Ind vs SL 3rd t20I: ಅಂತಿಮ ಟಿ20 ಪಂದ್ಯದ ಟಾಸ್ ರಿಪೋರ್ಟ್, ಆಡುವ ಬಳಗ ಹಾಗೂ Live ಸ್ಕೋರ್

ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಟಿ20 ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಇಂದು ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಆತಿಥೇಯ ಟೀಮ್ ಇಂಡಿಯಾ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಪ್ರವಾಸಿ ಶ್ರೀಲಂಕಾ ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಮೊದಲ ಎರಡು ಪಂದ್ಯಗಳಲ್ಲಿ ಎರಡು ತಂಡಗಳು ಕೂಡ ತಲಾ ಒಂದೊಂದು ಗೆಲುವು ಸಾಧಿಸಿದೆ. ಹೀಗಾಗಿ ಮೂರು ಪಂದ್ಯಗಳ ಈ ಸರಣಿಯಲ್ಲಿ ಇಂದಿನ ಈ ಪಂದ್ಯ ಅತ್ಯಂತ ನಿರ್ಣಾಯಕವಾಗಿದ್ದು ಗೆಲ್ಲುವ ತಂಡ ಸರಣಿಯನ್ನು ತನ್ನ ವಶಕ್ಕೆ ಪಡೆಯಲಿದೆ. ಟೀಮ್ ಇಂಡಿಯಾ ತವರಿನಲ್ಲಿ ಸೋಲಿನ ಮುಖಭಂಗದಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ ಶ್ರೀಲಂಕಾ ಭಾರತದ ನೆಲದಲ್ಲಿ ಚೊಚ್ಚಲ ಟಿ20 ಸರಣಿ ಗೆಲ್ಲುವ ಕನಸು ಕಾಣುತ್ತಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ

ಬದಲಾವಣೆಯಿಲ್ಲದೆ ಕಣಕ್ಕಿಳಿದ ಭಾರತ
ಇನ್ನು ಈ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದೆ. ಕಳೆದ ಪಂದ್ಯದಲ್ಲಿ ಐದು ನೋಬಾಲ್ ಎಸೆದು ಭಾರೀ ಟೀಕೆಗೆ ಗುರಿಯಾಗಿದ್ದ ಅರ್ಶ್‌ದೀಪ್ ಸಿಂಗ್ ಈ ಪಂದ್ಯದಲ್ಲಿ ಮತ್ತೆ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಮತ್ತೊಂದೆಡೆ ಆರಂಭಿಕ ಮೆರಡು ಪಂದ್ಯದಲ್ಲಿ ಇನ್ನಿಂಗ್ಸ್ ಆರಂಭಿಸಿದ್ದ ಶುಬ್ಮನ್ ಗಿಲ್ ಕೂಡ ಪರಿಣಾಮಕಾರಿ ಇನ್ನಿಂಗ್ಸ್ ಆಡುವಲ್ಲಿ ವಿಫಲವಾಗಿದ್ದಾರೆ. ಆದರೆ ಈ ಪಂದ್ಯದಲ್ಲಿ ನಾಯಕ ಗಿಲ್ ಮೇಲೆ ನಂಬಿಕೆಯಿರಿಸಿದ್ದು ಮತ್ತೊಂದು ಅವಕಾಶ ನೀಡಲಾಗಿದೆ. ಋತುರಾಜ್ ಗಾಯಕ್ವಾಡ್ ಮತ್ತೆ ಬೆಂಚ್ ಕಾಯಬೇಕಾಗಿದೆ. ಇನ್ನು ಶ್ರೀಲಂಕಾ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡಿದ್ದು ಭಾನುಕಾ ರಾಜಪಕ್ಸೆ ಬದಲಿಗೆ ಅವಿಷ್ಕಾ ಫರ್ನಾಂಡೋ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಭಾರತ ಆಡುವ ಬಳಗ
ಇಶಾನ್ ಕಿಶನ್(ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಸರ್ ಪಟೇಲ್, ಅರ್ಷ್‌ದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್
ಬೆಂಚ್: ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಹರ್ಷಲ್ ಪಟೇಲ್, ಮುಖೇಶ್ ಕುಮಾರ್

ಶ್ರೀಲಂಕಾ ಆಡುವ ಬಳಗ
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್), ಅವಿಷ್ಕಾ ಫರ್ನಾಂಡೋ, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ
ಬೆಂಚ್: ಲಹಿರು ಕುಮಾರ, ಭಾನುಕಾ ರಾಜಪಕ್ಸೆ,, ಅಶೇನ್ ಬಂಡಾರ, ಪ್ರಮೋದ್ ಮದುಶನ್, ದುನಿತ್ ವೆಳ್ಳಾಲಗೆ, ನುವಾನ್ ತುಷಾರ, ಸದೀರ ಸಮರವಿಕ್ರಮ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications