For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ: ಬಾಕ್ಸಿಂಗ್‌‌ ಡೇ ಟೆಸ್ಟ್‌ಗೆ ಕೌಂಟ್‌ಡೌನ್ ಶುರು; ಅಭ್ಯಾಸದ ಚಿತ್ರ ಹಂಚಿಕೊಂಡ ಕೊಹ್ಲಿ

India vs South Africa: Virat Kohli shares practice session pics ahead of boxing day test

ಇತ್ತೀಚೆಗಷ್ಟೇ ನಡೆದ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಮತ್ತು ಟೆಸ್ಟ್ ಎರಡೂ ಸರಣಿಗಳಲ್ಲಿಯೂ ಜಯಗಳಿಸಿ ವಿಜಯ ಪತಾಕೆ ಹಾರಿಸಿದ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿದ್ದು ಹರಿಣಗಳ ವಿರುದ್ಧ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಭಾಗವಹಿಸಲಿದೆ. ಹೌದು, ಈಗಾಗಲೇ ದಕ್ಷಿಣ ಆಫ್ರಿಕಾಕ್ಕೆ ಬಂದಿಳಿದಿರುವ ಟೀಂ ಇಂಡಿಯಾ ಮೊದಲಿಗೆ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿದ್ದು ನಂತರ 3 ಪಂದ್ಯಗಳ ಏಕದಿನ ಸರಣಿಗಳಲ್ಲಿ ಹರಿಣಗಳ ವಿರುದ್ಧ ಸೆಣಸಾಟ ನಡೆಸಲಿದೆ.

ಇನ್ನು ಮೊದಲು ಯೋಜಿಸಿದ್ದ ರೀತಿಯೇ ಎಲ್ಲಾ ನಡೆದಿದ್ದರೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಪ್ರಥಮ ಪಂದ್ಯ ಡಿಸೆಂಬರ್ 17ರಿಂದ ಆರಂಭವಾಗಬೇಕಿತ್ತು. ಅದರೆ ಒಮಿಕ್ರಾನ್ ವೈರಸ್ ಕಾರಣದಿಂದಾಗಿ 9 ದಿನಗಳು ತಡವಾಗಿ ಇತ್ತಂಡಗಳ ನಡುವಿನ ಟೆಸ್ಟ್ ಸರಣಿ ಆರಂಭವಾಗುತ್ತಿದ್ದು ಡಿಸೆಂಬರ್ 26ರಂದು ಪ್ರಥಮ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ.

ದಕ್ಷಿಣ ಆಫ್ರಿಕಾವನ್ನು ತಲುಪಿರುವ ಟೀಮ್ ಇಂಡಿಯಾ ಪ್ರಿಟೋರಿಯಾದ ಪಂಚತಾರಾ ಹೋಟೆಲ್ ಒಂದರಲ್ಲಿ ವಾಸ್ತವ್ಯ ಹೂಡಿದ್ದು ಬಯೋ ಬಬಲ್ ವ್ಯವಸ್ಥೆಯನ್ನು ಪಾಲಿಸುತ್ತಿದೆ. ಇದರ ಜೊತೆಗೆ ಸೆಂಚೂರಿಯನ್ ಕ್ರೀಡಾಂಗಣದಲ್ಲಿ ಚೊಚ್ಚಲ ಟೆಸ್ಟ್ ಪಂದ್ಯಕ್ಕೋಸ್ಕರ ಅಭ್ಯಾಸವನ್ನು ಕೂಡ ಟೀಮ್ ಇಂಡಿಯಾ ಆಟಗಾರರು ಆರಂಭಿಸಿದ್ದು, ರಾಹುಲ್ ದ್ರಾವಿಡ್ ಸಲಹೆ ಅಡಿಯಲ್ಲಿ ವಿಭಿನ್ನ ತರಬೇತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಮೊದಲಿಗೆ ಬಿಸಿಸಿಐ ಟೀಮ್ ಇಂಡಿಯಾ ಆಟಗಾರರ ಅಭ್ಯಾಸದ ಚಿತ್ರಗಳನ್ನು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯ ಮೂಲಕ ಹಂಚಿಕೊಂಡಿತ್ತು. ಅದರಲ್ಲಿ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ತೊಡಗಿಕೊಂಡಿದ್ದರು.

ಇದಾದ ನಂತರ ತಂಡದ ಇತರೆ ಆಟಗಾರರು ರಾತ್ರಿ ವೇಳೆ ಉಪಹಾರ ಸವಿಯಲು ಒಂದೆಡೆ ಸೇರಿದ್ದ ಚಿತ್ರಗಳನ್ನು ಹಂಚಿಕೊಂಡಿದ್ದರು. ಆದರೆ ಈ ಚಿತ್ರದಲ್ಲಿ ಎಲ್ಲಿಯೂ ಕೂಡ ತಂಡದ ನಾಯಕ ವಿರಾಟ್ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ. ಈ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಚರ್ಚೆಗಳು ಕೂಡ ನಡೆದಿದ್ದವು. ಇನ್ನು ದಕ್ಷಿಣ ಆಫ್ರಿಕಾ ತಲುಪಿ ಮೊದಲ ದಿನ ಅಭ್ಯಾಸ ಮುಗಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಚಿತ್ರವನ್ನು ಹಂಚಿಕೊಂಡಿದ್ದ ವಿರಾಟ್ ಕೊಹ್ಲಿ ನಂತರ ಯಾವುದೇ ಚಿತ್ರಗಳನ್ನು ಕೂಡ ಹಂಚಿಕೊಂಡಿರಲಿಲ್ಲ. ಆದರೆ ಇದೀಗ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಅಭ್ಯಾಸದ ಚಿತ್ರಗಳನ್ನು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಬರೆದುಕೊಂಡಿದ್ದಾರೆ. ತಮ್ಮ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಅಭ್ಯಾಸದ ಚಿತ್ರಗಳನ್ನು ಹಂಚಿಕೊಂಡಿರುವ ವಿರಾಟ್ ಕೊಹ್ಲಿ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ತವಕದಲ್ಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಮುಂದಿನ ಶತಕಕ್ಕೋಸ್ಕರ ಹಲವಾರು ತಿಂಗಳುಗಳಿಂದ ಕಾಯುತ್ತಿರುವ ಅಭಿಮಾನಿಗಳಿಗೆ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯಲ್ಲಾದರೂ ವಿರಾಟ್ ಕೊಹ್ಲಿಯ 71ನೇ ಶತಕ ನೋಡುವ ಅವಕಾಶ ಸಿಗಲಿದೆಯಾ ಎಂಬುದನ್ನು ಕಾದುನೋಡಬೇಕಿದೆ.

Story first published: Friday, December 24, 2021, 14:42 [IST]
Other articles published on Dec 24, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+