Ind vs SL 1st t20I: ಮೊದಲ ಟಿ20 ಪಂದ್ಯದ ಟಾಸ್ ರಿಪೋರ್ಟ್ ಆಡುವ ಬಳಗ ಹಾಗೂ Live ಸ್ಕೋರ್

ಭಾರತ ಹಾಗೂ ಶ್ರೀಲಂಕಾ ತಂಡಗಳು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಇಂದು ಮುಖಾಮುಖಿಯಾಗಿದ್ದು ವಾಂಖೆಡೆ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಿದೆ. ಮೊದಲ ಪಂದ್ಯದಲ್ಲ ಟಾಸ್ ಗೆದ್ದ ಪ್ರವಾಸಿ ಶ್ರೀಲಂಕಾ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಟೀಮ್ ಇಂಡಿಯಾ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿದ್ದು ಯುವ ಆಟಗಾರರಿಗೆ ಈ ಸರಣಿ ದೊಡ್ಡ ಅವಕಾಶವಾಗಿದೆ. ಅನುಭವಿ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಈ ಸರಣಿಗೆ ಅಲಭ್ಯವಾಗಿರುವ ಕಾರಣ ಯುವ ಆಟಗಾರರ ಪ್ರದರ್ಶನ ಕುತೂಹಲ ಮೂಡಿಸಿದೆ. ಇನ್ನು ಈ ಪಂದ್ಯದಲ್ಲಿ ಯುವ ಆಟಗಾರರಾದ ಶಿವಂ ಮಾವಿ ಹಾಗೂ ಶುಬ್ಮನ್ ಗಿಲ್ ಟಿ20 ಮಾದರಿಗೆ ಪದಾರ್ಪಣೆ ಮಾಡಿದ್ದಾರೆ.
Live ಸ್ಕೋರ್ ಹೀಗಿದೆ
ಟಾಸ್ ಸಂದರ್ಭದಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ ನಾಯಕನಾಗಿ ಮುನ್ನಡೆಸುತ್ತಿರುವುದು ಉತ್ಸಾಹ ಹೆಚ್ಚಿಸಿದೆ ಎಂದಿದ್ದಾರೆ. "ದೇಶದ ಪರವಾಗಿ ಆಡುವುದೆಂದರೆ ಯಾವಾಗಲೂ ವಿಶೇಷ ಅನುಭವ ಈಗ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ದೊರೆತಿರುವುದು ಮತ್ತಷ್ಟು ವಿಶೇಷವೆನಿಸಿದೆ. ಯುವ ಉತ್ಸಾಹಿ ಆಟಗಾರರ ಪಡೆ ಯಾವ ರೀತಿಯಾಗಿ ಪ್ರದರ್ಶನ ನೀಡಲಿದೆ ಎಂಬ ಕುತೂಹಲವಿದೆ" ಎಂದು ಹಾರ್ದಿಕ್ ಪಾಂಡ್ಯ ಹೇಳಿಕೆ ನೀಡಿದ್ದಾರೆ.
ಇತ್ತಂಡಗಳ ಆಡುವ ಬಳಗ
ಶ್ರೀಲಂಕಾ ಪ್ಲೇಯಿಂಗ್ XI: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ
ಬೆಂಚ್: ಲಹಿರು ಕುಮಾರ, ಅವಿಷ್ಕ ಫೆರ್ನಾಂಡೋ, ಅಶೇನ್ ಬಂಡಾರ, ಪ್ರಮೋದ್ ಮದುಶನ್, ದುನಿತ್ ವೆಳ್ಳಾಲಗೆ, ನುವಾನ್ ತುಷಾರ, ಸದೀರ ಸಮರವಿಕ್ರಮ
ಭಾರತ ಆಡುವ XI: ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್
ಬೆಂಚ್: ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಾಹುಲ್ ತ್ರಿಪಾಠಿ, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications