Ind vs SL 2nd T20I: ಸರಣಿ ಗೆಲ್ಲುವ ಉತ್ಸಾಹದಲ್ಲಿ ಟೀಂ ಇಂಡಿಯಾ : ಸಂಭಾವ್ಯ ಪ್ಲೇಯಿಂಗ್ XI, ಪಿಚ್ ವರದಿ

ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಮೊದಲನೇ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿರುವ ಟೀಂ ಇಂಡಿಯಾ, ಎರಡನೇ ಟಿ20 ಪಂದ್ಯವನ್ನು ಗೆಲ್ಲುವ ಉತ್ಸಾಹದಲ್ಲಿದೆ.
ಸರಣಿಯ ಎರಡನೇ ಪಂದ್ಯ ಜನವರಿ 5 ರಂದು ಗುರುವಾರ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ಭಾರತ ಈ ಪಂದ್ಯವನ್ನು ಗೆದ್ದರೆ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ವಶಪಡಿಸಿಕೊಳ್ಳುತ್ತದೆ.
ಮೊದಲನೇ ಮತ್ತು ಎರಡನೇ ಪಂದ್ಯಕ್ಕೆ ಕೇವಲ ಒಂದು ದಿನ ಮಾತ್ರ ಅಂತರ ಇರುವುದರಿಂದ, ಎರಡೂ ತಂಡಗಳಿಗೆ ಅಭ್ಯಾಸ ಮಾಡಲು ಹೆಚ್ಚಿನ ಸಮಯ ಸಿಗುವುದಿಲ್ಲ. ಆದರೂ, ಬುಧವಾರ ಸಂಜೆ ಎರಡೂ ತಂಡಗಳು ಅಭ್ಯಾಸ ಮಾಡಲಿವೆ.
ಮೊದಲನೇ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಉತ್ತಮವಾಗಿತ್ತು, ಶುಭಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಎರಡನೇ ಟಿ20 ಪಂದ್ಯದಲ್ಲಿ ರನ್ ಗಳಿಸಿದರೆ, ಭಾರತದ ಗೆಲುವು ಮತ್ತಷ್ಟು ಸುಲಭವಾಗಲಿದೆ.
ಹಿರಿಯ ಆಟಗಾರರ ಅನುಪಸ್ಥಿತಿ ನಡುವೆಯೂ ಭಾರತದ ಯುವ ಪಡೆ ಒತ್ತಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದೆ. ಹಾರ್ದಿಕ್ ಪಾಂಡ್ಯ ಎರಡನೇ ಪಂದ್ಯದಲ್ಲಿ ಕೂಡ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉತ್ತಮ ಸ್ಪಿನ್ನರ್ ಗಳಿಗೆ ನೆರವು
ಎಂಸಿಎ ಸ್ಟೇಡಿಯಂನಲ್ಲಿ ಕಪ್ಪು ಮಣ್ಣಿನ ಪಿಚ್‌ಗಳನ್ನು ನಿರ್ಮಿಸಲಾಗಿದೆ. ಈ ಪಿಚ್ ಮುಖ್ಯವಾಗಿ ಸ್ಪಿನ್ ಬೌಲಿಂಗ್‌ಗೆ ಹೆಚ್ಚಿನ ಸಹಾಯ ಮಾಡುತ್ತದೆ. ಪಂದ್ಯದ ಆರಂಭದಲ್ಲಿ ಪಿಚ್ ಬ್ಯಾಟರ್ ಗಳಿಗೆ ಅನುಕೂಲ ಮಾಡುವುದರಿಂದ, ಟಾಸ್ ಗೆಲ್ಲುವ ತಂಡ ಮೊದಲು ಬ್ಯಾಟ್ ಮಾಡುವುದು ಉತ್ತಮ.
ಟೀಂ ಇಂಡಿಯಾ ಇಲ್ಲಿ ಇದುವರೆಗೂ 3 ಟಿ20 ಪಂದ್ಯಗಳನ್ನಾಡಿದ್ದು 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡುವ ತಂಡದ ಸರಾಸರಿ ಸ್ಕೋರ್ 153 ಆಗಿದ್ದು, ಎರಡನೇ ಇನ್ನಿಂಗ್ಸ್ ಸರಾಸರಿ ಮೊತ್ತ 129 ಆಗಿದೆ. 2020ರಲ್ಲಿ ಭಾರತ ಶ್ರೀಲಂಕಾ ವಿರುದ್ಧ ಗಳಿಸಿದ 201 ರನ್ ಇಲ್ಲಿ ದಾಖಲಾದ ಅತಿ ಹೆಚ್ಚು ಸ್ಕೋರ್ ಆಗಿದೆ.
ಹಾರ್ದಿಕ್ ಪಾಂಡ್ಯಗೆ ಸಮರ್ಥ ಬದಲಿ ಆಟಗಾರನನ್ನು ತಕ್ಷಣವೇ ಕಂಡುಕೊಳ್ಳಬೇಕಿದೆ: ಗಂಭೀರ್

ಎರಡೂ ತಂಡದಲ್ಲಿ ಬದಲಾವಣೆ ಇಲ್ಲ
ಮೊದಲನೇ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಎರಡನೇ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ. ಎಂಸಿಎ ಪಿಚ್ ಸ್ಪಿನ್ನರ್ ಗಳಿಗೆ ಸಹಾಯ ಮಾಡಲಿದ್ದು, ವೇಗ ಮತ್ತು ಸ್ಪಿನ್ ಬೌಲಿಂಗ್ ವಿಭಾಗ ಬಲಿಷ್ಠವಾಗಿರುವ ಕಾರಣ, ಪುಣೆಯಲ್ಲಿ ಭಾರತಕ್ಕೆ ಹೆಚ್ಚಿನ ಲಾಭವಾಗುತ್ತದೆ.
ಇನ್ನು ಶ್ರೀಲಂಕಾ ಕೂಡ ಕೊನೆಯ ಹಂತದಲ್ಲಿ ಪಂದ್ಯವನ್ನು ಕೈಚೆಲ್ಲಿದ್ದು, ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ. ವನಿಂದು ಹಸರಂಗ, ಮಹೀಶ್ ತೀಕ್ಷಣ ಎರಡನೇ ಪಂದ್ಯದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಬ್ಯಾಟಿಂಗ್ ವಿಭಾಗ ಕೂಡ ಉತ್ತಮವಾಗಿದೆ.

ಎರಡೂ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಭಾರತ : ಇಶಾನ್ ಕಿಶನ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ಸಿ), ದೀಪಕ್ ಹೂಡಾ, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತಾ, ದಿಲ್ಶನ್ ಮಧುಶಂಕ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications