ಭಾರತ vs ಶ್ರೀಲಂಕಾ, 2ನೇ ಟೆಸ್ಟ್, 109 ರನ್‌ಗಳಿಗೆ ಲಂಕಾ ಆಲೌಟ್: Live ಸ್ಕೋರ್

ಭಾರತ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು 2ನೇ ದಿನದಾಟ ಆರಂಭವಾಗಿದೆ. ಮೊದಲ ದಿನ ಭಾರತ ಸಂಪೂರ್ಣ ಮೇಲುಗೈ ಸಾಧಿಸಿದ್ದು ಶ್ರೀಲಂಕಾ ತಂಡಕ್ಕೆ ಭಾರೀ ಆಘಾತ ನೀಡಿದೆ. ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಿದ್ದು ಕ್ರೀಡಾಂಗಣದಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡಿರುವುದು ವಿಶೇಷತೆಯಾಗಿದೆ.
2ನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶ್ರೀಲಂಕಾ 109 ರನ್‌ಗಳಿಗೆ ಆಲೌಟ್ ಆಗಿದೆ. ಎರಡನೇ ದಿನದ 35ನೇ ಎಸೆತದಲ್ಲಿಯೇ ಶ್ರೀಲಂಕಾ ಅಂತಿಮ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಳ್ಳುವ ಮೂಲಕ ಇನ್ನಿಂಗ್ಸ್‌ಗೆ ಅಂತ್ಯ ಹಾಡಿದೆ. ಈ ಮೂಲ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 143 ರನ್‌ಗಳ ಮುನ್ನಡೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ.
ಇನ್ನು ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿರುವ ಭಾರತ 252 ರನ್‌ಗಳಿಗೆ ಆಲೌಟ್ ಆಗಿದೆ. ಭಾರತದ ಪರವಾಗಿ ಶ್ರೇಯಸ್ ಐಯ್ಯರ್ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದ್ದ ಭಾರತ ಶ್ರೇಯಸ್ ಐಯ್ಯರ್ ಅವರ 92 ರನ್‌ಗಳ ಕೊಡುಗೆಯ ಕಾರಣದಿಂದಾಗಿ ಗೌರವಯುತ ಮೊತ್ತ ಪೇರಿಸಲು ಸಾಧ್ಯವಾಯಿತು.
Live ಸ್ಕೋರ್‌ಕಾರ್ಡ್ ಹೀಗಿದೆ
ಇನ್ನು ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ಆರಂಭದಿಂದಲೇ ಆಘಾತಕ್ಕೆ ಒಳಗಾಗಿದೆ. ಅಗ್ರ ಕ್ರಮಾಂಕದ ಆಟಗಾರರು ಭಾರತದ ಬೌಲಿಂಗ್ ದಾಳಿಗೆ ಸಂಪೂರ್ಣ ಶರಣಾಗಿ ಫೆವಿಲಿಯನ್ ಸೇರಿದರೆ ಎಂಜಲೋ ಮ್ಯಾಥ್ಯೂಸ್ ಮಾತ್ರವೇ ಕೆಲ ಕಾಲ ಭಾರತೀಯ ಬೌಲರ್‌ಗಳನ್ನು ದಿಟ್ಟವಾಗಿ ಎದುರಿಸಿದರು. ಅವರು ಕೂಡ 43 ರನ್‌ಗಳಿಸಿ ಬೂಮ್ರಾಗೆ ವಿಕೆಟ್ ಒಪ್ಪಿಸಿದ್ದಾರೆ. ಮೊದಲ ದಿನದಾಟ ಅಂತ್ಯವಾಗುವ ವೇಳೆಗೆ ಶ್ರೀಲಂಕಾ ತಂಡ 30 ಓವರ್‌ಗಳ ಬ್ಯಾಟಿಂಗ್ ನಡೆಸಿದ್ದು 86 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ.
ಭಾರತದ ಪರವಾಗಿ ಮೊದಲ ದಿನ ವೇಗಿಗಳಾದ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಶಮಿ ಮಿಂಚಿದರು. ಬೂಮ್ರಾ ಮೂರು ವಿಕೆಟ್ ಪಡೆದರೆ ಶಮಿ ಎರಡು ವಿಕೆಟ್ ಸಂಪಾದಿಸಿದ್ದಾರೆ. ಒಂದು ವಿಕೆಟ್ ಅಕ್ಷರ್ ಪಟೇಲ್ ಪಾಲಾಗಿತ್ತು.
ಟೀಮ್ ಇಂಡಿಯಾ ಆಡುವ ಬಳಗ೦: ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ (ನಾಯಕ), ಹನುಮ ವಿಹಾರಿ, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ
ಬೆಂಚ್: ಮೊಹಮ್ಮದ್ ಸಿರಾಜ್, ಶುಭಮನ್ ಗಿಲ್, ಉಮೇಶ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೀಕರ್ ಭರತ್, ಸೌರಭ್ ಕುಮಾರ್, ಜಯಂತ್ ಯಾದವ್
ಶ್ರೀಲಂಕಾ ಆಡುವ ಬಳಗ: ದಿಮುತ್ ಕರುಣಾರತ್ನೆ (ಸಿ), ಲಹಿರು ತಿರಿಮನ್ನೆ, ಕುಸಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ (ವಿಕೆ), ಸುರಂಗ ಲಕ್ಮಲ್, ಲಸಿತ್ ಎಂಬುಲ್ದೇನಿಯ, ವಿಶ್ವ ಫೆರ್ನಾಂಡೋ, ಪ್ರವೀಣ್ ಜಯವಿಕ್ರಮ
ಬೆಂಚ್: ದಿನೇಶ್ ಚಾಂಡಿಮಲ್, ಚಮಿಕಾ ಕರುಣರತ್ನೆ, ಜೆಫ್ರಿ ವಾಂಡರ್ಸೆ, ಲಹಿರು ಕುಮಾರ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications