ದ.ಆಫ್ರಿಕಾದಲ್ಲಿ ರಾಹುಲ್ - ಕೊಹ್ಲಿ ಪಡೆ ಹೊಸವರ್ಷದ ಸಂಭ್ರಮಾಚರಣೆ ಹೇಗಿತ್ತು ನೋಡಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಮೊನ್ನೆಯಷ್ಟೇ ಮುಕ್ತಾಯವಾಗಿರುವ ಸೆಂಚುರಿಯನ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 113 ರನ್‌ಗಳ ಬೃಹತ್ ಜಯವನ್ನು ಸಾಧಿಸುವುದರ ಮೂಲಕ ದಾಖಲೆ ಬರೆದಿದೆ.
ಹೌದು, ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಸೆಂಚುರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಎದುರಾಳಿ ದಕ್ಷಿಣ ಆಫ್ರಿಕಾ ತಂಡಕ್ಕೆ ಅವರ ನೆಲದಲ್ಲಿಯೇ ಸೋಲುಣಿಸಿರುವ ಟೀಮ್ ಇಂಡಿಯಾ ಪಂದ್ಯದಲ್ಲಿ 113 ರನ್‌ಗಳ ಬೃಹತ್ ಜಯವನ್ನು ಸಾಧಿಸಿದೆ. ಈ ಗೆಲುವಿನ ಮೂಲಕ ಐತಿಹಾಸಿಕ ದಾಖಲೆಯೊಂದನ್ನು ಬರೆದಿರುವ ಟೀಮ್ ಇಂಡಿಯಾ ಸೆಂಚುರಿಯನ್ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದ ಏಷ್ಯಾಖಂಡದ ಚೊಚ್ಚಲ ತಂಡ ಎಂಬ ಖ್ಯಾತಿಗೆ ಭಾಜನವಾಗಿದೆ.
ಈ ದಾಖಲೆಯ ಜಯದ ಸಂತಸದ ಅಲೆಯಲ್ಲಿರುವ ಟೀಮ್ ಇಂಡಿಯಾ ಬಳಗದಲ್ಲಿ ಇದೀಗ ಹೊಸ ವರ್ಷದ ಸಂಭ್ರಮಾಚರಣೆ ಸಂತಸದ ಮಟ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಜೋಹಾನ್ಸ್ ಬರ್ಗ್ ಕ್ರೀಡಾಂಗಣದಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಹೊಸ ವರ್ಷದ ಸಂಭ್ರಮಾಚರಣೆಯನ್ನು ಆಚರಿಸಿತು. ತಾವು ಉಳಿದುಕೊಂಡಿರುವ ಹೋಟೆಲ್‌ನಲ್ಲಿಯೇ ರಾತ್ರಿ ಔತಣ ಕೂಟವನ್ನು ಮಾಡಿದ ಟೀಮ್ ಇಂಡಿಯಾ ಹೊಸ ವರ್ಷವನ್ನು ಕೇಕ್ ಕತ್ತರಿಸುವ ಮೂಲಕ ಸ್ವಾಗತಿಸಿದೆ.

ಟೀಮ್ ಇಂಡಿಯಾ ಆಟಗಾರರ ಜೊತೆ ರಾಹುಲ್ ಸಂತಸದ ಕ್ಷಣ
ಹೊಸ ವರ್ಷದ ಸಂಭ್ರಮಾಚರಣೆಯ ಈ ಚಿತ್ರಗಳನ್ನು ಟೀಮ್ ಇಂಡಿಯಾದ ಆಟಗಾರರಾದ ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ದೀಪಕ್ ಚಹರ್ ಹಾಗೂ ಪ್ರಿಯಾಂಕ್ ಪಾಂಚಾಲ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿರುವ ಭಾರತ ತಂಡ ಪೂರ್ತಿ ಈ ಚಿತ್ರಗಳಲ್ಲಿ ಕಾಣಿಸಿಕೊಂಡಿದೆ. ನಾಯಕ ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್ ಹಾಗೂ ಟೀಮ್ ಇಂಡಿಯಾ ಆಟಗಾರರ ಜೊತೆಗೆ ಕೋಚ್ ರಾಹುಲ್ ದ್ರಾವಿಡ್ ಸಂತಸದಿಂದ ಹೊಸ ವರ್ಷವನ್ನು ಸ್ವಾಗತಿಸಿರುವ ದೃಶ್ಯಗಳು ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿವೆ.

ಸೆಂಚುರಿಯನ್ ನೆಲದಲ್ಲಿ ದಾಖಲೆ ಬರೆದ ಟೀಮ್ ಇಂಡಿಯಾ
ಸದ್ಯ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದು, ಮುಂದಿನ 2 ಟೆಸ್ಟ್ ಪಂದ್ಯಗಳ ಪೈಕಿ ಯಾವುದಾದರೊಂದು ಪಂದ್ಯವನ್ನು ಗೆದ್ದರೆ ಸಾಕು ಸರಣಿಯನ್ನು ಕೈವಶಪಡಿಸಿಕೊಳ್ಳಲಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಟೆಸ್ಟ್ ಸರಣಿಯನ್ನು ಗೆಲ್ಲುವ ಸಾಧನೆ ಮಾಡುವ ಹೊಸ್ತಿಲಲ್ಲಿದೆ. ಹೌದು, ಟೀಮ್ ಇಂಡಿಯಾ ಇದುವರೆಗೂ ಒಟ್ಟು 7 ಬಾರಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟೆಸ್ಟ್ ಸರಣಿಗಳನ್ನು ಆಡಿದೆ, ಆದರೆ ಒಂದೇ ಒಂದು ಬಾರಿಯೂ ಕೂಡ ಟೆಸ್ಟ್ ಸರಣಿಯನ್ನು ಗೆಲ್ಲಲು ಆಗಿರಲಿಲ್ಲ. ಆದರೆ ಈ ಬಾರಿ ಈಗಾಗಲೇ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿರುವ ಟೀಮ್ ಇಂಡಿಯಾ ಈ ಸಾಧನೆ ಮಾಡುವ ಎಲ್ಲಾ ಲಕ್ಷಣಗಳು ಇವೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ
ಇನ್ನು ಹೊಸ ವರ್ಷದ ಆಗಮನಕ್ಕೂ ಕೆಲವೇ ಗಂಟೆಗಳ ಹಿಂದೆ ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿತು. ಈ ಸರಣಿಗೆ ಕೆ ಎಲ್ ರಾಹುಲ್ ಅವರನ್ನು ರೋಹಿತ್ ಶರ್ಮಾ ಅಲಭ್ಯತೆಯ ಕಾರಣದಿಂದಾಗಿ ನಾಯಕನನ್ನಾಗಿ ಬಿಸಿಸಿಐ ನೇಮಿಸಿದೆ. ಈ ತಂಡದಲ್ಲಿ ಕೆಎಲ್ ರಾಹುಲ್ ನಾಯಕನಾದರೆ ಜಸ್ಪ್ರೀತ್ ಬುಮ್ರಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ಮುಂಬೈನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಗಾಯಕ್ಕೊಳಗಾದ ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಹಾಗೂ ಮತ್ತೆ ಕಣಕ್ಕಿಳಿಯಲು ರೋಹಿತ್ ಶರ್ಮಾ ಫಿಟ್ ಇಲ್ಲದೇ ಇರುವ ಕಾರಣದಿಂದಾಗಿ ಇದೀಗ ಏಕದಿನ ಸರಣಿಯಿಂದಲೂ ಕೂಡ ಹೊರಬಿದ್ದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡ: ಕೆ.ಎಲ್ ರಾಹುಲ್ (ಸಿ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶನ್ ಕಿಶನ್ (ವಿಕೆಟ್ ಕೀಪರ್), ಯುಜವೇಂದ್ರ ಚಾಹಲ್, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ (ಉಪನಾಯಕ) , ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications