Ind vs SL 1st t20I: ಹೂಡಾ, ಅಕ್ಷರ್ ಭರ್ಜರಿ ಹೋರಾಟ: ಲಂಕಾಗೆ ಸವಾಲಿನ ಗುರಿ ನೀಡಿದ ಭಾರತ

ಭಾರತ ಹಾಗೂ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಆರಂಭದ ಹೊರತಾಗಿಯೂ ಹಿನ್ನಡೆ ಅನುಭವಿಸಿತು. ಆದರೆ ಅಮತಿಮ ಹಂತದಲ್ಲಿ ದೀಪಕ್ ಹೂಡಾ ಹಾಗೂ ಅಕ್ಷರ್ ಪಟೇಲ್ ಅವರ ಅದ್ಭುತ ಬ್ಯಾಟಿಂಗ್ ಸಾಹಸದಿಂದಾಗಿ ಗೌರವಯುತ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದೆ. ಶ್ರೀಲಂಕಾದ ಸ್ಪಿನ್ನರ್‌ಗಳ ಸಂಘಟಿತ ಪ್ರದರ್ಶನ ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತೀಯ ಬ್ಯಾಟಿಂಗ್ ವಿಭಾಗಕ್ಕೆ ಭಾರೀ ಸವಾಲೊಡ್ಡುವಲ್ಲಿ ಯಶಸ್ವಿಯಾಯಿತು.
ಆರಂಭಿಕ ಎರಡು ಓವರ್‌ಗಳಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಇಶಾನ್ ಕಿಶನ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಕಾರಣ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವ ವಿಶ್ವಾಸ ಮೂಡಿಸಿತ್ತು. ಆದರೆ ಚೊಚ್ಚಲ ಪಂದ್ಯವನ್ನಾಡಿದ ಶುಬ್ಮನ್ ಗಿಲ್ ವಿಕೆಟ್ ಕಳೆದುಕೊಳ್ಳುವ ಮೂಲಕ ಟೀಮ್ ಇಂಡಿಯಾ ಹಿನ್ನಡೆ ಅನುಭವಿಸಿತು. ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟ್‌ನಿಂದಲೂ ನಿರೀಕ್ಷಿತ ಪ್ರದರ್ಶನ ಬಾರಲಿಲ್ಲ. ಆದರೆ ದೀಪಕ್ ಹೂಡಾ ಹಾಗೂ ಅಕ್ಷರ್ ಪಟೇಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು ಭಾರತ ನಿಗದಿತ 20 ಓವರ್‌ಗಳಲ್ಲಿ 162 ರನ್‌ಗಳನ್ನು ಗಳಿಸಲು ಕಾರಣವಾದರು.
Live ಸ್ಕೋರ್ ಹೀಗಿದೆ
ಹೂಡಾ, ಅಕ್ಷರ್ ಭರ್ಜರಿ ಬ್ಯಾಟಿಂಗ್: ಇನ್ನು 15ನೆ ಓವರ್‌ನ ಮೊದಲ ಎಸೆತದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ವಿಕೆಟ ಕಳೆದುಕೊಳ್ಳುವ ಮೂಲಕ ಟೀಮ್ ಇಂಡಿಯಾ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಟೀಮ್ ಇಂಡಿಯಾ 94 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಬಳಿಕ ಹೂಡಾ ಅವರನ್ನು ಸೇರಿಕೊಂಡ ಅಕ್ಷರ್ ಪಟೇಲ್ ಉತ್ತಮ ಕೊಡುಗೆ ನೀಡಿದರು. ಸ್ಪೋಟಕ ಬ್ಯಾಟಿಂಗ್ ನಡೆಸಿದ ಈ ಜೋಡಿ ಅಂತಿಮ 35 ಎಸೆತಗಳಲ್ಲಿ 68 ರನ್‌ಗಳನ್ನು ಸೇರಿಸುವಲ್ಲಿ ಯಶಸ್ವಿಯಾದರು. ದೀಪಕ್ ಹೂಡಾ 23 ಎಸೆತದಲ್ಲಿ 4 ಸಿಕ್ಸರ್‌ಗಳ ಸಹಿತ 41 ರನ್‌ಗಳಿಸಿದರೆ ಅಕ್ಷರ್ ಪಟೇಲ್ 20 ಎಸೆತಗಳಲ್ಲಿ 31 ರನ್ ಗಳಿಸಿದರು.
ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಅದ್ಭುತ ಬೌಲಿಂಗ್ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಸಂಘಟಿತ ಪ್ರದರ್ಶನ ನೀಡಿದ ಲಂಕಾ ಬೌಲಿಂಗ್ ವಿಭಾಗದಲ್ಲಿ ರಜಿತ ಹೊರತುಪಡಿಸಿ ಬೌಲಿಂಗ್ ನಡೆಸಿದ ಉಳಿದ ಐವರು ಬೌಲರ್‌ಗಳು ಕೂಡ ವಿಕೆಟ್ ಪಡೆದುಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ನಾಯಕ ದಾಸುನ್ ಶನಕ ಅದ್ಭುತ ಹೋರಾಟ ನಡೆಸಿ ಗೆಲುವಿಗಾಗಿ ಶ್ರಮಿಸಿದರು. ಆದರೆ ತಂಡದ ಗೆಲುವಿಗೆ 34 ರನ್‌ಗಳ ಅಗತ್ಯವಿದ್ದಾಗ ನಾಯಕ ಶನಕ 45 ರನ್‌ಗಳಿಸಿ ಉಮ್ರಾನ್ ಮಲಿಕ್‌ಗೆ ವಿಕೆಟ್ ಒಪ್ಪಿಸಿದರು. ಬಳಿಕವೂ ಹೋರಾಟ ಕೈಬಿಡದ ಶ್ರೀಲಂಕಾ ಪರವಾಗಿ ಚಾಮಿಕ ರತ್ನೆ ಗೆಲುವಿನ ಭರವಸೆ ಮೂಡಿಸಿದರು. ಆದರೆ ಅಂತಿಮವಾಗಿ ಶ್ರೀಲಂಕಾ ಕೇವಲ 2 ರನ್‌ಗಳ ಅಂತರದಿಂದ ಸೋಲು ಅನುಭವಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-0 ಅಂತರದ ಮುನ್ನಡೆ ಸಾಧಿಸಿದೆ.
ಇತ್ತಂಡಗಳ ಆಡುವ ಬಳಗ
ಶ್ರೀಲಂಕಾ ಪ್ಲೇಯಿಂಗ್ XI: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ
ಬೆಂಚ್: ಲಹಿರು ಕುಮಾರ, ಅವಿಷ್ಕ ಫೆರ್ನಾಂಡೋ, ಅಶೇನ್ ಬಂಡಾರ, ಪ್ರಮೋದ್ ಮದುಶನ್, ದುನಿತ್ ವೆಳ್ಳಾಲಗೆ, ನುವಾನ್ ತುಷಾರ, ಸದೀರ ಸಮರವಿಕ್ರಮ
ಭಾರತ ಆಡುವ XI: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್
ಬೆಂಚ್: ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಾಹುಲ್ ತ್ರಿಪಾಠಿ, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications