Ind vs SL 2nd t20I: 2ನೇ ಟಿ20 ಪಂದ್ಯದ ಟಾಸ್ ರಿಪೋರ್ಟ್, ಆಡುವ ಬಳಗ ಹಾಗೂ Live ಸ್ಕೋರ್

ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಇಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಆತಿಥೇಯ ಟೀಮ್ ಇಂಡಿಯಾ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಪ್ರವಾಸಿ ಶ್ರೀಲಂಕಾ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಕಾದಾಟ ನಡೆಸಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿ ಸರಣಿ ವಶಕ್ಕೆ ಪಡೆಯುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿರುವ ಪ್ರವಾಸಿ ಶ್ರೀಲಂಕಾದ ಚಿತ್ತ ಸರಣಿ ಸಮಬಲಗೊಳಿಸುವತ್ತ ನೆಟ್ಟಿದೆ.
Live ಸ್ಕೋರ್ ಹೀಗಿದೆ
Rishabh Pant: ರಿಷಬ್ ಪಂತ್‌ಗೆ ಲಂಡನ್‌ನಲ್ಲಿ ನಡೆಯಲಿದೆ ಶಸ್ತ್ರಚಿಕಿತ್ಸೆ : 9 ತಿಂಗಳು ಕ್ರಿಕೆಟ್ ಆಡೋದೆ ಅನುಮಾನ!

ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆ
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಗಾಯಗೊಂಡಿರುವ ಸಂಜು ಸ್ಯಾಮ್ಸನ್ ಸರಣಿಯ ಉಳಿದ ಎರಡು ಪಂದ್ಯಗಳಿಂದಲೂ ಹೊರಬಿದ್ದಿದ್ದಾರೆ. ಹೀಗಾಗಿ ರಾಹುಲ್ ತ್ರಿಪಾಠಿಗೆ ಅವಕಾಶ ದೊರೆತಿದೆ. ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿರುವ ರಾಹುಲ್ ತ್ರಿಪಾಠಿ ಮೊದಲ ಬಾರಿಗೆ ಭಾರತ ತಂಡದ ಜರ್ಸಿ ತೊಡುತ್ತಿದ್ದಾರೆ. ಇನ್ನು ಹರ್ಷಲ್ ಪಟೇಲ್ ಆಡುವ ಬಳಗದಿಂದ ಹೊರಬಿದ್ದಿದ್ದು ಅರ್ಷ್‌ದೀಪ್ ಸಿಂಗ್‌ಗೆ ಅವಕಾಶ ದೊರೆತಿದೆ. ಇನ್ನು ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಸಿದೆ.

ಭಾರತ ಆಡುವ ಬಳಗ
ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಸರ್ ಪಟೇಲ್, ಅರ್ಷ್‌ದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್
ಬೆಂಚ್: ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಮುಖೇಶ್ ಕುಮಾರ್

ಶ್ರೀಲಂಕಾ ಆಡುವ ಬಳಗ
ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ
ಬೆಂಚ್: ಲಹಿರು ಕುಮಾರ, ಅವಿಷ್ಕ ಫೆರ್ನಾಂಡೋ, ಅಶೇನ್ ಬಂಡಾರ, ಪ್ರಮೋದ್ ಮದುಶನ್, ದುನಿತ್ ವೆಳ್ಳಾಲಗೆ, ನುವಾನ್ ತುಷಾರ, ಸದೀರ ಸಮರವಿಕ್ರಮ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications