For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ ಪ್ರಥಮ ಟೆಸ್ಟ್: 2ನೇ ದಿನದಾಟದ ಆರಂಭಕ್ಕೆ ಮಳೆ ಅಡ್ಡಿ, ಪಂದ್ಯದ ಲೈವ್ ಸ್ಕೋರ್

India vs South Africa Test Series: First Test Second day live score

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ ಹರಿಣಗಳ ವಿರುದ್ಧ 3 ಟೆಸ್ಟ್ ಪಂದ್ಯಗಳ ಸರಣಿ ಮತ್ತು 3 ಏಕದಿನ ಪಂದ್ಯಗಳ ಸರಣಿಯಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಮೊದಲಿಗೆ ಇತ್ತಂಡಗಳ ನಡುವೆ ಟೆಸ್ಟ್ ಸರಣಿ ನಡೆಯುತ್ತಿದ್ದು ಚೊಚ್ಚಲ ಟೆಸ್ಟ್ ಪಂದ್ಯ ಈಗಾಗಲೇ ಆರಂಭವಾಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯ ಚೊಚ್ಚಲ ಪಂದ್ಯ ಡಿಸೆಂಬರ್ 26ರ ಬಾಕ್ಸಿಂಗ್ ಡೇ ದಿನದಂದು ಸೆಂಚೂರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಹೀಗೆ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಜೋಡಿ ಅತ್ಯುತ್ತಮ ಆರಂಭವನ್ನು ನೀಡಿದೆ. ಮಯಾಂಕ್ ಅಗರ್ವಾಲ್ 60 ರನ್ ಗಳಿಸಿ ಔಟ್ ಆದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಚೇತೇಶ್ವರ್ ಪೂಜಾರ ಗೋಲ್ಡನ್ ಡಕ್ ಔಟ್ ಆಗುವುದರ ಮೂಲಕ ಮತ್ತೊಮ್ಮೆ ದೊಡ್ಡ ಮಟ್ಟದಲ್ಲಿ ನಿರಾಸೆಯನ್ನು ಮೂಡಿಸಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ವಿರಾಟ್ ಕೊಹ್ಲಿ 35 ರನ್ ಗಳಿಸಿ ಔಟ್ ಆದರೆ, ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮಾತ್ರ ಮೊದಲ ದಿನದಾಟದುದ್ದಕ್ಕೂ ವಿಕೆಟ್ ಕಳೆದುಕೊಳ್ಳದೇ ಅಜೇಯ 122 ರನ್ ಗಳಿಸಿದರು. ಹೌದು, ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಹರಿಣಗಳ ಬೌಲಿಂಗ್ ದಾಳಿಗೆ ಪ್ರತ್ಯುತ್ತರವನ್ನು ನೀಡುತ್ತಾ ಶತಕ ಬಾರಿಸಿ ಸಂಭ್ರಮಾಚರಣೆಯನ್ನು ಕೂಡ ಮಾಡಿದರು. ಅತ್ತ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಜಿಂಕ್ಯ ರಹಾನೆ ಅಜೇಯ 40 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

1
51799

ಈ ಮೂಲಕ ಪ್ರಥಮ ಟೆಸ್ಟ್ ಪಂದ್ಯದ ಮೊದಲನೇ ದಿನದಾಟದಂತ್ಯಕ್ಕೆ ಟೀಮ್ ಇಂಡಿಯಾ 3 ವಿಕೆಟ್ ನಷ್ಟಕ್ಕೆ 293 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದೆ. ಅತ್ತ ದಕ್ಷಿಣ ಆಫ್ರಿಕಾ ತಂಡದ ಲುಂಗಿ ಎನ್ ಗಿಡಿ ( 3 ವಿಕೆಟ್ ) ಹೊರತುಪಡಿಸಿ ಬೇರೆ ಯಾವುದೇ ಆಟಗಾರ ಕೂಡ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿಲ್ಲ. ಸದ್ಯ ಕೆಎಲ್ ರಾಹುಲ್ ಮತ್ತು ಅಜಿಂಕ್ಯ ರಹಾನೆ ಎರಡನೇ ದಿನದಾಟವನ್ನು ಆರಂಭಿಸಲು ತಯಾರಾಗಿದ್ದು ಆರಂಭದಲ್ಲಿಯೇ ಮಳೆ ಅಡ್ಡಿಪಡಿಸಿದೆ. ಹೌದು ಎರಡನೇ ದಿನದಾಟವನ್ನು ಆರಂಭಿಸುವ ಸಮಯಕ್ಕೆ ಸೆಂಚೂರಿಯನ್ ಕ್ರೀಡಾಂಗಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯ ಪ್ರಮಾಣ ತುಸು ಹೆಚ್ಚೇ ಇದ್ದು, ಇಂದಿನ ಆಟದ ಮೇಲೆ ಯಾವ ರೀತಿಯ ಪರಿಣಾಮವನ್ನು ಬೀರಲಿದೆ ಎಂಬುದನ್ನು ಕಾದು ನೋಡಬೇಕು.

Virat ಟೈಮ್ ಮುಗೀತು ಈಗ Ganguly ಟೈಮ್ ಅಂತಾ ರವಿ ಶಾಸ್ತ್ರಿ ಹೇಳಿದ್ಯಾಕೆ? | Oneindia Kannada

Story first published: Monday, December 27, 2021, 14:00 [IST]
Other articles published on Dec 27, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+