ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಶ್ರೀಲಂಕಾ: ಮೊದಲ ಏಕದಿನ ಪಂದ್ಯದಲ್ಲಿ ಕನ್ನಡಿಗ ಪಡಿಕ್ಕಲ್‌ಗೆ ಸಿಗುತ್ತಾ ಅವಕಾಶ!

India vs Sri lanka 1st ODI: can Devdutt Padikkal get a chance to open innings with Shikhar Dhawan
ಪಡಿಕ್ಕಲ್ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಆಡ್ತಾರಾ?

ಬೆಂಗಳೂರು, ಜುಲೈ 15: ಭಾರತ ಹಾಗೂ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಜುಲೈ 18ರಂದು ನಡೆಯಲಿದೆ. ಯುವ ಆಟಗಾರನ್ನು ಹೊಂದಿರುವ ತಂಡದಲ್ಲಿ ಸಾಕಷ್ಟು ಪೈಪೋಟಿ ಇರುವುದಂತು ನಿಜ. ಹೀಗಾಗಿ ಯಾವೆಲ್ಲಾ ಆಟಗಾರರು ಆಡುವ ಬಳಗದಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಶ್ರೀಲಂಕಾ ವಿರುದ್ಧ ಸೀಮಿತ ಓವರ್‌ಗಳ ಸರಣಿಗೆ ಕರ್ನಾಟಕದ ಯುವ ಆಟಗಾರ ದೇವದತ್ ಪಡಿಕ್ಕಲ್ ಕೂಡ ಆಯ್ಕೆಯಾಗಿದ್ದಾರೆ. ದೇಶೀಯ ಕ್ರಿಕೆಟ್‌ ಹಾಗೂ ಐಪಿಎಲ್‌ನಲ್ಲಿ ಅದ್ಭುತವಾದ ಪ್ರದರ್ಶನ ನೀಡಿ ಮಿಂಚಿರುವ ಪಡಿಕ್ಕಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವುದನ್ನು ನೋಡಲು ಅವರ ಅಭಿಮಾನಿಗಳು ಕಾತರಿಸುತ್ತಿದ್ದಾರೆ. ಹಾಗಾದರೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆಡುವ ಅವಕಾಶ ಪಡೆದುಕೊಳ್ಳುತ್ತಾರಾ ದೇವದತ್ ಪಡಿಕ್ಕಲ್ ಎಂಬುದು ಪ್ರಶ್ನೆಯಾಗಿದೆ.

ಶ್ರೀಲಂಕಾಗೆ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾ ತಂಡದ ಬಗ್ಗೆ ಲಂಕಾ ಕೋಚ್ ಹೇಳಿದ್ದಿಷ್ಟು!ಶ್ರೀಲಂಕಾಗೆ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾ ತಂಡದ ಬಗ್ಗೆ ಲಂಕಾ ಕೋಚ್ ಹೇಳಿದ್ದಿಷ್ಟು!

ಆದರೆ ಕನ್ನಡಿಗ ದೇವದತ್ ಪಡಿಕ್ಕಲ್ ಮೊದಲ ಪಂದ್ಯದಲ್ಲಿಯೇ ಟೀಮ್ ಇಂಡಿಯಾ ಪರವಾಗಿ ಕಣಕ್ಕಿಳಿಯುವ ಆವಕಾಶ ಗಿಟ್ಟಿಸಿಕೊಳ್ಳುವ ಸಾಧ್ಯತೆ ಬಹುತೇಕ ಕಡಿಮೆಯಿದೆ. ಆರಂಭಿಕನಾಗಿರುವ ಪಡಿಕ್ಕಲ್‌ಗೆ ಇನ್ನೋರ್ವ ಯುವ ಆಟಗಾರ ಪೃಥ್ವಿ ಶಾ ಭಾರೀ ಪೈಪೋಟಿಯನ್ನು ನೀಡುತ್ತಿದ್ದಾರೆ. ಇದು ಮೊದಲ ಪಂದ್ಯದಲ್ಲಿ ಪಡಿಕ್ಕಲ್ ಅವಕಾಶ ಗಿಟ್ಟಿಸಿಕೊಳ್ಳಲು ಅಡ್ಡಿಯಾಗುವ ಸಾಧ್ಯತೆ ಹೆಚ್ಚಿದೆ.

ಒಂದೆಡೆ ನಾಯಕ ಶಿಖರ್ ಧವನ್ ಆರಂಭಿಕನಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಮತ್ತೊಂದು ಆರಂಭಿಕ ಸ್ಥಾನಕ್ಕೆ ಪೃಥ್ವಿ ಶಾ ಹಾಗೂ ದೇವದತ್ ಪಡಿಕ್ಕಲ್ ಮಧ್ಯೆ ಪೈಪೋಟಿ ನಡೆಯಲಿದೆ. ಪಡಿಕ್ಕಲ್‌ ರೀತಿಯಲ್ಲಿಯೇ ಶಾ ದೇಶೀಯ ಕ್ರಿಕೆಟ್ ಹಾಗೂ ಐಪಿಎಲ್‌ನಲ್ಲಿ ಅತ್ಯುನ್ನತ ಫಾರ್ಮ್ ಪ್ರದರ್ಶಿಸಿದ್ದಾರೆ.

ಜೊತೆಗೆ ಐಪಿಎಲ್‌ನಲ್ಲಿ ಶಿಖರ್ ಧವನ್ ಜೊತೆಗೆ ಆರಂಭಿಕನಾಗಿಯೂ ಕಣಕ್ಕಿಳಿದ ಅನುಭವ ಪೃಥ್ವಿ ಶಾ ಹೊಂದಿದ್ದಾರೆ. ಅಲ್ಲದೆ ಶ್ರೀಲಂಕಾದಲ್ಲಿ ನಡೆದ ಇಂಟ್ರಾ ಸ್ಕ್ವಾಡ್ ಪಂದ್ಯದಲ್ಲಿಯೂ ಪೃಥ್ವಿ ಶಾ ಸ್ಥಿರ ಪ್ರದರ್ಶನ ನೀಡಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ನಾಯಕ ಶಿಖರ್ ಧವನ್‌ಗೆ ಆರಂಭಿಕನಾಗಿ ಪೃಥ್ವಿ ಶಾ ಸಾಥ್ ನೀಡುವ ಸಾಧ್ಯತೆ ಹೆಚ್ಚಾಗಿದೆ.

Story first published: Thursday, July 15, 2021, 18:22 [IST]
Other articles published on Jul 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X