For Quick Alerts
ALLOW NOTIFICATIONS  
For Daily Alerts
 

ಭಾರತ vs ಶ್ರೀಲಂಕಾ ಟಿ20 ಸರಣಿಯ ವೇಳಾಪಟ್ಟಿ ಮತ್ತು ಸಂಪೂರ್ಣ ಮಾಹಿತಿ

India vs Sri Lanka T20 Series Schedule | ONEINDIA KANNADA
 India vs Sri Lanka 2020: Complete time-table

ಭಾರತ ಮತ್ತೊಂದು ಸರಣಿಗೆ ಸಜ್ಜಾಗಿದೆ. ವೆಸ್ಟ್‌ ಇಂಡೀಸ್ ವಿರುದ್ಧ ಸರಣಿಯ್ನು ಗೆದ್ದು ವಶಕ್ಕೆ ಪಡೆದು 2019ನೇ ಇಸವಿಯನ್ನು ಯಶಸ್ವಿಯಾಗಿ ಅಂತ್ಯಗೊಳಿಸಿರುವ ಟೀಮ್ ಇಂಡಿಯಾ 2020ನೇ ಇಸವಿಯನ್ನು ಗೆಲುವಿನೊಂದಿಗೆ ಆರಂಭಿಸುವ ತವಕದಲ್ಲಿದೆ. ಶ್ರೀಲಂಕಾ ವಿರುದ್ಧದ ಕಿರು ಸರಣಿ ಇದಾಗಲಿದೆ. ಈ ಸರಣಿಯಲ್ಲಿ ಕೇವಲ ಮೂರು ಟಿ20 ಪಂದ್ಯಗಳನ್ನು ಶ್ರೀಲಂಕಾ ತಂಡ ಟೀಂ ಇಂಡಿಯಾ ವಿರುದ್ಧ ಆಡಲಿದೆ.

ಮತ್ತೊಂದೆಡೆ ಶ್ರೀಲಂಕಾ ತಂಡವೂ ಕೂಡ ಭಾರತದ ನೆಲದಲ್ಲಿ ಸರಣಿ ಗೆಲುವಿನ ತವಕದಲ್ಲಿದ್ದು ಈ ಮೂಲಕ ಹೊಸ ವರ್ಷವನ್ನು ಗೆಲುವಿನೊಂದಿಗೆ ಬರಮಾಡಿಕೊಳ್ಳುವ ಉತ್ಸಾಹದಲ್ಲಿದೆ. ಹೀಗಾಘಿಬ ಈ ಸರಣೊ ಸಹಜವಾಗಿಯೇ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರಲಿದೆ.

ಶ್ರೀಲಂಕಾ ತಂಡ ಇದಕ್ಕೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯಲ್ಲಿ ಪಾಲ್ಗೊಂಡಿತ್ತು. ಆದರೆ ಈ ಸರಣಿಯಲ್ಲಿ ಲಂಕಾ ವೈಟ್‌ವಾಶ್ ಅವಮಾನಕ್ಕೆ ತುತ್ತಾಗಿತ್ತು. ಹೀಗಾಗಿ ಭಾರತದ ವಿರುದ್ಧ ಭಾರತದ ನೆಲದಲ್ಲೇ ನಡೆಯುತ್ತಿರವ ಈ ಸರಣಿ ಅತ್ಯಂತ ಮಹತ್ವದ್ದಾಗಿದೆ.

ಟೀಮ್ ಇಂಡಿಯಾ 2020ರಲ್ಲಿ ಪಾಲ್ಗೊಳ್ಳುವ ಮೊದಲ ಸರಣಿ ಇದಾಗಲಿದೆ. ಈ ಸರಣಿಯ ವೇಳಾಪಟ್ಟಯನ್ನು ಗಮನಿಸೋದಾದರೆ;

ವೇಳಾಪಟ್ಟಿ;

ಮೊದಲ ಟಿ20:

ದಿನಾಂಕ: 5 ಜನವರಿ

ಸಮಯ: ಸಂಜೆ 7:00

ಕ್ರಿಡಾಂಗಣ: ಗುವಾಹಟಿಯ ಬಾರ್ಸಾಪರಾ ಕ್ರಿಕೆಟ್ ಕ್ರೀಡಾಂಗಣ

ಎರಡನೇ ಟಿ20:

ದಿನಾಂಕ:7 ಜನವರಿ

ಸಮಯ: ಸಂಜೆ 7:00

ಕ್ರೀಡಾಂಗಣ: ಇಂದೋರ್‌ನ ಹೋಲ್ಕರ್ ಕ್ರಿಕೆಟ್ ಕ್ರೀಡಾಂಗಣ

ಮೂರನೇ ಟಿ20:

ದಿನಾಂಕ:ಜನವರಿ 10

ಸಮಯ: ಸಂಜೆ 7:00

ಕ್ರೀಡಾಂಗಣ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣ

ಶ್ರೀಲಂಕಾ ವಿರುದ್ಧದ ಸರಣಿಗೆ ಪ್ರಕಟವಾಗಿರುವ ಟೀಮ್ ಇಂಡಿಯಾ ತಂಡ;

ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಸಂಜು ಸ್ಯಾಮ್ಸನ್, ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ಯುಜ್ವೇಂದ್ರ ಚಹಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ನವದೀಪ್ ಸೈನಿ, ಜಸ್ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್

Story first published: Sunday, December 29, 2019, 11:26 [IST]
Other articles published on Dec 29, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+