ಭಾರತ vs ಶ್ರೀಲಂಕಾ 3ನೇ ಟಿ ಟ್ವೆಂಟಿ: ಸಂಭಾವ್ಯ ಆಟಗಾರರ ಪಟ್ಟಿ, ನೇರಪ್ರಸಾರದ ಮಾಹಿತಿ

ಶ್ರೀಲಂಕಾ ಪ್ರವಾಸವನ್ನು ಕೈಗೊಂಡಿರುವ ಶಿಖರ್ ಧವನ್ ನೇತೃತ್ವದ ಟೀಮ್ ಇಂಡಿಯಾ ಲಂಕಾ ವಿರುದ್ಧದ ತನ್ನ ಕೊನೆಯ ಪಂದ್ಯವನ್ನು ಗುರುವಾರದಂದು ಆಡಲಿದೆ. ಈಗಾಗಲೇ ಏಕದಿನ ಸರಣಿಯನ್ನು 2-1 ಅಂತರದಿಂದ ಜಯಿಸಿರುವ ಟೀಮ್ ಇಂಡಿಯಾ ಟಿ ಟ್ವೆಂಟಿ ಸರಣಿಯನ್ನು ಕೈವಶ ಮಾಡಿಕೊಳ್ಳುವತ್ತ ಚಿತ್ತ ನೆಟ್ಟಿದ್ದರೆ, ಅತ್ತ ಶ್ರೀಲಂಕಾ ತಂಡ ಟಿ ಟ್ವೆಂಟಿ ಸರಣಿಯನ್ನಾದರೂ ತನ್ನ ಕೈವಶ ಮಾಡಿಕೊಳ್ಳಬೇಕೆಂದು ಯೋಜನೆಯನ್ನು ಹಾಕುತ್ತಿದೆ.
3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ಮೊದಲನೇ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದ್ದರೆ, ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಶ್ರೀಲಂಕಾ ಜಯಗಳಿಸಿತು. ಹೀಗಾಗಿ ಸರಣಿಯಲ್ಲಿ ಎರಡೂ ತಂಡಗಳು ಸಮಬಲ ಸಾಧಿಸಿದ್ದು ಗುರುವಾರ ನಡೆಯಲಿರುವ ಮೂರನೇ ಟಿ ಟ್ವೆಂಟಿ ಪಂದ್ಯ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ.
ತೃತೀಯ ಟಿಟ್ವೆಂಟಿ ನಡೆಯುವ ಸ್ಥಳ ಮತ್ತು ಸಮಯ: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟಿ ಟ್ವೆಂಟಿ ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಗುರುವಾರ (ಜು.29) ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯ ಎರಡೂ ತಂಡಗಳಿಗೂ ಬಹು ಮುಖ್ಯವಾಗಿರುವ ಕಾರಣ ಎರಡೂ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಡುವುದಂತೂ ಪಕ್ಕಾ. ಹೀಗಾಗಿ ಈ ಪಂದ್ಯದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆಯಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೀಡಾಗುತ್ತಿದೆ.

ಪಂದ್ಯದ ನೇರ ಪ್ರಸಾರದ ಮಾಹಿತಿ
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟ್ವೆಂಟಿ ಪಂದ್ಯ ಸೋನಿ ಲಿವ್, ಸೋನಿ ಟೆನ್ 2 ಮತ್ತು ಸೋನಿ ಟೆನ್ 2 HDಯಲ್ಲಿ ನೇರ ಪ್ರಸಾರವಾಗಲಿದೆ.

ಭಾರತ ಸಂಭಾವ್ಯ ತಂಡ
ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್, ನಿತೀಶ್ ರಾಣಾ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ರಾಹುಲ್ ಚಹರ್, ನವದೀಪ್ ಸೈನಿ, ಚೇತನ್ ಸಕರಿಯಾ, ವರುಣ್ ಚಕ್ರವರ್ತಿ

ಶ್ರೀಲಂಕಾ ಸಂಭಾವ್ಯ ತಂಡ
ಅವಿಷ್ಕಾ ಫರ್ನಾಂಡೊ, ಬಿನೋದ್ ಭನುಕಾ, ಸದೀರಾ ಸಮರವಿಕ್ರಮ, ಧನಂಜಯ ಡಿ ಸಿಲ್ವಾ, ರಮೇಶ್ ಮೆಂಡಿಸ್, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಮಿಕಾ ಕರುಣರತ್ನೆ, ಇಸುರು ಉದಾನ, ದುಷ್ಮಂತ ಚಮೀರಾ, ಅಕಿಲಾ ದನಂಜಯ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications