಯಾರ್ಕರ್‌ಗಳ ಮೂಲಕ ಎದುರಾಳಿ ತಂಡದ ದಾಂಡಿಗರ ಮೇಲೆ ಭಾರೀ ನಿಯಂತ್ರಣ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುಯದ್ಧಧ ಸರಣಿಯ ಮೂಲಕ ಇದೇ ಮೊದಲ ಬಾರಿಗೆ ಭಾರತೀಯ ತಂಡದಲ್ಲಿ ಅವಕಾಶಗಿಟ್ಟಿಕೊಂಡಿದ್ದಾರೆ. ಹೀಗಾಗಿ ಈ ಆಟಗಾರನ ಮೇಲೆಯೂ ದೊಡ್ಡ ನಿರೀಕ್ಷೆಯಿದೆ.

Story first published: Tuesday, May 31, 2022, 16:33 [IST]
Other articles published on May 31, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+