For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ: ಆಟಗಾರರ ಜೊತೆ ಫುಟ್‌ಬಾಲ್‌ ಆಡಿದ ಕೊಹ್ಲಿ, ದ್ರಾವಿಡ್; ವಿಡಿಯೋ ವೈರಲ್

India vs South Africa: Team India players plays football before training session

ಇತ್ತೀಚೆಗಷ್ಟೇ ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್ ಮತ್ತು ಟಿ ಟ್ವೆಂಟಿ ಎರಡೂ ಸರಣಿಗಳಲ್ಲಿಯೂ ಜಯ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿದೆ.

ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ನ್ಯೂಜಿಲೆಂಡ್ ಮೊದಲಿಗೆ ಟೀಮ್ ಇಂಡಿಯಾ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಸೋಲುವುದರ ಮೂಲಕ ವೈಟ್ ವಾಷ್ ಮುಖಭಂಗಕ್ಕೆ ಒಳಗಾಯಿತು. ಹಾಗೂ ನಂತರ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯ ಪ್ರಥಮ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದ ನ್ಯೂಜಿಲೆಂಡ್, ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋಲುವುದರ ಮೂಲಕ ಟೆಸ್ಟ್ ಸರಣಿಯನ್ನು ಕೂಡ ಕೈಚೆಲ್ಲಿತು. ಹೀಗೆ ನ್ಯೂಜಿಲೆಂಡ್ ವಿರುದ್ಧ ಎರಡೂ ಸರಣಿಗಳನ್ನು ಗೆದ್ದು ಯಶಸ್ಸಿನ ಅಲೆಯಲ್ಲಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿದ್ದು, 3 ಪಂದ್ಯಗಳ ಟೆಸ್ಟ್ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಗಳನ್ನು ಆಡಲಿದೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಡಿಸೆಂಬರ್ 17ರಿಂದ ಆರಂಭವಾಗಬೇಕಿತ್ತು. ಅದರೆ ಒಮಿಕ್ರಾನ್ ವೈರಸ್ ಕಾರಣದಿಂದಾಗಿ 9 ದಿನಗಳು ತಡವಾಗಿ ಇತ್ತಂಡಗಳ ನಡುವಿನ ಟೆಸ್ಟ್ ಸರಣಿ ಆರಂಭವಾಗಲಿದ್ದು ಡಿಸೆಂಬರ್ 26ರಂದು ಪ್ರಥಮ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಹೀಗೆ ದಕ್ಷಿಣ ಆಫ್ರಿಕಾ ವಿರುದ್ಧದ ಈ ಟೆಸ್ಟ್ ಸರಣಿಗೆ 18 ಆಟಗಾರರನ್ನೊಳಗೊಂಡ ಟೀಮ್ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದ್ದು ಡಿಸೆಂಬರ್ 16ರಂದು ಈ ತಂಡ ದಕ್ಷಿಣ ಆಫ್ರಿಕಾಕ್ಕೆ ಹಾರಿ ಜೊಹಾನ್ಸ್ ಬರ್ಗ್ ತಲುಪಿತು.

ಹೀಗೆ ಜೋಹಾನ್ಸ್ ಬರ್ಗ್ ತಲುಪಿದ ಟೀಮ್ ಇಂಡಿಯಾ ಆಟಗಾರರನ್ನು ಕ್ವಾರಂಟೈನ್ ನಿಯಮಕ್ಕೆ ಒಳಪಡಿಸಿದ್ದ ದಕ್ಷಿಣ ಆಫ್ರಿಕಾ ಕ್ರಿಕೆಟ್ ಬೋರ್ಡ್ ಎಲ್ಲಾ ಆಟಗಾರರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದ ನಂತರ ಪ್ರಿಟೋರಿಯಾದ ಐರಿನ್ ಕಂಟ್ರಿ ಲಾಡ್ಜ್ ಎಂಬ ಫೈವ್ ಸ್ಟಾರ್ ಹೋಟೆಲ್‌ನಲ್ಲಿ ವಾಸ್ತವ್ಯಕ್ಕೆ ಏರ್ಪಾಟು ಮಾಡಿದೆ. ಹೀಗೆ ಹೋಟೆಲ್‌ನಲ್ಲಿ ಟೀಮ್ ಇಂಡಿಯಾ ಆಟಗಾರರು ಉಳಿದುಕೊಂಡಿದ್ದು ಡಿಸೆಂಬರ್ 19ರ ಭಾನುವಾರದಿಂದ ಅಭ್ಯಾಸವನ್ನು ಆರಂಭಿಸಲಿದ್ದಾರೆ. ಇನ್ನು ಇದಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಸಂಜೆ ಸಮಯದಲ್ಲಿ ಜಾಗಿಂಗ್ ಹೊರಟಿದ್ದು ಕೆಲಕಾಲ ಫುಟ್ಬಾಲ್ ಆಡಿ ಅಭ್ಯಾಸವನ್ನು ಕೂಡ ನಡೆಸಿದ್ದಾರೆ. ಹೌದು, ಟೀಮ್ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ವಿರಾಟ್ ಕೊಹ್ಲಿ ತಂಡದ ಆಟಗಾರರ ಜೊತೆ ಫುಟ್ಬಾಲ್ ಆಡುವ ಮೂಲಕ ಚುಟುಕು ಅಭ್ಯಾಸ ನಡೆಸಿದ್ದಾರೆ.

ಹೀಗೆ ಟೀಮ್ ಇಂಡಿಯಾ ಆಟಗಾರರು ಜಾಗಿಂಗ್ ಮಾಡಿ, ಫುಟ್ಬಾಲ್ ಆಡಿ ಅಭ್ಯಾಸ ನಡೆಸಿರುವ ವಿಶೇಷ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿ ತಂಡದ ಆಟಗಾರರ ಜೊತೆ ನಗುನಗುತ್ತಾ ಕಾಲಕಳೆದಿರುವುದನ್ನು ಕಂಡ ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳು ಯಾವುದೇ ಮನಸ್ತಾಪಗಳಿಲ್ಲದೇ ಟೀಮ್ ಇಂಡಿಯಾ ಈ ರೀತಿ ಒಗ್ಗಟ್ಟಾಗಿ ಇರುವುದನ್ನು ನೋಡಲು ತುಂಬಾ ಖುಷಿ ಎನಿಸುತ್ತದೆ ಇಂದು ಹಲವಾರು ಕಾಮೆಂಟ್ ಮಾಡಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿಗಳ ವೇಳಾಪಟ್ಟಿ ಈ ಕೆಳಕಂಡಂತಿದೆ..

ಮೊದಲಿಗೆ ಇತ್ತಂಡಗಳ ನಡುವೆ ಟೆಸ್ಟ್ ಸರಣಿ ನಡೆಯಲಿದ್ದು ಇದರ ವೇಳಾ ಪಟ್ಟಿ ಈ ಕೆಳಕಂಡಂತಿದೆ

ಮೊದಲ ಟೆಸ್ಟ್‌: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್‌, ಸೆಂಚುರಿಯನ್

ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್

ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್‌ ಟೌನ್

ಹೀಗೆ 3 ಪಂದ್ಯಗಳ ಟೆಸ್ಟ್ ಸರಣಿ ಮುಗಿದ ನಂತರ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು ಅದರ ವೇಳಾಪಟ್ಟಿ ಹೀಗಿದೆ

ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM

ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM

ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್‌ ಟೌನ್, ಸಮಯ - 2.00 PM

Story first published: Saturday, December 18, 2021, 16:26 [IST]
Other articles published on Dec 18, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+