ಭಾರತ vs ಶ್ರೀಲಂಕಾ 1st ಟಿ20: Live ಸ್ಕೋರ್, ಸಂಪೂರ್ಣ ಆಡುವ ಬಳಗ

ಕೊಲಂಬೋ, ಜುಲೈ 25: ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಟಾಸ್ ಗೆದ್ದಿರುವ ಶ್ರೀಲಂಕಾ ನಾಯಕ ದಸುನ್ ಶನಕ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಭಾರತ ಮೊದಲ ಸರದಿಯಲ್ಲಿ ಬ್ಯಾಟಿಂಗ್‌ಗೆ ಇಳಿಯಲಿದೆ.
ಈ ಪಂದ್ಯದಲ್ಲಿ ಎರಡು ತಂಡಗಳಲ್ಲಿಯೂ ತಲಾ ಇಬ್ಬರು ಆಟಗಾರರು ಪದಾರ್ಪಣೆಯನ್ನು ಮಾಡುತ್ತಿದ್ದಾರೆ. ಟೀಮ್ ಇಂಡಿಯಾ ಪರವಾಗಿ ಪೃಥ್ವಿ ಶಾ ಹಾಗೂ ವರುಣ್ ಚಕ್ರವರ್ತಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನ ಚೊಚ್ಚಲ ಪಂದ್ಯವನ್ನಾಡುತ್ತಿದ್ದಾರೆ. ಆದರೆ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಅನುಭವಿ ಮನೀಶ್ ಪಾಂಡೆ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ.
ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಇಬ್ಬರು ಕೂಡ ತಂಡದ ಹನ್ನೊಂದರ ಬಳಗದಲ್ಲಿ ಅವಕಾಶ ಗಿಟ್ಟಿಸಿದ್ದಾರೆ. ಇನ್ನು ಕನ್ನಡಿಗ ದೇವದತ್ ಪಡಿಕ್ಕಲ್ ಈ ಪಂದ್ಯದಲ್ಲಿ ಕೂಡ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಆರಂಭಿಕನಾಗಿ ಪೃಥ್ವಿ ಶಾ ಅವಕಾಶಗಿಟ್ಟಿಸಿದ್ದಾರೆ.
Live ಸ್ಕೋರ್ ಪಟ್ಟಿ ಹೀಗಿದೆ:
ಶ್ರೀಲಂಕಾ ಆಡುವ ಬಳಗ:
ಅವಿಷ್ಕಾ ಫರ್ನಾಂಡೊ, ಮಿನೋಡ್ ಭನುಕಾ (ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚಾರಿತ್ ಅಸಲಂಕಾ, ದಸುನ್ ಶನಕಾ (ನಾಯಕ), ಆಶೇನ್ ಬಂಡರಾ, ವನಿಂದು ಹಸರಂಗ, ಚಮಿಕಾ ಕರುಣರತ್ನೆ, ಇಸುರು ಉದಾನ, ಅಕಿಲಾ ದಾನಂಜಯ, ದುಷ್ಮಂತಾ ಚಮೀರ
ಟೀಮ್ ಇಂಡಿಯಾ ಆಡುವ ಬಳಗ:
ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ದೀಪಕ್ ಚಹರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ವರುಣ್ ಚಕ್ರವರ್ತಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications