Ind vs SL 2nd T20I: ಅಕ್ಷರ್ ಪಟೇಲ್ ಸ್ಫೋಟಕ ಆಟ: ಜಡೇಜಾ, ದಿನೇಶ್ ಕಾರ್ತಿಕ್ ದಾಖಲೆ ಧೂಳಿಪಟ

ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಶ್ರೀಲಂಕಾ ಭಾರತದ ವಿರುದ್ಧದ 16 ರನ್‌ಗಳ ಜಯ ಸಾಧಿಸುವ ಸರಣಿಯನ್ನು ಸಮಬಲ ಮಾಡಿಕೊಂಡಿದೆ. ಸೂರ್ಯಕುಮಾರ್ ಮತ್ತು ಅಕ್ಷರ್ ಪಟೇಲ್ ಉತ್ತಮವಾಗಿ ಹೋರಾಡಿದರೂ ಜಯ ತಂದುಕೊಡುವಲ್ಲಿ ಸಾಧ್ಯವಾಗಲಿಲ್ಲ.
ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಕುಶಾಲ್ ಮೆಂಡಿಸ್ ಮತ್ತು ದಸುನ್ ಶನಕ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 206 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಭಾರತ ತಂಡ ಆರಂಭದಲ್ಲೇ ಆಘಾತ ಅನುಭವಿಸಿತು. ಇಶಾನ್ ಕಿಶನ್ 2 ರನ್ ಗಳಿಸಿ ಔಟಾದರೆ, ಶುಭಮನ್ ಗಿಲ್ 5 ರನ್ ಗಳಿಸಿ ಮತ್ತೆ ವೈಫಲ್ಯ ಅನುಭವಿಸಿದರು. ಚೊಚ್ಚಲ ಪಂದ್ಯವನ್ನಾಡಿದ ರಾಹುಲ್ ತ್ರಿಪಾಠಿ ಕೂಡ 5 ರನ್ ಗಳಿಸಿ ಔಟಾದರು.
ನಾಯಕ ಹಾರ್ದಿಕ್ ಪಾಂಡ್ಯ 12 ರನ್, ದೀಪಕ್ ಹೂಡಾ 9 ರನ್ ಗಳಿಸಿ ಔಟಾಗುವ ಮೂಲಕ ಭಾರತ ತಂಡ ಒತ್ತಡಕ್ಕೆ ಸಿಲುಕಿತು. ಆದರೆ, ಸೂರ್ಯಕುಮಾರ್ ಯಾದವ್ ಮತ್ತು ಅಕ್ಷರ್ ಪಟೇಲ್ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಮೊದಲ ಪಂದ್ಯದಲ್ಲಿ ರನ್ ಗಳಿಸಲು ವಿಫಲವಾಗಿದ್ದ ಸೂರ್ಯಕುಮಾರ್ ಯಾದವ್ ಎರಡನೇ ಪಂದ್ಯದಲ್ಲಿ 36 ಎಸೆತಗಳಲ್ಲಿ 51 ರನ್ ಗಳಿಸಿ ಮಿಂಚಿದರು.
ಅಕ್ಷರ್ ಪಟೇಲ್ ಅತ್ಯುತ್ತಮ ಇನ್ನಿಂಗ್ಸ್ ಆಡಿದರು, ಸ್ಫೋಟಕ ಬ್ಯಾಟಿಂಗ್ ಮಾಡಿದ ಅಕ್ಷರ್ ಪಟೇಲ್ 31 ಎಸೆತಗಳಲ್ಲಿ 65 ರನ್ ಸಿಡಿಸಿದರು. ಭಾರತಕ್ಕೆ ಒಂದು ಹಂತದಲ್ಲಿ ಗೆಲ್ಲುವ ಆಸೆ ಮೂಡಿತ್ತಾದರೂ, ಇವರಿಬ್ಬರೂ ಔಟಾದ ನಂತರ ಸೋಲು ಖಚಿತವಾಯಿತು. ಪಂದ್ಯ ಸೋತರೂ, ಅಕ್ಷರ್ ಪಟೇಲ್ ತಮ್ಮ ಇನ್ನಿಂಗ್ಸ್ ಮೂಲಕ ಮೂರು ದಾಖಲೆ ಮುರಿದಿದ್ದಾರೆ.

ಭಾರತೀಯ ಆಟಗಾರನ 5ನೇ ವೇಗದ ಅರ್ಧಶತಕ
ಮೊದಲ 8 ಎಸೆತಗಳಲ್ಲಿ ಕೇವಲ 8 ರನ್ ಗಳಿಸಿದ್ದ ಅಕ್ಷರ್ ಪಟೇಲ್ ನಂತರ ಆರ್ಭಟಿಸಿದರು. ಮುಂದಿನ 12 ಎಸೆತಗಳಲ್ಲಿ 42 ರನ್ ಕಲೆಹಾಕುವ ಮೂಲಕ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಅವರ ಚೊಚ್ಚಲ ಅರ್ಧಶತಕವಾಗಿದೆ.
ಇದು ಭಾರತೀಯ ಆಟಗಾರ ದಾಖಲಿಸಿದ 5ನೇ ವೇಗದ ಅರ್ಧಶತಕವಾಗಿದೆ. ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ 50 ರನ್ ಗಳಿಸಿರುವದ ಯುವರಾಜ್ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ. ಅಕ್ಷರ್ ಪಟೇಲ್ ಅರ್ಧಶತಕ, 6 ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ದಾಖಲಾದ ವೇಗದ ಅರ್ಧಶತಕವಾಗಿದೆ.
ಮಾಡಬಾರದ ತಪ್ಪು ನಾವು ಮಾಡಿದೆವು!: ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಮಾತು

ದಿನೇಶ್ ಕಾರ್ತಿಕ್ ದಾಖಲೆ ಮುರಿದ ಅಕ್ಷರ್
ಅಕ್ಷರ್ ಪಟೇಲ್‌ರ ಸ್ಫೋಟಕ ಇನ್ನಿಂಗ್ಸ್‌ನಲ್ಲಿ ಭರ್ಜರಿ ಆರು ಸಿಕ್ಸರ್ ಸಿಡಿಸಿದರು. ಇದು ಟಿ20 ಪಂದ್ಯದಲ್ಲಿ 7ನೇ ಕ್ರಮಾಂಕ ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಭಾರತೀಯ ಬ್ಯಾಟರ್ ಸಿಡಿಸಿದ ಅತಿ ಹೆಚ್ಚು ಸಿಕ್ಸರ್ ಗಳಾಗಿದೆ.
ಈ ಮೊದಲು ದಿನೇಶ್ ಕಾರ್ತಿಕ್ 7ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ 4 ಸಿಕ್ಸರ್ ಸಿಡಿಸಿದ್ದು ಈವರೆಗಿನ ದಾಖಲೆಯಾಗಿತ್ತು. ಈಗ ಅಕ್ಷರ್ ಪಟೇಲ್ ದಿನೇಶ್ ಕಾರ್ತಿಕ್ ದಾಖಲೆ ಮುರಿದು ಹೊಸ ದಾಖಲೆ ನಿರ್ಮಿಸಿದ್ದಾರೆ.

ಜಡೇಜಾ ದಾಖಲೆ ಮುರಿದ ಅಕ್ಷರ್
ಅಕ್ಷರ್ ಪಟೇಲ್ ತಮ್ಮ ಸ್ಫೋಟಕ ಇನ್ನಿಂಗ್ಸ್ ಮೂಲಕ ಮತ್ತೊಂದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಅರ್ಧಶತಕ ಗಳಿಸಿದ ಮೊದಲ ಭಾರತೀಯ ಆಟಗಾರ ಎನ್ನುವ ಖ್ಯಾತಿಗೆ ಭಾಜನರಾಗಿದ್ದಾರೆ.
7 ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಅತಿ ಹೆಚ್ಚು ವೈಯಕ್ತಿಕ ರನ್ ಗಳಿಸಿದ ಭಾರತೀಯ ಆಟಗಾರ ಎನ್ನುವ ದಾಖಲೆ ಅಕ್ಷರ್ ಪಟೇಲ್ ಹೆಸರಿಗೆ ಬಂದಿದೆ. ಈ ಮೊದಲು ಈ ದಾಖಲೆ ರವೀಂದ್ರ ಜಡೇಜಾ ಹೆಸರಿನಲ್ಲಿತ್ತು. ರವೀಂದ್ರ ಜಡೇಜಾ 2020 ರಲ್ಲಿ ಕ್ಯಾನ್‌ಬೆರಾದಲ್ಲಿ ಆಸ್ಟ್ರೇಲಿಯಾ ವಿರುದ್ಧ 23 ಎಸೆತಗಳಲ್ಲಿ 44* ರನ್ ಗಳಿಸಿದ್ದು ದಾಖಲೆಯಾಗಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications