ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಶ್ರೀಲಂಕಾ: ಎಲ್ಲಾ ಪಂದ್ಯಗಳಿಯೂ ಪ್ರೇಮದಾಸ ಸ್ಟೇಡಿಯಂ ಆತಿಥ್ಯ

India vs Sri Lanka: All Matches to be Played in Colombos R. Premadasa Stadium

ಜುಲೈ ತಿಂಗಳಿನಲ್ಲಿ ಭಾರತ ತಂಡ ಶ್ರೀಲಂಕಾಗೆ ತೆರಳಿ ಏಕದಿನ ಸರಣಿಯಲ್ಲಿ ಭಾಗಿಯಾಗಲಿದೆ. ಈ ಸರಣಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಈಗ ತಾಣವನ್ನು ಕೂಡ ಗುರುತು ಮಾಡಿದೆ. ಕೊರೊನಾ ವೈರಸ್‌ನ ಬೀತಿಯ ನಡುವೆ ಎಲ್ಲಾ ಪಂದ್ಯಗಳನ್ನು ಕೂಡ ಒಂದೇ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗುತ್ತದೆ.

ಕೊಲಂಬೋದ ಪ್ರೇಮದಾಸ ಕ್ರೀಡಾಂಗಣ ಭಾರತ ಹಾಗೂ ಶ್ರೀಲಂಕಾ ನಡುವಿನ ಸೀಮಿತ ಓವರ್‌ಗಳ ಸರಣಿಗೆ ವೇದಿಕೆಯಾಗಲಿದೆ. ಎಲ್ಲಾ ಪಂದ್ಯಗಳು ಕೂಡ ಮುಚ್ಚಿದ ಕ್ರೀಡಾಂಗಣದಲ್ಲಿ ಆಯೋಜನೆ ಮಾಡುವ ನಿರ್ಧಾರವನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ ತೆಗೆದುಕೊಂಡಿದೆ.

ಯುಎಇಯಲ್ಲಿ ಪಿಎಸ್‌ಎಲ್ ನಡೆಸುವ ಪಾಕಿಸ್ತಾನ್ ಯೋಜನೆಗೆ ತಣ್ಣೀರು!ಯುಎಇಯಲ್ಲಿ ಪಿಎಸ್‌ಎಲ್ ನಡೆಸುವ ಪಾಕಿಸ್ತಾನ್ ಯೋಜನೆಗೆ ತಣ್ಣೀರು!

ಶ್ರೀಲಂಕಾ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥ ಅರ್ಜುನ ಡಿಸಿಲ್ವ ಸ್ಪೋರ್ಟ್ ಸ್ಟಾರ್‌ಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. "ಇಡೀ ಟೂರ್ನಿಯನ್ನು ನಾವು ಒಂದೇ ತಾಣದಲ್ಲಿ ಆಯೋಜನೆ ಮಾಡಲು ನಿರ್ಧರಿಸಿದ್ದೇವೆ. ಈವರೆಗಿನ ಚರ್ಚೆಯ ಪ್ರಕಾರ ನಾವು ಈ ಸರಣಿಯನ್ನು ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಆಯೋಜನೆ ಮಾಡುವ ತೀರ್ಮಾನ ಮಾಡಿದ್ದೇವೆ. ಆದರೆ ಇದು ಪರಿಸ್ಥಿತಿ ಹೇಗೆ ಮುಂದುವರಿಯುತ್ತದೆ ಎಂಬುದರ ಮೇಲೆ ನಿರ್ಧರಿತವಾಗುತ್ತದೆ" ಎಂದು ಡಿಸಿಲ್ವ ಹೇಳಿದ್ದಾರೆ.

ಈಗಿನ ವರದಿಯ ಪ್ರಕಾರ ವಿರಾಟ್ ಕೊಹ್ಲಿ ಹೊರತಾದ ಭಾರತ ತಂಡ ಜುಲೈ 5 ರಂದು ಶ್ರೀಲಂಕಾಗೆ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ. ಜುಲೈ 13, 16 ಮತ್ತು 19ರಂದು ಏಕದಿನ ಪಂದ್ಯಗಳನ್ನು ಆಡಿ ನಂತರ ಮೂರು ಪಂದ್ಯಗಳ ಟಿ20 ಸರಣಿ ಜುಲೈ 22, 24 ಹಾಗೂ 27ರಂದು ನಡೆಯುವ ಸಂಭವವಿದೆ.

Story first published: Tuesday, May 11, 2021, 10:46 [IST]
Other articles published on May 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X