ಫೈನಲ್‌ವರೆಗೆ ಭಾರತ, ದಕ್ಷಿಣ ಆಫ್ರಿಕಾದ ಹಾದಿ ಹೇಗಿತ್ತು?
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಭಾನುವಾರ ನವಿ ಮುಂಬೈನಲ್ಲಿ ನಡೆಯಲಿದೆ. ಈ ವೇಳೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಚೊಚ್ಚಲ ಬಾರಿಗೆ ಟ್ರೋಫಿಗೆ ಮುತ್ತಿಡುವ ಕನಸಿನಲ್ಲಿವೆ. ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದು, ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಈ ಬಾರಿ ಮಹಿಳಾ ಏಕದಿನ ವಿಶ್ವಕಪ್ ಗೆ ನೂತನ ಅಧಿಪತಿ ಸಿಗಲಿದ್ದಾರೆ.
ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಭಾರತ ಬಲಾಢ್ಯವಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ 34 ಪಂದ್ಯಗಳಲ್ಲಿ ಭಾರತ 20 ಪಂದ್ಯಗಳನ್ನು ಗೆದ್ದಿದೆ. ದಕ್ಷಿಣ ಆಫ್ರಿಕಾ 13 ಪಂದ್ಯ ಗೆದ್ದಿದೆ. ಲೀಗ್ ಹಂತದಲ್ಲಿ ನಡೆದ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಕಂಡಿತ್ತು. ಫೈನಲ್ ಪಂದ್ಯದಲ್ಲಿ ಜಯ ಸಾಧಿಸಿ, ಮೊದಲ ಬಾರಿಗೆ ಟ್ರೋಫಿಗೆ ಮುತ್ತಿಡುವ ಕನಸು ಭಾರತ ತಂಡದ್ದಾಗಿದೆ. ಭಾರತ ಮೂರನೇ ಬಾರಿ ಫೈನಲ್‌ಗೆ ಪ್ರವೇಶ ಪಡೆದರೆ, ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಫೈನಲ್‌ಗೆ ಅರ್ಹತೆ ಪಡೆದಿದೆ.

ಫೈನಲ್‌ವರೆಗೆ ಭಾರತದ ಹಾದಿ
ಭಾರತ ಪ್ರಸಕ್ತ ವಿಶ್ವಕಪ್‌ನಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡವನನು 59 ರನ್‌ಗಳಿಂದ ಮಣಿಸಿ ಅಬ್ಬರಿಸಿದೆ. ಇನ್ನು ಎರಡನೇ ಪಂದ್ಯದಲ್ಲಿ ಪಾಕ್ ತಂಡವನ್ನು 88 ರನ್‌ಗಳಿಂದ ಸೋಲಿಸಿತು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್, ಆಸ್ಟ್ರೇಲಿಯಾ ವಿರುದ್ಧ 3 ವಿಕೆಟ್, ಇಂಗ್ಲೆಂಡ್ ವಿರುದ್ಧ 4 ರನ್ ಸೋಲು ಕಂಡಿದ್ದ ಹರ್ಮನ್ ಪಡೆ ಹ್ಯಾಟ್ರಿಕ್ ಸೋಲು ಅನುಭವಿಸಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತದ ವನಿತೆಯೆರು ಉಪಾಂತ್ಯಕ್ಕೆ ಪ್ರವೇಶಿಸುವುದನ್ನು ಕನ್ಫರ್ಮ್ ಮಾಡಿದರು. ಇನ್ನು ಲೀಗ್ ಹಂತದ ಕೊನೆಯ ಪಂದ್ಯದ ಮಳೆಯಿಂದಾಗಿ ರದ್ದಾಗಿತ್ತು. ಈ ಪಂದ್ಯದಲ್ಲಿ ಭಾರತ, ಬಾಂಗ್ಲಾ ವಿರುದ್ಧ ಕಣಕ್ಕೆ ಇಳಿದಿತ್ತು. ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್ ಜಯ ಸಾಧಿಸಿ, ಪ್ರಶಸ್ತಿ ಸುತ್ತು ಪ್ರವೇಶಿಸಿತು.
ಹೇಗಿತ್ತು ದಕ್ಷಿಣ ಆಫ್ರಿಕಾ ಪ್ರದರ್ಶನ?
ಇನ್ನು ದಕ್ಷಿಣ ಆಫ್ರಿಕಾ ಸಹ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್ ಸೋಲು ಕಂಡಿದ್ದ ದಕ್ಷಿಣ ಆಫ್ರಿಕಾ ಪುಟಿದೆದ್ದಿತು. ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 6 ವಿಕೆಟ್, ಭಾರತದ ವಿರುದ್ಧ 3 ವಿಕೆಟ್, ಬಾಂಗ್ಲಾ ವಿರುದ್ಧ 3 ವಿಕೆಟ್ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿತ್ತು. ಇನ್ನು ಶ್ರೀಲಂಕಾ ವಿರುದ್ಧ 10 ವಿಕೆಟ್, ಪಾಕಿಸ್ತಾನ 150 ರನ್ ಜಯ ಸಾಧಿಸಿತು. ಇನ್ನು ಆಸ್ಟ್ರೇಲಿಯಾ ವಿರುದ್ಧ 7 ವಿಕೆಟ್ ಗೆಲುವು ದಾಖಲಿಸಿತ್ತು. ಇನ್ನು ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ 125 ರನ್ ಜಯ ಸಾಧಿಸಿ ಫೈನಲ್‌ಗೆ ಪ್ರವೇಶ ಪಡೆದಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications