Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಶ್ರೀಲಂಕಾ, ಪ್ರಥಮ ಟೆಸ್ಟ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ: Live ಸ್ಕೋರ್, ಪ್ಲೇಯಿಂಗ್ XI

India vs Sri Lanka 1st test, Mohali, Day 1, Toss report, Live score and Playing XI

ಭಾರತ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯ ಪ್ರಥಮ ಟೆಸ್ಟ್ ಪಂದ್ಯ ಮೊಹಾಲಿಯಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಟೆಸ್ಟ್ ತಂಡದ ನಾಯಕನಾಗಿ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸುತ್ತಿದ್ದು ಎಲ್ಲಾ ಮಾದರಿಯಲ್ಲಿಯೂ ಭಾರತ ತಂಡವನ್ನು ಮುನ್ನಡೆಸುವ ಜವಾಬ್ಧಾರಿಯನ್ನು ಹೊತ್ತುಕೊಂಡಿದ್ದಾರೆ.

ಇನ್ನು ಈ ಟೆಸ್ಟ್ ಪಂದ್ಯ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಯ 100ನೇ ಟೆಸ್ಟ್ ಪಂದ್ಯವಾಗಿದೆ. ಅಲ್ಲದೆ ಇದು ಶ್ರೀಲಂಕಾ ಕ್ರಿಕೆಟ್ ತಂಡಕ್ಕೂ ಮೈಲುಗಲ್ಲಿನ ಪಂದ್ಯವಾಗಿದ್ದು ಶ್ರೀಲಂಕಾ ತಂಡ ಆಡುತ್ತಿರುವ 300ನೇ ಟೆಸ್ಟ್ ಪಂದ್ಯ ಎಂಬುದು ಮತ್ತೊಂದು ಪ್ರಮುಖ ಅಂಶ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆಗೆ ಮಯಾಂಕ್ ಅಗರ್ವಾಲ್ ಸಾಥ್ ನೀಡುತ್ತಿದ್ದಾರೆ. ಇನ್ನು ಈ ಸರಣಿಯಿಂದ ಪ್ರಮುಖ ಆಟಗಾರರಾದ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯಾ ರಹಾನೆ ಹೊರಗುಳಿದಿದ್ದಾರೆ. ಈ ಇಬ್ಬರು ಅನುಭವಿಗಳ ಸ್ಥಾನವನ್ನು ಹನುಮ ವಿಹಾರಿ ಹಾಗೂ ಶ್ರೇಯಸ್ ಐಯ್ಯರ್ ತುಂಬಲಿದ್ದಾರೆ.

Live ಸ್ಕೋರ್‌ಕಾರ್ಡ್:

1
51927

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಇಬ್ಬರು ವೇಗಿಗಳು ಹಾಗೂ ಮೂವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯುತ್ತಿದೆ. ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬೂಮ್ರಾ ವೇಗಿಗಳಾಗಿ ತಂಡದಲ್ಲಿದ್ದರೆ ಅನುಭವಿ ಆರ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಜಯಂತ್ ಯಾದವ್ ಸ್ಪಿನ್ನರ್‌ಗಳಾಗಿ ಸಾಥ್ ನೀಡಲಿದ್ದಾರೆ. ಇನ್ನು ಈ ಶ್ರೀಲಂಕಾ ತಂಡ ಈ ಪಂದ್ಯದಲ್ಲಿ ಮೂವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯುತ್ತಿದೆ.

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಯಂತ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ

ಶ್ರೀಲಂಕಾ ಪ್ಲೇಯಿಂಗ್ XI: ದಿಮುತ್ ಕರುಣರತ್ನೆ(ನಾಯಕ), ಲಹಿರು ತಿರಿಮನ್ನೆ, ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ನಿರೋಶನ್ ಡಿಕ್ವೆಲ್ಲಾ(ವಿಕೆಟ್ ಕೀಪರ್), ಸುರಂಗ ಲಕ್ಮಲ್, ವಿಶ್ವ ಫೆರ್ನಾಂಡೊ, ಲಸಿತ್ ಎಂಬುಲ್ಡೆನಿಯಾ, ಲಹಿರು ಕುಮಾರ

Story first published: Friday, March 4, 2022, 9:31 [IST]
Other articles published on Mar 4, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+