ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಸರಣಿ ರೀತಿಯೇ ಏಕದಿನ ಸರಣಿಯಲ್ಲಿಯೂ ಭಾರತ ನೆಲಕಚ್ಚಲಿದೆ ಎಂದು ಎಚ್ಚರಿಕೆ ನೀಡಿದ ಬವುಮಾ

India vs South Africa: Team India will be under pressure in ODI series says Temba Bavuma

ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡ ಸಂದರ್ಭದಲ್ಲಿ ಟೆಸ್ಟ್ ಸರಣಿಯಲ್ಲಿ ಗೆಲ್ಲುವ ತಂಡ ಎಂಬ ಭರವಸೆಯನ್ನು ಮೂಡಿಸಿತ್ತು. ಎದುರಾಳಿ ದಕ್ಷಿಣ ಆಫ್ರಿಕಾ ತಂಡಕ್ಕಿಂತ ಬಲಿಷ್ಠವಾಗಿದ್ದ ಟೀಮ್ ಇಂಡಿಯಾ ಹರಿಣಗಳಿಗೆ ಟೆಸ್ಟ್ ಸರಣಿಯಲ್ಲಿ ಮಣ್ಣುಮುಕ್ಕಿಸುವುದರ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಹಲವಾರು ಮಾಜಿ ಕ್ರಿಕೆಟಿಗರು ಹಾಗೂ ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳು ವ್ಯಕ್ತಪಡಿಸಿದ್ದರು.

ಆ್ಯಶಸ್ ಟೆಸ್ಟ್: ಮದ್ಯಪಾನ ಮಾಡಿದ್ದ ಇಂಗ್ಲೆಂಡ್ ಆಟಗಾರರ ವಿರುದ್ಧ ತನಿಖೆಗೆ ಮುಂದಾದ ಇಸಿಬಿಆ್ಯಶಸ್ ಟೆಸ್ಟ್: ಮದ್ಯಪಾನ ಮಾಡಿದ್ದ ಇಂಗ್ಲೆಂಡ್ ಆಟಗಾರರ ವಿರುದ್ಧ ತನಿಖೆಗೆ ಮುಂದಾದ ಇಸಿಬಿ

ಈ ನಿರೀಕ್ಷೆಯಂತೆಯೇ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸುವುದರ ಮೂಲಕ ಶುಭಾರಂಭವನ್ನು ಮಾಡಿ ಸರಣಿ ಗೆಲ್ಲುವ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿತ್ತು. ಆದರೆ ನಂತರ ನಡೆದ ದ್ವಿತೀಯ ಹಾಗೂ ತೃತೀಯ ಟೆಸ್ಟ್ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಅನುಭವಿಸಿದ ಟೀಮ್ ಇಂಡಿಯಾ ಸರಣಿಯನ್ನು ಸೋತು ಮುಖಭಂಗಕ್ಕೆ ಒಳಗಾಯಿತು.

ಈ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲ್ಲುವ ಭಾರತದ ಕನಸು ಎಂಟನೇ ಬಾರಿ ಕೂಡ ಕನಸಾಗಿಯೇ ಉಳಿದುಬಿಟ್ಟಿತು. ಹೀಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಹೀನಾಯವಾಗಿ ಸೋತಿರುವ ಟೀಮ್ ಇಂಡಿಯಾ ಇದೀಗ ಕೆಎಲ್ ರಾಹುಲ್ ನಾಯಕತ್ವದಲ್ಲಿ ಹರಿಣಗಳ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದೆ. ಇತ್ತಂಡಗಳ ನಡುವಿನ ಮೊದಲನೇ ಏಕದಿನ ಪಂದ್ಯ ಇಂದು ( ಜನವರಿ 19 ) ಪಾರ್ಲ್‌ನ ಬೊಲ್ಯಾಂಡ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯ ಆರಂಭಕ್ಕೂ ಮುನ್ನ ಇತ್ತಂಡಗಳ ನಾಯಕರು ಕೂಡ ಮಾತನಾಡಿದ್ದು ಸರಣಿಯ ಕುರಿತು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ನಾಯಕತ್ವಕ್ಕಾಗಿ ರೋಹಿತ್, ರಾಹುಲ್ ಮಧ್ಯ ಪೈಪೋಟಿ ಶುರು; ಅನುಮಾನ ಮೂಡಿಸಿದ ರಾಹುಲ್‌ನ ಆ ಹೇಳಿಕೆ!ನಾಯಕತ್ವಕ್ಕಾಗಿ ರೋಹಿತ್, ರಾಹುಲ್ ಮಧ್ಯ ಪೈಪೋಟಿ ಶುರು; ಅನುಮಾನ ಮೂಡಿಸಿದ ರಾಹುಲ್‌ನ ಆ ಹೇಳಿಕೆ!

ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ಏಕದಿನ ತಂಡದ ನಾಯಕ ಟೆಂಬಾ ಬವುಮಾ ಮಾತನಾಡಿ ಟೆಸ್ಟ್ ಸರಣಿಯ ರೀತಿಯೇ ಏಕದಿನ ಸರಣಿಯಲ್ಲಿಯೂ ಕೂಡ ಟೀಮ್ ಇಂಡಿಯಾ ಸೋಲನ್ನು ಅನುಭವಿಸಲಿದೆ ಎಂದು ಹೇಳಿಕೆಯನ್ನು ನೀಡಿದ್ದಾರೆ. ಪ್ರಥಮ ಟೆಸ್ಟ್ ಪಂದ್ಯ ಮುಗಿದ ನಂತರ ದ್ವಿತೀಯ ಹಾಗೂ ತೃತೀಯ ಟೆಸ್ಟ್ ಪಂದ್ಯಗಳಲ್ಲಿ ನಮ್ಮ ತಂಡ ಹೇಗೆ ಗೆಲುವಿನ ಲಯ ಕಂಡುಕೊಂಡಿತು ಎಂಬುದನ್ನು ನೀವು ನೋಡಿದ್ದೀರಿ. ಅದೇ ರೀತಿಯ ಪ್ರದರ್ಶನ ಏಕದಿನ ಸರಣಿಯಲ್ಲಿಯೂ ಕೂಡ ಇರಲಿದ್ದು ನಮ್ಮ ತಂಡ ಗೆಲ್ಲುವ ಫೇವರಿಟ್ ಆಗಿದ್ದು, ಟೀಮ್ ಇಂಡಿಯಾ ಒತ್ತಡಕ್ಕೆ ಸಿಳುಕಿಕೊಳ್ಳಲಿದೆ ಎಂದು ತೆಂಬಾ ಬವುಮಾ ಎಚ್ಚರಿಕೆ ನೀಡಿದ್ದಾರೆ.

ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ ಮತ್ತು ಯುಜ್ವೇಂದ್ರ ಚಾಹಲ್

Australia ಹಾಗು Englandನ ಈ ಆಟಗಾರರಿಗೆ ದೊಡ್ಡ ಸಂಕಷ್ಟ | Oneindia Kannada

ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಜನ್ನೆಮನ್ ಮಲನ್, ಐಡೆನ್ ಮಾರ್ಕ್ರಾಮ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಡೇವಿಡ್ ಮಿಲ್ಲರ್, ಆಂಡಿಲೆ ಫೆಹ್ಲುಕ್ವಾಯೊ, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ ಮತ್ತು ತಬ್ರೈಜ್ ಶಮ್ಸಿ

Story first published: Wednesday, January 19, 2022, 16:06 [IST]
Other articles published on Jan 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X