ಭಾರತ vs ದ.ಆಫ್ರಿಕಾ ಪ್ರಥಮ ಟೆಸ್ಟ್: ಭಾರತದ ಐತಿಹಾಸಿಕ ಗೆಲುವಿಗೆ 6 ವಿಕೆಟ್ ಬಾಕಿ, ಲೈವ್ ಸ್ಕೋರ್

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿರುವ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಹರಿಣಗಳ ವಿರುದ್ಧ ಮೊದಲಿಗೆ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದೆ. ಈ 3 ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಚೊಚ್ಚಲ ಟೆಸ್ಟ್ ಪಂದ್ಯ ಡಿಸೆಂಬರ್ 26ರಂದು ಆರಂಭವಾಗಿದೆ. ಸೆಂಚೂರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಇದೀಗ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು ಐದನೇ ದಿನದಾಟದಂದು ದಕ್ಷಿಣ ಆಫ್ರಿಕಾ ಟೀಮ್ ಇಂಡಿಯಾ ವಿರುದ್ಧ ಜಯ ಸಾಧಿಸಬೇಕೆಂದರೆ 211 ರನ್‌ಗಳನ್ನು ಬಾರಿಸಬೇಕಿದೆ ಮತ್ತು ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬೇಕೆಂದರೆ 6 ವಿಕೆಟ್‍ಗಳನ್ನು ಕಬಳಿಸಬೇಕಿದೆ.
ಹೀಗೆ ಐದನೇ ದಿನದಾಟದಂದು ದಕ್ಷಿಣ ಆಫ್ರಿಕಾ ತಂಡಕ್ಕಿಂತ ಭಾರತಕ್ಕೆ ಹೆಚ್ಚು ಅನುಕೂಲವಿದೆ ಎಂದು ಹೇಳಿದರೆ ತಪ್ಪಾಗಲಾರದು. ಹೀಗೇನಾದರೂ ದಕ್ಷಿಣಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಿದ್ದೇ ಆದರೆ ಟೆಸ್ಟ್ ಕ್ರಿಕೆಟ್‍ನಲ್ಲಿ ಟೀಮ್ ಇಂಡಿಯಾ ಸಾಧಿಸಲಿರುವ ಐತಿಹಾಸಿಕ ಗೆಲುವು ಇದಾಗಲಿದೆ. ಹೌದು, ಸದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಈ ಪಂದ್ಯ ಸೆಂಚೂರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಕ್ರೀಡಾಂಗಣದಲ್ಲಿ ಇತ್ತಂಡಗಳು ಸೆಣಸಾಡುತ್ತಿರುವ ಮೂರನೇ ಟೆಸ್ಟ್ ಪಂದ್ಯ ಇದಾಗಿದೆ. ಇದೇ ಕ್ರೀಡಾಂಗಣದಲ್ಲಿ ಇತ್ತಂಡಗಳ ನಡುವೆ ಈ ಹಿಂದೆ 2 ಬಾರಿ ಟೆಸ್ಟ್ ಮುಖಾಮುಖಿಯಾಗಿದ್ದು ಎರಡೂ ಬಾರಿಯೂ ಕೂಡ ಟೀಮ್ ಇಂಡಿಯಾ ಗೆಲುವು ಸಾಧಿಸಲು ಆಗಿರಲಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದರೆ ಸೆಂಚೂರಿಯನ್ ಕ್ರೀಡಾಂಗಣದಲ್ಲಿ ಭಾರತದ ಚೊಚ್ಚಲ ಟೆಸ್ಟ್ ಪಂದ್ಯದ ಗೆಲುವು ಎಂಬ ದಾಖಲೆ ನಿರ್ಮಾಣವಾಗಲಿದೆ.
ಈ ಹಿಂದೆ ಗಬ್ಬಾ, ಓವಲ್ ಕ್ರೀಡಾಂಗಣದಲ್ಲಿ ವಿಜಯ ಪತಾಕೆಯನ್ನು ಹಾರಿಸಿದ್ದ ಟೀಮ್ ಇಂಡಿಯಾ ಇದೀಗ ಸೆಂಚುರಿಯನ್ ಕ್ರೀಡಾಂಗಣದಲ್ಲಿಯೂ ಕೂಡ ಅದೇ ರೀತಿಯ ಗೆಲುವನ್ನು ಸಾಧಿಸುವ ಸನಿಹದಲ್ಲಿದೆ.
ನಾಲ್ಕನೇ ದಿನದವರೆಗೂ ಪಂದ್ಯದ ಹೈಲೈಟ್ಸ್:
ಡಿಸೆಂಬರ್ 26ರಂದು ಆರಂಭವಾದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆರಿಸಿಕೊಂಡರು. ಹೀಗೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮಯಾಂಕ್ ಅಗರ್ವಾಲ್ ಹಾಗೂ ಕೆಎಲ್ ರಾಹುಲ್ ಅವರ ಉತ್ತಮ ಪ್ರದರ್ಶನದಿಂದ ಮೊದಲನೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ನಷ್ಟಕ್ಕೆ 327 ರನ್ ಕಲೆಹಾಕಿತು. ನಂತರ ಮೊದಲನೇ ಇನಿಂಗ್ಸ್ ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 10 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿತು. ಹೀಗೆ ಟೀಮ್ ಇಂಡಿಯಾ 130 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತು. ನಂತರ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 174 ರನ್‌ಗಳಿಗೆ ಆಲ್ ಔಟ್ ಆಗುವುದರ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ ಗೆಲ್ಲಲು 305 ರನ್‌ಗಳ ಗುರಿಯನ್ನು ನೀಡಿದೆ. ಹೀಗೆ ಟೀಮ್ ಇಂಡಿಯಾ ನೀಡಿದ ಗುರಿಯನ್ನು ಬೆನ್ನೆಟ್ಟಿರುವ ದಕ್ಷಿಣ ಆಫ್ರಿಕಾ ನಾಲ್ಕನೇ ದಿನದಾಟದಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 94 ರನ್ ಗಳಿಸಿದೆ. ಮೊದಲನೇ ಇನ್ನಿಂಗ್ಸ್‌ನಲ್ಲಿ 1 ರನ್‌ಗೆ ಔಟ್ ಆಗಿ ಮಂಕಾಗಿದ್ದ ಡೀನ್ ಎಲ್ಗರ್ ಈ ಇನ್ನಿಂಗ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಮೊದಲನೇ ದಿನದಾಟದಂತ್ಯಕ್ಕೆ ಅಜೇಯ 52 ರನ್ ಗಳಿಸಿ ಟೀಮ್ ಇಂಡಿಯಾಗೆ ತಲೆನೋವಾಗಿ ಪರಿಣಮಿಸಿದ್ದಾರೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications