ಕೊಹ್ಲಿ ಅಸಮಾಧಾನ ಇನ್ನೂ ತಣ್ಣಗಾಗಿಲ್ವಾ?: ಅನುಮಾನ ಮೂಡಿಸಿದೆ ವಿರಾಟ್ ಕೊಹ್ಲಿ ನಡೆ!

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಲು ಟೀಮ್ ಇಂಡಿಯಾ ಸಜ್ಜಾಗಿದೆ. ಮೊದಲಿಗೆ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿರುವ ಭಾರತೀಯ ತಂಡವನ್ನು ಈಗಾಗಲೇ ಆಯ್ಕೆ ಮಾಡಲಾಗಿದ್ದು ಭಾನುವಾರ ಎಲ್ಲಾ ಆಟಗಾರರು ಕೂಡ ಮುಂಬೈನಲ್ಲಿ ಸೇರಲು ಸೂಚಿಸಲಾಗಿತ್ತು. ಆದರೆ ಟೀಮ್ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಮೊದಲ ದಿನದ ಶಿಬಿರವನ್ನು ತಪ್ಪಿಸಿಕೊಂಡಿದ್ದಾರೆ. ಇದರಿಂದಾಗಿ ವಿರಾಟ್ ಕೊಹ್ಲಿಗೆ ಬಿಸಿಸಿಐ ತನ್ನನ್ನು ನಡೆಸಿಕೊಂಡ ರೀತಿಯ ಬಗ್ಗೆ ಇನ್ನೂ ಅಸಮಾಧಾನ ಮುಂದುವರಿದಿದೆಯಾ ಎಂಬ ಅನುಮಾನ ಮೂಡಿಸಿದೆ.
ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳುವ ಎಲ್ಲಾ ಆಟಗಾರರು ಕೂಡ ಮುಂಬೈನಲ್ಲಿ ಒಟ್ಟಾಗಿದ್ದು ಅಭ್ಯಾಸದಲ್ಲಿ ಭಾಗವಹಿಸಿದ್ದರು. ಆದರೆ ವಿರಾಟ್ ಕೊಹ್ಲಿ ಮಾತ್ರ ಇದನ್ನು ತಪ್ಪಿಸಿಕೊಂಡಿದ್ದಾರೆ. ಸೋಮವಾರದಿಂದ ಎಲ್ಲಾ ಆಟಗಾರರು ಕೂಡ ಮೂರು ದಿನಗಳ ಕಾಲ ಕ್ವಾರಂಟೈನ್‌ಗೆ ಒಳಗಾಗಲಿದ್ದು ಡಿಸೆಂಬರ್ 16ರಂದು ಟೀಮ್ ಇಂಡಿಯಾ ಬಳಗ ಜೋಹನ್ಸ್‌ಬರ್ಗ್‌ಗೆ ಪ್ರಯಾಣ ಬೆಳೆಸಲಿದೆ.

