ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

2ನೇ ಟಿ20 ಮುಂದೂಡಿಕೆ: ಕೊರೊನಾ ಆಘಾತಕ್ಕೆ ಒಳಗಾದ ಇತ್ತೀಚಿನ 5 ಪ್ರಮುಖ ಕ್ರಿಕೆಟ್ ಟೂರ್ನಿಗಳು

India vs Sri lanka: 5 Recent cricket series effected by coronavirus

ಬೆಂಗಳೂರು, ಜುಲೈ 27: ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಗೆ ಕೊರೊನಾವೈರಸ್ ಆಘಾತ ನೀಡಿದೆ. ಭಾರತ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಕೊರೊನಾವೈರಸ್‌ಗೆ ತುತ್ತಾಗಿದ್ದು ಮಂಗಳವಾರ ನಡೆಯಬೇಕಿದ್ದ ಎರಡನೇ ಟಿ20 ಪಂದ್ಯವನ್ನು ಮುಂದೂಡಲಾಗಿದೆ. ಸುಮಾರು 8 ಮಂದಿ ಭಾರತೀಯ ಕ್ರಿಕೆಟಿಗರನ್ನು ಪ್ರತ್ಯೇಕವಾಗಿರಿಲಿಸಲಾಗಿದೆ. ಭಾರತೀಯ ಪಾಳಯದಲ್ಲಿ ಕಾಣಿಸಿಕೊಂಡಿರುವ ಈ ಕೊರೊನಾವೈರಸ್‌ನ ಕಾರಣದಿಂದಾಗಿ ಟಿ20 ಸರಣಿಯ ಅಂತಿಮ ಎರಡು ಪಂದ್ಯಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ.

ಆದರೆ ಬಯೋಬಬಲ್‌ ಪ್ರವೇಶಿಸಿ ಕೊರೊನಾವೈರಸ್ ಕ್ರಿಕೆಟ್ ತಂಡಗಳಲ್ಲಿ ಕಾಣಿಸಿಕೊಳ್ಳುವುದು ಇದೇನು ಮೊದಲಲ್ಲ. ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಕ್ರಿಕೆಟ್ ಟೂರ್ನಿಗಳು ಕೊರೊನಾವೈರಸ್‌ನ ಆಘಾತಕ್ಕೆ ಒಳಗಾಗಿ ಸರಣಿಯಲ್ಲಿ ಬದಲಾವಣೆಯನ್ನು ಮಾಡಿಕೊಳ್ಳಲಾಗಿದೆ.

ಭಾರತ vs ಶ್ರೀಲಂಕಾ: ಕೃನಾಲ್ ಪಾಂಡ್ಯಗೆ ಕೋವಿಡ್-19 ಸೋಂಕುಭಾರತ vs ಶ್ರೀಲಂಕಾ: ಕೃನಾಲ್ ಪಾಂಡ್ಯಗೆ ಕೋವಿಡ್-19 ಸೋಂಕು

ಕೊರೊನಾವೈರಸ್‌ನ ಕಾರಣದಿಂದಾಗಿ ಕ್ರಿಕೆಟ್ ಟೂರ್ನಿಗಳು ಮುಂದೂಡಿಕೆಯಾದ ಇತ್ತೀಚಿನ ಐದು ದೃಷ್ಟಾಂತಗಳು ಇಲ್ಲಿದೆ..

ಪಾಕಿಸ್ತಾನ ಸೂಪರ್ ಲೀಗ್ 2021

ಪಾಕಿಸ್ತಾನ ಸೂಪರ್ ಲೀಗ್ 2021

ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಡೆಸುವ ಪಾಕಿಸ್ತಾನ ಸೂಪರ್ ಲೀಗ್ ಈ ಬಾರಿ ಆರನೇ ಆವೃತ್ತಿಯನ್ನು ಆಡಿದೆ. ಈ ಟೂರ್ನಿ ಕೂಡ ಕೊರೊನಾವೈರಸ್‌ನ ಆಘಾತಕ್ಕೆ ಒಳಗಾಗಿತ್ತು. ಒಂದು ವಾರದ ಅಂತರದಲ್ಲಿ ಏಳು ಮಂದಿ ಕೊರೊನಾವೈರಸ್‌ಗೆ ಒಳಗಾದರು. ಈ ಹಿನ್ನೆಲೆಯಲ್ಲಿ ಟೂರ್ನಿಯನ್ನು ಮುಂದುಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ 2021

ಇಂಡಿಯನ್ ಪ್ರೀಮಿಯರ್ ಲೀಗ್ 2021

ಬಿಸಿಸಿಐ ನಡೆಸುವ ಇಂಡಿಯನ್ ಪ್ರೀಮಿಯರ್ ಲೀಗ್ ಕೂಡ ಈ ಬಾರಿ ಕೊರೊನಾವೈರಸ್‌ನಿಂದ ಆಘಾತಕ್ಕೆ ಒಳಗಾಗಿದೆ. ಟೂರ್ನಿ ಸರಿಯಾಗಿ ಅರ್ಧದಷ್ಟು ಪೂರ್ಣಗೊಂಡಿದ್ದ ಸಂದರ್ಭದಲ್ಲಿ ಬಯೋಬಬಲ್‌ನಲ್ಲಿ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಲು ಆರಂಭಿಸಿತ್ತು. ಹೀಗಾಗಿ ಬಿಸಿಸಿಐ ಅನಿವಾರ್ಯವಾಗಿ ಟೂರ್ನಿಯನ್ನು ಮುಂದೂಡುವ ನಿರ್ಧಾರವನ್ನು ಪ್ರಕಟಿಸಿತು. ಐಪಿಎಲ್‌ನ ಉಳಿದ ಪಂದ್ಯಗಳನ್ನು ಐಪಿಎಲ್ ಟೂರ್ನಿಯನ್ನು ಯುಎಇನಲ್ಲಿ ನಡೆಸಲು ಉದ್ದೇಶಿಸಲಾಗಿದ್ದು ವೇಳಾಪಟ್ಟಿ ಕೂಡ ಬಿಡುಗಡೆಯಾಗಿದೆ.

ಪಾಕಿಸ್ತಾನ vs ಇಂಗ್ಲೆಂಡ್

ಪಾಕಿಸ್ತಾನ vs ಇಂಗ್ಲೆಂಡ್

ಅಂತಾರಾಷ್ಟ್ರೀಯ ದ್ವಿಪಕ್ಷೀಯ ಟೂರ್ನಿಗಳಿಗೂ ಕೊರೊನಾವೈರಸ್ ಸಾಕಷ್ಟು ಆಘಾತವನ್ನು ನೀಡಿದೆ. ಇಂಗ್ಲೆಂಡ್ ವಿರುದ್ಧ ಇಂಗ್ಲೆಂಡ್ ನೆಲದಲ್ಲಿ ನಡೆದ ಸೀಮಿತ ಓವರ್‌ಗಳ ಸರಣಿಯಲ್ಲಿಯೂ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗಿತ್ತು. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾಗಿಯಾಗಿದ್ದ ಇಂಗ್ಲೆಂಡ್ ತಂಡದಲ್ಲಿ ಕೊರೊನಾವೈರಸ್‌ಗೆ ತುತ್ತಾಗಿತ್ತು. ಹೀಗಾಗಿ ಕೊನೆಯ ಕ್ಷಣದಲ್ಲಿ ಪಾಕಿಸ್ತಾನ ವಿರುದ್ಧದ ಸರಣಿಗೆ ಸಂಪೂರ್ಣ ಹೊಸ ತಂಡವನ್ನು ಆಯ್ಕೆ ಮಾಡಲಾಯಿತು. ಬೆನ್ ಸ್ಟೋಕ್ಸ್ ನೇತೃತ್ವದಲ್ಲಿ ಇಂಗ್ಲೆಂಡ್ ಹೊಸ ಆಟಗಾರರ ತಂಡದೊಂದಿಗೆ ನಿಗದಿತ ವೇಳಾಪಟ್ಟಿಯಂತೆಯೇ ಕಣಕ್ಕಿಳಿದಿತ್ತು.

ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ಸರಣಿ

ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ಸರಣಿ

ಕೆಲವೇ ದಿನಗಳ ಹಿಂದೆ ಕೊರೊನಾವೈರಸ್‌ನ ಕಾರಣದಿಂದಾಗಿ ಏಕದಿನ ಸರಣಿಯ ದ್ವಿತೀಯ ಪಂದ್ಯ ಅಂತಿಮ ಕ್ಷಣದಲ್ಲಿ ಮುಂದೂಡಿಕೆಯಾಗಿತ್ತು. ಬಾರ್ಬಡೋಸ್‌ನಲ್ಲಿ ಆಯೋಜನೆಯಾಗಿದ್ದ ಪಂದ್ಯದಲ್ಲಿ ಟಾಸ್ ಪ್ರಕ್ರಿಯೆ ಕೂಡ ಅಂತ್ಯವಾಗಿತ್ತು. ಆದರೆ ವೆಸ್ಟ್ ಇಂಡಿಸ್ ಕ್ರಿಕೆಟ್ ತಂಡದ ಸಿಬ್ಬಂದಿಯೊಬ್ಬರು ಕೊರೊನಾವೈರಸ್‌ಗೆ ತುತ್ತಾಗಿದ್ದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಪಂದ್ಯವನ್ನು ಮುಂದೂಡಲಾಗಿತ್ತು.

ಭಾರತ ತಂಡದ ಪ್ರಮುಖ ಆಟಗಾರರು ಎರಡನೇ ಪಂದ್ಯದಿಂದ ಆಚೆ | Oneindia Kannada
ಭಾರತ ಹಾಗೂ ಶ್ರೀಲಂಕಾ ಸರಣಿ

ಭಾರತ ಹಾಗೂ ಶ್ರೀಲಂಕಾ ಸರಣಿ

ಭಾರತ ಹಾಗೂ ಶ್ರೀಲಂಕಾ ಸರಣಿ ಕೊರೊನಾವೈರಸ್‌ನ ಕಾರಣದಿಂದಾಗಿ ಎರಡೆರಡು ಬಾರಿ ಮುಂದೂಡಿಕೆಯಾಗಿದೆ. ಆರಂಭದಲ್ಲಿ ಇಂಗ್ಲೆಂಡ್ ಪ್ರವಾಸವನ್ನು ಮುಗಿಸಿ ಬಂದ ಶ್ರೀಲಂಕಾ ತಂಡದ ಸಿಬ್ಬಂದಿಗಳು ಕೊರೊನಾವೈರಸ್‌ಗೆ ತುತ್ತಾಗಿದ್ದರು. ಹೀಗಾಗಿ ಸುಮಾರು ಐದು ದಿನಗಳ ಕಾಲ ವಿಳಂಬವಾಗಿ ಸರಣಿಯನ್ನು ಆರಂಭಿಸಲಾಗಿತ್ತು. ಈಗ ಟಿ20 ಸರಣಿಯ ದ್ವಿತೀಯ ಪಂದ್ಯಕ್ಕೆ ಕೆಲವೇ ಗಂಟೆಗಳ ಮುನ್ನ ಭಾರತೀಯ ತಮಡದ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಕೊರೊನಾವೈರಸ್‌ಗೆ ತುತ್ತಾಗಿರುವುದು ತಿಳಿದುಬಂದಿದೆ. ಹೀಗಾಗಿ ಸರಣಿಯ ಅಂತಿಮ ಎರಡು ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

Story first published: Tuesday, July 27, 2021, 19:03 [IST]
Other articles published on Jul 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X