ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ: ಕೊಹ್ಲಿ ಪೆವಿಲಿಯನ್‌ನಲ್ಲಿ ಬ್ಯಾಟ್ ಬೀಸಿದ ಕೂಡಲೇ ವಿಕೆಟ್ ಒಪ್ಪಿಸಿದ ಅಗರ್ವಾಲ್, ವಿಡಿಯೋ ವೈರಲ್

India vs South Africa: Virat Kohli starts shadow practicing, Mayank gets out in the next delivery

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹರಿಣಗಳ ವಿರುದ್ಧ ಸೆಣಸಾಟವನ್ನು ನಡೆಸುತ್ತಿದೆ. ಇತ್ತಂಡಗಳ ನಡುವಿನ ಈ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಮೊದಲೆರಡು ಪಂದ್ಯಗಳು ಮುಗಿದಿದ್ದು ಸೆಂಚುರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಹರಿಣಗಳಿಗೆ ಸೋಲುಣಿಸಿದ ಟೀಮ್ ಇಂಡಿಯಾ ಜಯವನ್ನು ಸಾಧಿಸಿ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿತ್ತು. ನಂತರ ಜೋಹಾನ್ಸ್ ಬರ್ಗ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾಕ್ಕೆ ಸೋಲುಣಿಸಿದ ದಕ್ಷಿಣ ಆಫ್ರಿಕಾ ಜಯ ಸಾಧಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿತು.

ಹೀಗೆ ಇತ್ತಂಡಗಳ ನಡುವಿನ ಮೊದಲೆರಡು ಟೆಸ್ಟ್ ಪಂದ್ಯಗಳು ಮುಗಿದ ನಂತರ ಸಮಬಲ ಸಾಧಿಸಿರುವ ಕಾರಣದಿಂದಾಗಿ ಇಂದು ಕೇಪ್ ಟೌನ್ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ತೃತೀಯ ಟೆಸ್ಟ್ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಜಯ ಸಾಧಿಸಲಿರುವ ತಂಡ ಸರಣಿಯಲ್ಲಿ ವಿಜೇತ ತಂಡವಾಗಿ ಹೊರಹೊಮ್ಮಲಿದ್ದು, ಎರಡೂ ತಂಡಗಳಿಗೂ ಕೂಡ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಐಪಿಎಲ್ 2022: ಎಬಿಡಿ ಈ ತಂಡದ ಪರ ಮೈದಾನಕ್ಕಿಳಿಯಲಿದ್ದಾರೆ ಎಂದ ಮಾಜಿ ಕ್ರಿಕೆಟಿಗಐಪಿಎಲ್ 2022: ಎಬಿಡಿ ಈ ತಂಡದ ಪರ ಮೈದಾನಕ್ಕಿಳಿಯಲಿದ್ದಾರೆ ಎಂದ ಮಾಜಿ ಕ್ರಿಕೆಟಿಗ

15 ರನ್‌ಗೆ ಮಯಾಂಕ್ ಔಟ್

15 ರನ್‌ಗೆ ಮಯಾಂಕ್ ಔಟ್

ಹೀಗೆ ಭಾರೀ ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಭಾರತ ಮತ್ತು ದಕ್ಷಿಣ ಆಫ್ರಿಕ ತಂಡಗಳ ನಡುವಿನ ತೃತೀಯ ಟೆಸ್ಟ್ ಪಂದ್ಯ ಇಂದು ಆರಂಭವಾಗಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ಆರಂಭಿಕ ಆಟಗಾರರಾಗಿ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಕಣಕ್ಕಿಳಿದರು. ಕೆಎಲ್ ರಾಹುಲ್ 12 ರನ್ ಗಳಿಸಿದ್ದಾಗ ಔಟ್ ಆದರೆ, ಮಯಾಂಕ್ ಅಗರ್ವಾಲ್ 15 ರನ್ ಗಳಿಸಿ ನಿರ್ಗಮಿಸಿದರು. ಮಯಾಂಕ್ ಅಗರ್ವಾಲ್ ಔಟ್ ಆದ ಬೆನ್ನಲ್ಲೇ ನಾಲ್ಕನೇ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿ ಕಣಕ್ಕಿಳಿದರು.

ವಿರಾಟ್ ಅಭ್ಯಾಸ ಶುರು ಮಾಡುತ್ತಿದ್ದಂತೆ ಮಯಾಂಕ್ ಔಟ್

ವಿರಾಟ್ ಅಭ್ಯಾಸ ಶುರು ಮಾಡುತ್ತಿದ್ದಂತೆ ಮಯಾಂಕ್ ಔಟ್

ಇನ್ನು ಮಯಾಂಕ್ ಅಗರ್ವಾಲ್ ಔಟ್ ಆಗುವ ಮುನ್ನ ಪೆವಿಲಿಯನ್‌ನಲ್ಲಿ ನಾಯಕ ವಿರಾಟ್ ಕೊಹ್ಲಿ ಬ್ಯಾಟ್ ಹಿಡಿದು ನೆರಳು ಅಭ್ಯಾಸ ನಡೆಸುತ್ತಿದ್ದರು. ಹೀಗೆ ವಿರಾಟ್ ಕೊಹ್ಲಿ ಹೆಲ್ಮೆಟ್ ಧರಿಸಿ ಬ್ಯಾಟ್ ಹಿಡಿದು ನಿಂತು ಅಭ್ಯಾಸ ನಡೆಸಿದ ಮುಂದಿನ ಎಸೆತದಲ್ಲಿಯೇ ಮಯಾಂಕ್ ಅಗರ್ವಾಲ್ ರಬಾಡ ಎಸೆತಕ್ಕೆ ಏಡನ್ ಮರ್ಕ್ರಮ್ ಅವರಿಗೆ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು. ಸದ್ಯ ವಿರಾಟ್ ಕೊಹ್ಲಿ ಮತ್ತು ಮಯಾಂಕ್ ಅಗರ್ವಾಲ್ ಅವರ ನಡುವಿನ ಕಾಕತಾಳೀಯ ಸನ್ನಿವೇಶದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೊಹ್ಲಿ ಬ್ಯಾಟ್ ಹಿಡಿದು ಸಿದ್ಧವಾಗುವುದಕ್ಕೂ ಮಯಾಂಕ್ ಅಗರ್ವಾಲ್ ವಿಕೆಟ್ ಒಪ್ಪಿಸುವುದಕ್ಕೂ ಹೊಂದಾಣಿಕೆ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.

79 ರನ್ ಗಳಿಸಿದ ಕೊಹ್ಲಿ

79 ರನ್ ಗಳಿಸಿದ ಕೊಹ್ಲಿ

ಮಯಾಂಕ್ ಅಗರ್ವಾಲ್ ಔಟ್ ಆದ ಬೆನ್ನಲ್ಲೇ ಕಣಕ್ಕಿಳಿದ ನಾಯಕ ವಿರಾಟ್ ಕೊಹ್ಲಿ 79 ರನ್ ಗಳಿಸುವುದರ ಮೂಲಕ ಜವಾಬ್ದಾರಿಯುತ ಆಟವನ್ನಾಡಿದರು. ಒಂದೆಡೆ ಟೀಮ್ ಇಂಡಿಯಾ ವಿಕೆಟ್ ಬೀಳುತ್ತಿದ್ದರೂ ಬಹುತೇಕ ಇನ್ನಿಂಗ್ಸ್ ಕೊನೆಯವರೆಗೂ ಕಣದಲ್ಲಿ ನಿಂತು ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸಿದರು. 201 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 79 ರನ್ ಕಲೆಹಾಕಿ 12 ಬೌಂಡರಿ ಮತ್ತು 1 ಸಿಕ್ಸ್ ಬಾರಿಸಿದರು. ಈ ಮೂಲಕ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಅಲ್ಪ ಮೊತ್ತ ಕಲೆ ಹಾಕುವುದನ್ನು ತಪ್ಪಿಸಿ ಜವಾಬ್ದಾರಿಯುತ ಆಟವನ್ನಾಡಿ ಆಪತ್ಬಾಂಧವನಾದರು. 79 ರನ್ ಗಳಿಸಿ ಶತಕದತ್ತ ಹೆಜ್ಜೆ ಹಾಕುತ್ತಿದ್ದ ವಿರಾಟ್ ಕೊಹ್ಲಿ ರಬಾಡ ಎಸೆತದಲ್ಲಿ ವಿಕೆಟ್ ಕೀಪರ್‌ಗೆ ಕ್ಯಾಚ್ ನೀಡಿ ಔಟ್ ಆದರು. ಈ ಮೂಲಕ 71ನೇ ಶತಕದ ನಿರೀಕ್ಷೆಯಲ್ಲಿದ್ದ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಭಾರಿ ನಿರಾಸೆ ಉಂಟಾಯಿತು.

Story first published: Wednesday, January 12, 2022, 17:07 [IST]
Other articles published on Jan 12, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X