ವಿರಾಟ್ ಕೊಹ್ಲಿಗೆ ಶಿಬಿರದ ಮಾಹಿತಿ ನೀಡಲಾಗಿದೆ
ವಿರಾಟ್ ಕೊಹ್ಲಿ ಶಿಬಿರವನ್ನು ಸೇರ್ಪಡೆಯಾಗದ ಬಗ್ಗೆ ಭಾನುವಾರ ಸಂಜೆ ಇನ್‌ಸೈಡ್ ಸ್ಪೋರ್ಟ್‌ಗೆ ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. "ವಿರಾಟ್ ಕೊಹ್ಲಿಗೆ ಖಂಡಿತವಾಗಿಯೂ ಶಿಬಿರದ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಆದರೆ ಅವರು ಶಿಬಿರವನ್ನು ಸೇರಿಕೊಂಡಿಲ್ಲ. ಅವರು ಸೋಮವಾರ ಶಿಬಿರವನ್ನು ಸೇರಿಕೊಳ್ಳುವ ನಿರೀಕ್ಷೆಯಿದೆ. ಜೊಹನ್ಸ್‌ಬರ್ಗ್‌ಗೆ ಪ್ರಯಾಣ ಬೆಳೆಸುವ ಮುನ್ನ ಎಲ್ಲಾ ಆಟಗಾರರು ಕೂಡ ಮೂರು ದಿನಗಳ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ" ಎಂದು ಬಿಸಿಸಿಐನ ಆ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕರೆ ಮಾಡಿದರೂ ಸ್ವೀಕರಿಸಿಲ್ಲ ಕೊಹ್ಲಿ!
ಇನ್ನು ಇನ್‌ಸೈಡ್ ಸ್ಪೋರ್ಟ್ ಇನ್ನು ಕೆಲ ಕುತೂಹಲಕಾರಿ ಸಂಗತಿಯನ್ನು ವರದಿಯಲ್ಲಿ ಪ್ರಕಟಿಸಿದೆ. ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಮಂಡಳಿಯ ಸದಸ್ಯರು ಹಾಗೂ ಕೆಲ ಬಿಸಿಸಿಐ ಅಧಿಕಾರಿಗಳು ನಾಯಕ ವಿರಾಟ್ ಕೊಹ್ಲಿಗೆ ಕರೆ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ವಿರಾಟ್ ಕೊಹ್ಲಿ ಕರೆಯನ್ನು ಸ್ವೀಕರಿಸಿಲ್ಲ ಹಾಗೂ ಮರಳಿ ಕರೆಯನ್ನು ಕೂಡ ಮಾಡಿಲ್ಲ ಎಂದು ವರದಿಯಲ್ಲಿ ತಿಳಿಸಿದೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್ ರಾಜ್‌ಕುಮಾರ್ ಶರ್ಮಾ ಮಾತನಾಡುತ್ತಾ ವಿರಾಟ್ ಕೊಹ್ಲಿಗೆ ತಾನು ಫೋನ್ ಮಾಡಲು ಪ್ರಯತ್ನಿಸಿದ್ದಾಗ ಸ್ವಿಚ್ ಆಫ್ ಬಂದಿತ್ತು ಎಂದಿದ್ದರು. ರಾಜ್‌ಕುಮಾರ್ ವಿರಾಟ್ ಕೊಹ್ಲಿಯನ್ನು ಬಿಸಿಸಿಐ ನಡೆಸಿಕೊಂಡ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 26ರಿಂದ ಸರಣಿ ಆರಂಭ
ಡಿಸೆಂಬರ್ 16ರಂದು ಟೀಮ್ ಇಂಡಿಯಾ ಆಟಗಾರರು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳುವ ಕಾರಣದಿಂದಾಗಿ ಅದಕ್ಕೂ ಮುನ್ನ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಕೊರೊನಾವೈರಸ್‌ನ ಹೊಸ ರೂಪಾಂತರಿ ಒಮೈಕ್ರಾನ್ ಅಟ್ಟಹಾಸ ಹೆಚ್ಚಾಗಿರುವ ಕಾರಣದಿಂದಾಗಿ ಕಠಿಣ ಬಯೋಬಬಲ್‌ನಲ್ಲಿ ಸರಣಿಯನ್ನು ಆಯೋಜಿಸಲಾಗುತ್ತದೆ. ಈ ಮುನ್ನ ನಿಗದಿಪಡಿಸಿದ್ದಕ್ಕಿಂತ 9 ದಿನಗಳ ನಂತರ ಸರಣಿ ಆರಂಭವಾಗುತ್ತಿದ್ದು ಡಿಸೆಂಬರ್ 26ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಮೂರು ಪಂದ್ಯಗಳ ಈ ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಂಚೂರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆಯಲಿದೆ.

ಭಾರತ ಟೆಸ್ಟ್ ಸ್ಕ್ವಾಡ್ ಹೀಗಿದೆ
ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್
ಮೀಸಲು ಆಟಗಾರರು: ನವದೀಪ್ ಸೈನಿ, ಸೌರಭ್ ಕುಮಾರ್, ದೀಪಕ್ ಚಾಹರ್, ಅರ್ಜನ್ ನಾಗ್ವಾಸ್ವಾಲ್ಲಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications