Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ದ. ಆಫ್ರಿಕಾ: ರಾಜ್‌ಕೋಟ್‌ಗೆ ಬಂದಿಳಿದ ಭಾರತ ತಂಡಕ್ಕೆ ಗುಜರಾತಿ ಶೈಲಿಯ ಸ್ವಾಗತ

India vs South Africa: team India receive traditional Gujarati style welcome in Rajkot

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯದತ್ತ ಇದೀಗ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯ ರಾಜ್‌ಕೋಟ್‌ನಲ್ಲಿ ನಡೆಯಲಿದ್ದು ಭಾರತ ತಂಡ ಈ ಪಂದ್ಯವನ್ನಾಡಲು ಬುಧವಾರ ರಾಜ್‌ಕೋಟ್‌ಗೆ ಬಂದಿಳಿದಿದೆ. ಈ ಸಂದರ್ಭದಲ್ಲಿ ಭಾರತೀಯ ತಂಡದ ಆಟಗಾರರಿಗೆ ಗುಜರಾತಿ ಶೈಲಿಯಲ್ಲಿ ಅದ್ದೂರಿ ಸ್ವಾಗತ ದೊರೆತಿದ್ದು ಸಾಂಪ್ರದಾಯಿಕ ಗಾರ್ಬ ನೃತ್ಯದ ಮೂಲಕ ಆಟಗಾರರನ್ನು ಬರಮಾಡಿಕೊಳ್ಳಲಾಗಿದೆ.

ಇನ್ನು ಭಾರತೀಯ ಆಟಗಾರರಿಗೆ ದೊರೆಯ ಅದ್ದೂರಿ ಸ್ವಾಗತವನ್ನು ಬಿಸಿಸಿಐ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ. ತಮಗೆ ದೊರೆತ ಈ ಸ್ವಾಗತಕ್ಕೆ ಭಾರತೀಯ ತಂಡದ ಆಟಗಾರರು ಕೂಡ ಆನಂದಿಸಿದ್ದಾರೆ. ಈ ಮೂಲಕ ಮತ್ತೊಂದು ರೋಚಕ ಪಂದ್ಯಕ್ಕೆ ಭಾರತೀಯ ತಂಡ ಸಜ್ಜಾಗಿದೆ.

ಆದರೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೊರತುಪಡಿಸಿ ಸಹಾಯಕ ಸಿಬ್ಬಂದಿಗಳು ರಾಜ್‌ಕೋಟ್‌ನಲ್ಲಿ ಲಭ್ಯವಿಲ್ಲ. ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಮತ್ತು ಇತರ ಸಹಾಯಕ ಸಿಬ್ಬಂದಿಗಳು ಇಂಗ್ಲೆಂಡ್‌ಗೆ ತೆರಳಲಿದ್ದಾರೆ. ಆದರೆ ಎನ್‌ಸಿಎನ ಸಹಾಯಕ ಸಿಬ್ಬಂದಿ ಸಾಯಿರಾಜ್ ಬಹುತ್ಲೆ ಮತ್ತು ಶಿತಾಂಶು ಕೊಟಕ್ ಅವರು ಸಹಾಯಕ ಸಿಬ್ಬಂದಿಗಳಾಗಿ ಕೋಚ್ ರಾಹುಲ್ ದ್ರಾವಿಡ್‌ಗೆ ಸಾಥ್ ನೀಡಲಿದ್ದಾರೆ.

ಇನ್ನು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಭಾರತ ತಂಡ ಅದ್ಭುತ ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಆದರೆ ಈ ಸರಣಿಯನ್ನು ಭಾರತ ತನ್ನ ವಶಕ್ಕೆ ಪಡೆಯಬೇಕಾದರೆ ಅಂತಿಮ ಎರಡು ಪಂದ್ಯಗಳಲ್ಲಿಯೂ ಗೆಲ್ಲಲೇಬೇಕಾಗಿದೆ. ವೈಜಾಗ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತದ ಗೆಲುವು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಭಾರತ ಸ್ಕ್ವಾಡ್: ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್, ರವಿ ಬಿಷ್ಣೋಯ್, ದೀಪಕ್ ಹೂಡಾ, ವೆಂಕಟೇಶ್ ಅಯ್ಯರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

ದಕ್ಷಿಣ ಆಫ್ರಿಕಾ ಸ್ಕ್ವಾಡ್: ಟೆಂಬಾ ಬವುಮಾ (ನಾಯಕ), ರೀಜಾ ಹೆಂಡ್ರಿಕ್ಸ್, ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಹೆನ್ರಿಚ್ ಕ್ಲಾಸೆನ್ (ವಾಕ್), ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಅನ್ರಿಚ್ ನಾರ್ಟ್ಜೆ, ಟ್ರಿಸ್ಟಾನ್ ಸ್ಟಬ್ಸ್, ಲುಂಗಿ ಎನ್ಗಿಡಿ, ಮಾರ್ಕೊ ಜಾನ್ಸೆನ್, ಕ್ವಿಂಟನ್ ಡಿ ಕಾಕ್, ಐಡೆನ್ ಮಾರ್ಕ್ರಾಮ್

Story first published: Thursday, June 16, 2022, 9:57 [IST]
Other articles published on Jun 16, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+